ಸೋಮವಾರ, 17 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈತ್ರಿ ಅಭ್ಯರ್ಥಿ ಗೆಲುವು ಸಂತಸ ತಂದಿದೆ: ಎ.ಮಂಜುನಾಥ್‌

Published 5 ಜೂನ್ 2024, 7:08 IST
Last Updated 5 ಜೂನ್ 2024, 7:08 IST
ಅಕ್ಷರ ಗಾತ್ರ

ಮಾಗಡಿ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಅವರ ಗೆಲುವಿಗೆ ಶ್ರಮಿಸಿದ ಎಲ್ಲಾ ಮತದಾರರಿಗೂ ಧನ್ಯವಾದಗಳು ಎಂದು ಮಾಜಿ ಶಾಸಕ ಎ.ಮಂಜುನಾಥ್‌ ತಿಳಿಸಿದರು.

ಪಟ್ಟಣದ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಅಭ್ಯರ್ಥಿ ಸಿ.ಎನ್.ಮಂಜುನಾಥ್ ಗೆಲುವಿಗೆ ಕ್ಷೇತ್ರದ ಕಾರ್ಯಕರ್ತರು ಬೂತ್ ಮಟ್ಟದ ಉತ್ತಮ ರೀತಿಯ ಕೆಲಸ ಮಾಡಿದ ಪರಿಣಾಮ ವಿಜೇತರಾಗಿದ್ದಾರೆ. ವಿಧಾನಸಭಾ ಚುನಾವಣೆಯ ಸೋಲು ನೋವು ತಂದಿತ್ತು, ಈ ಲೋಕಸಭಾ ಚುನಾವಣೆಯ ಗೆಲುವು ಸಂತಸ ತಂದಿದೆ. ಇದಕ್ಕೆ ಶ್ರಮಿಸಿದ ಎಲ್ಲರಿಗೂ ಅಭಿನಂದನೆಗಳು ಎಂದರು.

ಮತದಾರರು ವಿರೋಧಿಗಳ ತೋಳ್ಬಲ, ಹಣ ಬಲ ಹಾಗೂ ಗ್ಯಾರಂಟಿ ಯೋಜನೆಗಳಿಗೆ ಮುನ್ನಣೆ ನೀಡದೆ ನಿಷ್ಠಾವಂತ ಅಭ್ಯರ್ಥಿಯನ್ನು ಗೆಲ್ಲಿಸಿದ್ದಾರೆ. ಡಿ.ಕೆ.ಸುರೇಶ್ ಮೈತ್ರಿ ಅಭ್ಯರ್ಥಿಗೆ ಶಕ್ತಿ ಸಾಮರ್ಥ್ಯ ಇಲ್ಲ ಎಂದು ಅಂದುಕೊಂಡಿದ್ದರು. ಅದಕ್ಕೆ ಇಂದು ದೊಡ್ಡ ಮಟ್ಟದಲ್ಲಿ ಸೋಲು ಅನುಭವಿಸಿದ್ದಾರೆ. ಈ ಚುನಾವಣೆಯಲ್ಲಿ ನಮ್ಮ ಸಾಮರ್ಥ್ಯವನ್ನು ನಾವು ತೋರಿಸಿದ್ದೇವೆ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT