ಮಂಗಳವಾರ, 25 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಮುಳಬಾಗಿಲು | ಅಪಘಾತ: ವ್ಯಕ್ತಿ ಸಾವು

Published 28 ಮೇ 2024, 15:26 IST
Last Updated 28 ಮೇ 2024, 15:26 IST
ಅಕ್ಷರ ಗಾತ್ರ

ಮುಳಬಾಗಿಲು: ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 75ರ ಹಳೆಕುಪ್ಪ ಗ್ರಾಮದ ಬಳಿ ಮಂಗಳವಾರ ಎರಡು ದ್ವಿಚಕ್ರ ವಾಹನಗಳು ಮುಖಾಮುಖಿಯಾಗಿ ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಮುಳಬಾಗಿಲು ತಾಲ್ಲೂಕಿನ ಬಾಚಮಾಕಲಹಳ್ಳಿ ಗ್ರಾಮದ ರವಿ (35) ಮೃತರು. ಅವರಿಗೆ ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದಾರೆ.

ಮೃತ ವ್ಯಕ್ತಿ ಮುಳಬಾಗಿಲು ಕಡೆಯಿಂದ ನಂಗಲಿ ಕಡೆಗೆ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದರೆ, ಅದೇ ರಸ್ತೆಗೆ ವಿರುದ್ಧವಾಗಿ ಮತ್ತೊಂದು ದ್ವಿಚಕ್ರ ವಾಹನ ತೊಂಡಹಳ್ಳಿ ಕಡೆಗೆ ಹೋಗುವಾಗ ಪರಸ್ಪರ ಒಂದಕ್ಕೊಂದು ಡಿಕ್ಕಿ ಹೊಡೆದುಕೊಂಡಿವೆ. ಇದರಿಂದ ರವಿ ಸ್ಥಳದಲ್ಲಿಯೇ ಸಾವನ್ನಪ್ಪಿದರೆ, ಮತ್ತೊಂದು ವಾಹನದಲ್ಲಿದ್ದ ಮೂರು ಮಂದಿಗೆ ಗಂಭೀರವಾದ ಗಾಯಗಳಾಗಿವೆ. ಗಾಯಾಳುಗಳನ್ನು ಕೋಲಾರದ ಜಾಲಪ್ಪ ಆಸ್ಪತ್ರೆಗೆ ಸಾಗಿಸಲಾಗಿದೆ.

ನಂಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT