ಬಂಗಾರಪೇಟೆ: ತಾಲ್ಲೂಕಿನ ಕಾಮಸಮುದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಳಚಮಂದೆ ಗ್ರಾಮದ 32 ಎಕರೆ ವಿಸ್ತೀರ್ಣದ ಕೆರೆಯ ಆವರಣದಲ್ಲಿ ವಾರದಿಂದ ಬೃಹತ್ ನಿರ್ಮಾಣ ಯಂತ್ರ ಮತ್ತು ಟ್ರಾಕ್ಟರ್ಗಳ ಓಡಾಟ ನಡೆಯುತ್ತಿದೆ.

ಬೆಂಗಳೂರಿನ ಉದ್ಯಮಿಯೊಬ್ಬರು ಕೆರೆ ಪಕ್ಕದಲ್ಲಿ ನಿರ್ಮಿಸುತ್ತಿರುವ ಬಡಾವಣೆಗೆ ಕೆರೆಯ ಒಡಲಿನಿಂದ ಮಣ್ಣು ತೆಗೆಯುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಈ ಬಗ್ಗೆ ಸಂಬಂಧಪಟ್ಟ ಕಂದಾಯ ಇಲಾಖೆ ಮತ್ತು ಪಂಚಾಯಿತಿ ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ಪ್ರಯೋಜನವಾಗಿಲ್ಲ. ಹಗಲು, ರಾತ್ರಿ ಮಣ್ಣು ಸಾಗಿಸುತ್ತಿದ್ದರೂ ಅಧಿಕಾರಿಗಳು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿಲ್ಲ ಎಂದು ಯಳಚಮಂದೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನೂರು ಲೋಡ್ ಮಣ್ಣು ತೆಗೆಯಲು ಅನುಮತಿ ನೀಡಲಾಗಿದೆ. ಅನುಮತಿ ನೀಡಿರುವುದಕ್ಕಿಂತ ಹೆಚ್ಚಿನ ಮಣ್ಣು ತೆಗೆಯಲಾಗುತ್ತಿದೆಯೇ ಅಥವಾ ಕೆರೆ ಜಾಗ ಒತ್ತುವರಿ ಮಾಡಲಾಗುತ್ತಿದೆಯೇ ಎಂಬುದನ್ನು ಪರಿಶೀಲಿಸಲಾಗುವುದು. ಒಂದು ವೇಳೆ ನಿಯಮ ಉಲ್ಲಂಘನೆ ಕಂಡು ಬಂದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕಾಮಸಮುದ್ರ ಗ್ರಾಮ ಪಂಚಾಯಿತಿ ಪಿಡಿಒ ಮಧುಚಂದ್ರ ಹೇಳಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260409-18-1439759357

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.