ಕೋಲಾರ: ಕೋಲಾರ–ಚಿಕ್ಕ ಬಳ್ಳಾಪುರ ಕಾರ್ಯನಿರತ ಪತ್ರಕರ್ತರ ವಿವಿಧೋದ್ದೇಶ ಸಹಕಾರ ಸಂಘದ ಆಶ್ರಯದಲ್ಲಿ ಷೇರುದಾರ ಸದಸ್ಯ ಪತ್ರಕರ್ತರಿಗೆ ಯಶಸ್ವಿನಿ ವಿಮಾ ಕಾರ್ಡ್ಗಳನ್ನು ಶಾಸಕ ಕೊತ್ತೂರು ಮಂಜುನಾಥ್ ವಿತರಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಪತ್ರಕರ್ತರಿಗೆ ಸಮಾಜದಲ್ಲಿ ಹೆಚ್ಚಿನ ಜವಾಬ್ದಾರಿ ಇದೆ. ಪೂರ್ವಾಗ್ರಹ ಪೀಡಿತ ವರದಿ ಮಾಡದೇ ನಮ್ಮಿಂದಾಗುವ ತಪ್ಪುಗಳನ್ನು ಎತ್ತಿ ತೋರಿಸಿ ಜನಪರವಾಗಿ ಮತ್ತಷ್ಟು ವೇಗವಾಗಿ ಕೆಲಸ ಮಾಡಲು ಮಾರ್ಗದರ್ಶನ ನೀಡಿ’ ಎಂದರು.

ಪತ್ರಕರ್ತರ ಸಹಕಾರ ಸಂಘಕ್ಕೆ ಸಿಎ ನಿವೇಶನ ಒದಗಿಸುವ ಭರವಸೆ ನೀಡಿದ ಅವರು, ನಿವೇಶನಕ್ಕಾಗಿ ಜಮೀನು ನೀಡಲು ಇರುವ ಕಾನೂನಿನ ಸಾಧಕ ಬಾಧಕಗಳ ಕುರಿತು ಚರ್ಚಿವುದಾಗಿ ತಿಳಿಸಿದರು.

ವಿಧಾನಪರಿಷತ್ ಸದಸ್ಯ ಎಂ.ಎಲ್.ಅನಿಲ್ ಕುಮಾರ್ ಮಾತನಾಡಿ, ‘ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರಕರ್ತರ ಪಿಂಚಣಿ ಏರಿಕೆ ಮಾಡಿದ್ದಾರೆ, ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ನೀಡಿದ್ದಾರೆ. ಯಶಸ್ವಿನಿ ವಿಮಾ ಯೋಜನೆಯನ್ನು ಎಸ್.ಎಂ.ಕೃಷ್ಣ ಸರ್ಕಾರ ಜಾರಿಗೆ ತಂದದ್ದು’ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಕೆ.ಎಸ್.ಗಣೇಶ್, ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಕೆ.ಚಂದ್ರಶೇಖರ್ ಮಾತನಾಡಿದರು.

ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಎ.ಜಿ.ಸುರೇಶ್ಕುಮಾರ್, ಖಜಾಂಚಿ ರಾಜೇಂದ್ರ ಸಿಂಹ, ಸಹಕಾರ ಸಂಘದ ಉಪಾಧ್ಯಕ್ಷ ಅಬ್ಬಣಿ ಶಂಕರ್, ಕೋಮುಲ್ ನಿರ್ದೇಶಕ ಚಂಜಿಮಲೆ ರಮೇಶ್, ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳ ಸಂಪಾದಕರ ಸಂಘದ ಅಧ್ಯಕ್ಷ ಎಚ್.ಎನ್.ಮುರಳಿಧರ್, ರಾಜ್ಯ ಅಲ್ಪಸಂಖ್ಯಾತರ ಪತ್ರಿಕಾ ಸಂಪಾದಕರ ಸಂಘದ ಅಧ್ಯಕ್ಷ ಎ.ಸದಾನಂದ, ಸಹಕಾರ ಸಂಘದ ಕಾರ್ಯದರ್ಶಿ ಬಿ.ಎಸ್.ಗಂಗಾಧರ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-18-854208954

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.