ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕೋಲಾರ| ‘ಮಾದಿಗ ಸಮುದಾಯ ಒಗ್ಗಟ್ಟಾಗಬೇಕು’

Published 6 ಡಿಸೆಂಬರ್ 2023, 14:34 IST
Last Updated 6 ಡಿಸೆಂಬರ್ 2023, 14:34 IST
ಅಕ್ಷರ ಗಾತ್ರ

ವೇಮಗಲ್‌ (ಕೋಲಾರ): ವೇಮಗಲ್ ಹೋಬಳಿ ಮಾದಿಗ ಸಮುದಾಯದ ಮುಖಂಡರ ತುರ್ತು ಸಭೆಯನ್ನು ಪಟ್ಟಣ ಪಂಚಾಯಿತಿ ವ್ಯಾಪ್ತಿಯ ರಂಗಮಂದಿರದಲ್ಲಿ ಮಂಗಳವಾರ ಆಯೋಜಿಸಲಾಗಿತ್ತು.

‘ಸದಾಶಿವ ಆಯೋಗ ವರದಿಯನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಕ್ಕೆ ಈಗಾಗಲೇ ಮನವಿ ಸಲ್ಲಿಸಲಾಗಿದೆ. ಅನುಷ್ಠಾನಕ್ಕೆ ಆಗ್ರಹಿಸಿ ಈಗಾಗಲೇ ಹೈದರಾಬಾದ್‌ನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಜಾರಿ ಸಂಬಂಧ ಪ್ರಧಾನಿ ಮೋದಿ ಕೂಡ ಭರವಸೆ ನೀಡಿದ್ದಾರೆ’ ಎಂದು ಸಭೆಯಲ್ಲಿ ಮುಖಂಡರು ತಿಳಿಸಿದರು.

‘ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಎಲ್ಲಾ ಮಾದಿಗ ಸಮುದಾಯಗಳು ಒಗ್ಗಟ್ಟಾಗಿ ಮುನ್ನಡೆಯಬೇಕಿದೆ’ ಎಂದರು.

ಕೋಲಾರ ಜಿಲ್ಲಾ ಮಾದಿಗ ದಂಡೋರ ಜಿಲ್ಲಾ ಅಧ್ಯಕ್ಷ ಹಾಲೇರಿ ಮುನಿರಾಜು, ಸಾಹುಕಾರ ಶಂಕ್ರಪ್ಪ, ಚನ್ನಸಂದ್ರ ವೆಂಕಟೇಶಪ್ಪ, ಮುನಿರಾಜು, ದಿನ್ನೆಹೊಸಳ್ಳಿ ಅಂಜಿ, ಚೋಳಘಟ್ಟ ಅಶ್ವತ್ಥ್‌, ಬೆಳ್ಳೂರು ನರಸಿಂಹ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT