ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಳಬಾಗಿಲು: ಚುನಾವಣಾ ಕರ್ತವ್ಯಕ್ಕೆ 1,700 ಸಿಬ್ಬಂದಿ

Published 25 ಏಪ್ರಿಲ್ 2024, 14:01 IST
Last Updated 25 ಏಪ್ರಿಲ್ 2024, 14:01 IST
ಅಕ್ಷರ ಗಾತ್ರ

ಮುಳಬಾಗಿಲು: ಲೋಕಸಭಾ ಚುನಾವಣೆಯ ಮತದಾನ ಕೇಂದ್ರದಲ್ಲಿ ಕರ್ತವ್ಯ ನಿರ್ವಹಣೆಗೆ 1,700 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಗ್ರೇಡ್ 2 ತಹಶೀಲ್ದಾರ್ ಬಿ.ಆರ್.ಮುನಿವೆಂಕಟಪ್ಪ ತಿಳಿಸಿದರು.

ತಾಲ್ಲೂಕಿನಲ್ಲಿ ಒಟ್ಟು 2,22,404 ಮತದಾರರಿದ್ದು, ಒಟ್ಟು 264 ಮತದಾನ ಕೇಂದ್ರಗಳಲ್ಲಿ ಮತದಾನ ನಡೆಯಲಿದೆ. ಎಲ್ಲಾ ಮತದಾನ ಕೇಂದ್ರಗಳಲ್ಲಿ ಸಿಬ್ಬಂದಿ ಕರ್ತವ್ಯ ನಿರ್ವಹಿಸಲು ಸಾರಿಗೆ ಹಾಗೂ ಮೂಲ‌ ಸೌಕರ್ಯ ಒದಗಿಸಲಾಗಿದೆ ಎಂದು ತಿಳಿಸಿದರು.

ಮತದಾನ ಕರ್ತವ್ಯಕ್ಕೆ ತೆರಳುವ ಸಿಬ್ಬಂದಿಗೆ ನಗರದ ಸರ್ಕಾರಿ ಬಾಲಕರ ಕಾಲೇಜಿನಿಂದ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಅವರು ಅಲ್ಲಿಂದ ಕರ್ತವ್ಯಕ್ಕೆ ತೆರಳಿದರು. ಮಧ್ಯಾಹ್ನ ಸಿಬ್ಬಂದಿಗೆ ಊಟದ ವ್ಯವಸ್ಥೆಯನ್ನು ಮಾಡಲಾಗಿತ್ತು. ಸಿಬ್ಬಂದಿ ತಮ್ಮ ನಿಯೋಜಿತ ಕೇಂದ್ರಗಳಿಗೆ ತೆರಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT