ಕೋಲಾರ: ಮಾಲೂರು ತಾಲ್ಲೂಕಿನಲ್ಲಿ ತಹಶೀಲ್ದಾರ್ ಆಪ್ತ ಸಹಾಯಕ (ಪಿಎ) ಎಂದು ಪರಿಚಯಿಸಿಕೊಂಡು ಹಣ ಪಡೆದು ವಂಚಿಸಿದ್ದ ಆರೋಪಿಯನ್ನು ಮಾಲೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ಆನೇಕಲ್ ನಗರದ ಬ್ಯಾಡರಪೇಟೆ ನಿವಾಸಿ ಮುಬಾರಕ್ (34) ಬಂಧಿತ ಆರೋಪಿ.

ಮಾಲೂರು ತಾಲ್ಲೂಕಿನ ತೊರಲಕ್ಕಿ ಗ್ರಾಮದ ಜಹಿರುದ್ದೀನ್ ಎಂಬುವರು ನ.3ರಂದು ತಮ್ಮ ಜಮೀನಿನ ದಾಖಲೆ ಸರಿ ಮಾಡಿಸಿಕೊಳ್ಳಲು ತಾಲ್ಲೂಕು ಕಚೇರಿಗೆ ಬಂದಿದ್ದಾರೆ. ಈ ವೇಳೆ ಆರೋಪಿಯು ತಾನು ತಹಶೀಲ್ದಾರ್ ಆಪ್ತ ಸಹಾಯಕ ಎಂದು ಪರಿಚಯಿಸಿಕೊಂಡಿದ್ದಾನೆ. ಕೆಲಸ ಮಾಡಿಕೊಡುವುದಾಗಿ ₹ 1.5 ಲಕ್ಷ ಪಡೆದು ಮೋಸ ಮಾಡಿದ್ದಾನೆ. ಈ ಸಂಬಂಧ ಜಹಿರುದ್ದೀನ್ ಡಿ.10ರಂದು ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಮಾಲೂರು ಠಾಣೆ ಪೊಲೀಸರು ತಿಳಿಸಿದ್ದಾರೆ.

ಈ ಪ್ರಕರಣದ ಪತ್ತೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ., ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ರವಿಶಂಕರ್, ಜಗದೀಶ್ ಹಾಗೂ ಡಿವೈಎಸ್ಪಿ ಎಂ.ಎಚ್.ನಾಗ್ತೆ ಮಾರ್ಗದರ್ಶನದಲ್ಲಿ ಇನ್ಸ್ಪೆಕ್ಟರ್ ರಾಮಪ್ಪ ಬಿ.ಗುತ್ತೇರ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು. ತಂಡದಲ್ಲಿದ್ದ ಪಿಎಸ್ಐ ಗೀತಮ್ಮ, ಸಿಬ್ಬಂದಿ ಎಎಸ್ಐ ನಾಗರಾಜ್, ಕುಮಾರ್ ಕಾರ್ಯಪ್ರವೃತ್ತರಾಗಿ ಬೆಂಗಳೂರಿನ ಸರ್ಜಾಪುರ ಬಳಿ ಆರೋಪಿಯನ್ನು ಬಂಧಿಸಿದ್ದಾರೆ.

ಆರೋಪಿಯಿಂದ ₹ 1.5 ಲಕ್ಷ ವಶಪಡಿಸಿಕೊಂಡಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದ ಅಧಿಕಾರಿ ಮತ್ತು ಸಿಬ್ಬಂದಿ ಕಾರ್ಯವನ್ನು ಎಸ್ಪಿ ನಿಖಿಲ್ ಶ್ಲಾಘಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.