ಕೋಲಾರ: 2023ನೇ ಸಾಲಿನ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ವ್ಯಾಪ್ತಿಗೆ ಜಿಲ್ಲೆಯ ಅಧೀನದ ಎಲ್ಲಾ ತಾಲ್ಲೂಕುಗಳಾದ ಬಂಗಾರಪೇಟೆ, ಕೆ.ಜಿ.ಎಫ್. ಕೋಲಾರ, ಮಾಲೂರು, ಮುಳಬಾಗಿಲು ಮತ್ತು ಶ್ರೀನಿವಾಸಪುರ ತಾಲ್ಲೂಕುಗಳನ್ನು ಒಳಪಡಿಸಲಾಗಿದೆ.
ಈ ಯೋಜನೆಯಡಿ ಮಾವು ಬೆಳೆಗೆ ಪ್ರತಿ ಹೆಕ್ಟೇರ್ ವಿಮಾ ಮೊತ್ತ ₹ 80,000 ಆಗಿದ್ದು, ರೈತರು ಪಾವತಿಸಬೇಕಾದ ವಿಮಾ ಕಂತಿನ ಶೇ 5 ಮೊತ್ತ ₹ 4,000 ಆಗಿರುತ್ತದೆ.
ಜಿಲ್ಲೆಯಲ್ಲಿ ಬೆಳೆ ಸಾಲಪಡೆದ ರೈತರು ಹಾಗೂ ಸಾಲಪಡೆಯದ ರೈತರು ನೋಂದಣಿ ಮಾಡಿಕೊಳ್ಳಬಹುದಾಗಿದೆ. ಆಯಾ ತಾಲ್ಲೂಕಿಗೆ ಸಂಬಂಧಪಟ್ಟ ವಿಮೆ ಮಾಡಿಸಲು ಇಚ್ಛಿಸುವ ರೈತರು ನಿಗದಿತ ಅರ್ಜಿಯೊಂದಿಗೆ ಪಹಣಿ, ಬ್ಯಾಂಕ್ ಖಾತೆ ಪಾಸ್ ಪುಸ್ತಕ, ಆಧಾರ್ ಜೆರಾಕ್ಸ್ ಪ್ರತಿ ಮತ್ತು ಸ್ವಯಂ ಘೋಷಿತ ಬೆಳೆ ವಿವರಗಳನ್ನು ಲಗತ್ತಿಸಿ ತಾವು ಖಾತೆ ಹೊಂದಿರುವ ಯಾವುದಾದರೂ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಅಥವಾ ಪಂಚಾಯತ್ ಮಟ್ಟದಲ್ಲಿರುವ ಗ್ರಾಮ ಒನ್ ಕೇಂದ್ರಗಳಲ್ಲಿ ಅಥವಾ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ RWBCIS ವಿಮೆ ಯೋಜನೆಯಡಿ ಜುಲೈನೊಳಗೆ ನೋಂದಾಯಿಸಿಕೊಳ್ಳಬಹುದು.
ಮಾಹಿತಿಗಾಗಿ ಸಂಬಂಧಪಟ್ಟ ತಾಲ್ಲೂಕು ತೋಟಗಾರಿಕೆ ಕಚೇರಿಗಳಿಗೆ ಹಾಗೂ ಹೋಬಳಿ ಮಟ್ಟದ ತೋಟಗಾರಿಕೆ ಅಧಿಕಾರಿಗಳು ಹಾಗೂ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ), ಬಂಗಾರಪೇಟೆ ದೂ: 9448949104, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ), ಕೋಲಾರ. ದೂ: 9964749681, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ), ಮಾಲೂರು.ದೂ: 9448955801, ಹಿರಿಯ ಸಹಾಯಕತೋಟಗಾರಿಕೆ ನಿರ್ದೇಶಕರು (ಜಿಪಂ), ಮುಳಬಾಗಿಲು. ದೂ: 9845024906, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ), ಶ್ರೀನಿವಾಸಪುರ. ದೂ: 9008059912 ಸಂಪರ್ಕಿಸಬಹುದು ಎಂದು ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.