ಕೋಲಾರ: ಕರ್ನಾಟಕ ಪ್ರಾಂತ ರೈತಸಂಘದ (ಕೆಪಿಆರ್ಎಸ್) 18ನೇ ರಾಜ್ಯ ಸಮ್ಮೇಳನವು ಮಾರ್ಚ್ 9, 10, 11 ರಂದು ನಗರದ ಕೆಇಬಿ ಸಮುದಾಯ ಭವನದಲ್ಲಿ ನಡೆಯಲಿದ್ದು, ವಿವಿಧ ಬೇಡಿಕೆಗಳ ಈಡೇರಿಕೆಗೆ ಕೇಂದ್ರ, ರಾಜ್ಯ ಸರ್ಕಾರಕ್ಕೆ ಒತ್ತಾಯಿಸಲಾಗುವುದು ಎಂದು ಸಂಘಟನೆಯ ಜಿಲ್ಲಾಧ್ಯಕ್ಷ ಟಿ.ಎಂ.ವೆಂಕಟೇಶ್ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋಲಾರದಲ್ಲಿ 13ನೇ ರಾಜ್ಯ ಸಮ್ಮೇಳನ ನಡೆದಿದ್ದು, ಇದೀಗ 18ನೇ ಸಮ್ಮೇಳನ ನಡೆಯುತ್ತಿದೆ ಎಂದರು.

ಮೊದಲ ದಿನ ನಗರದ ಗಾಂಧಿವನದಿಂದ ಬೆಳಗ್ಗೆ 10.30ಕ್ಕೆ ಮೆರವಣಿಗೆ ನಡೆಸಲಾಗುವುದು. ಆ ನಂತರ ನಗರದ ಹಳೆಯ ಬಸ್ ನಿಲ್ದಾಣದಲ್ಲಿ ಬಹಿರಂಗ ಸಭೆ ನಡೆಯಲಿದ್ದು, ಜಿಲ್ಲೆಯಿಂದ 4 ಸಾವಿರ ಮಂದಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಬಹಿರಂಗ ಸಭೆಯನ್ನು ಎಐಕೆಎಸ್ ಅಖಿಲ ಭಾರತ ಪ್ರಧಾನ ಕಾರ್ಯದರ್ಶಿ ವಿಜುಕೃಷ್ಣನ್ ಉದ್ಘಾಟಿಸುವರು. ವಿಧಾನ ಪರಿಷತ್ ಮಾಜಿ ಸಭಾಪತಿ ವಿ.ಆರ್.ಸುದರ್ಶನ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಎಐಕೆಎಸ್ ಅಖಿಲ ಭಾರತ ಜಂಟಿ ಕಾರ್ಯದರ್ಶಿ ಡಿ.ರವೀಂದ್ರನ್, ಕೆಪಿಆರ್ಎಸ್ ರಾಜ್ಯಾಧ್ಯಕ್ಷ ಯು.ಬಸವರಾಜು, ಪ್ರಧಾನ ಕಾರ್ಯದರ್ಶಿ ಟಿ.ಯಶವಂತ, ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ವರಲಕ್ಷ್ಮಿ, ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರಪ್ಪ ಹೊಸ್ಕೆರಾ, ಕರ್ನಾಟಕ ಜಾನಪದ ಅಕಾಡೆಮಿ ಮಾಜಿ ಅಧ್ಯಕ್ಷ ಪಿಚ್ಚಳ್ಳಿ ಶ್ರೀನಿವಾಸ್, ಕೆಪಿಆರ್ಎಸ್ ರಾಜ್ಯ ಉಪಾಧ್ಯಕ್ಷ ಪಿ.ಆರ್.ಸೂರ್ಯನಾರಾಯಣ, ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಗಾಂಧಿನಗರ ನಾರಾಯಣಸ್ವಾಮಿ, ಜೆಎಂಎಸ್ ರಾಜ್ಯ ಮುಖಂಡೆ ವಿ.ಗೀತಾ, ಕೆಪಿಆರ್ಎಸ್ ರಾಜ್ಯ ಸಮಿತಿ ಸದಸ್ಯೆ ಗಂಗಮ್ಮ, ಜಿಲ್ಲಾ ಮಾವು ಬೆಳೆಗಾರರ ಸಂಘದ ಅಧ್ಯಕ್ಷ ನೀಲಟೂರು ಚಿನ್ನಪ್ಪರೆಡ್ಡಿ, ಅಲ್ಪಸಂಖ್ಯಾತರ ಹಿರಿಯ ಮುಖಂಡ ಸಲ್ಲಾವುದ್ದೀನ್ ಬಾಬು ಭಾಗವಹಿಸಲಿದ್ದಾರೆ ಎಂದರು.

ಬಹಿರಂಗ ಸಭೆಯ ನಂತರ ಕೆಇಬಿ ಸಮುದಾಯ ಭವನದಲ್ಲಿ ಆಂತರಿಕ ಸಭೆ ನಡೆಸಲಾಗುವುದು. ಪಕ್ಷಾತೀತ, ಜಾತ್ಯತೀತವಾಗಿ ಎಲ್ಲರೂ ಭಾಗವಹಿಸಬೇಕೆಂದು ಮನವಿ ಮಾಡಿದರು.

ಕೆಪಿಆರ್ಎಸ್ ರಾಜ್ಯ ಉಪಾಧ್ಯಕ್ಷ ಪಿ.ಆರ್.ಸೂರ್ಯನಾರಾಯಣ ಮಾತನಾಡಿ, ‘ಚಳವಳಿಗಳ ಕೇಂದ್ರ ಕೋಲಾರವಾಗಿದ್ದು, ಹೋರಾಟಗಳಿಂದ ಸಾಕಷ್ಟು ಅನುಕೂಲತೆಗಳನ್ನು ಪಡೆದುಕೊಳ್ಳಲಾಗಿದೆ. 18ನೇ ಸಮಾವೇಶದಲ್ಲಿ ಶಾಶ್ವತ ನೀರಾವರಿ, ಬೆಂಬಲ ಬೆಲೆ, ಸಂಸ್ಕರಣಾ ಉದ್ದಿಮೆ, ಸಾಲಮನ್ನಾ, ಬಗರ್ ಹುಕ್ಕುಂ ಸಾಗುವಳಿ ಸಕ್ರಮಕ್ಕೆ, ಪರ್ಯಾಯ ಕೃಷಿ ನೀತಿಗಳಿಗಾಗಿ ಆಗ್ರಹಿಸಲಾಗುವುದು. ಅರಣ್ಯ ಇಲಾಖೆ ದೌರ್ಜನ್ಯ, ವಿದ್ಯುತ್ ಖಾಸಗೀಕರಣ ಪ್ರೀಪೇಡ್ ಮೀಟರ್ ವಿರೋಧಿಸಲಾಗುವುದು. ಕೇಂದ್ರ ಸರ್ಕಾರದ ಜನ, ರೈತಾಪಿ ವಿರೋಧಿ ನೀತಿ ಹಾಗೂ ಕೋಮುವಾದಿ ನೀತಿ ಖಂಡಿಸಲಾಗುವುದು’ ಎಂದರು.

ಜನವಾದಿ ಮಹಿಳಾ ಸಂಘಟನೆಯ ವಿ.ಗೀತಾ ಮಾತನಾಡಿ, ‘ಪಟ್ಟು ಹಿಡಿದು ಹೋರಾಟ ಮಾಡಿದ ಕಾರಣ ಹಲವಾರು ಬೇಡಿಕೆ ಈಡೇರಿವೆ. ಪಿ ನಂಬರ್ ವ್ಯವಸ್ಥೆ ಸುಧಾರಣೆ ಆಗಿದೆ. ಮತ್ತಷ್ಟು ಬೇಡಿಕೆಗಳು ಇವೆ. ನೀರಾವರಿ ವಿಚಾರದಲ್ಲಿ ಹೋರಾಟ ನಡೆಸುತ್ತಿದ್ದೇವೆ. ಕೃಷ್ಣಾ ಬಿ ಸ್ಕೀಂ ನಡಿ ಜಿಲ್ಲೆಗೆ ನೀರು ಬೇಕು. ರಾಜ್ಯ ಹಾಗೂ ಕೇಂದ್ರ ಸರ್ಕಾರ ಈ ಬಗ್ಗೆ ಗಮನ ಹರಿಸಬೇಕು. ಮೂರನೇ ಹಂತದ ಶುದ್ಧೀಕರಣ ನಡೆಯಬೇಕು. ತರಕಾರಿಯಲ್ಲಿ ವಿಷಕಾರಿ ಅಂಶ ಇದೆ. ಎಲ್ಲಾ ಪಕ್ಷಗಳು ತಮ್ಮ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದು, ಕಾರ್ಯಗತಗೊಳಿಸಿಲ್ಲ’ ಎಂದು ಟೀಕಿಸಿದರು.

ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಗಾಂಧಿನಗರ ನಾರಾಯಣಸ್ವಾಮಿ ಮಾತನಾಡಿ, ‘ರೈತರ ಭೂಮಿ ಕಿತ್ತುಕೊಳ್ಳಲಾಗುತ್ತಿದೆ. ಭೂಮಿ ಉಳಿಸುವುದು ನಮ್ಮ ಮೊದಲ ಆದ್ಯತೆ. ರೈತರು ಉಳಿದರೆ ಜಿಲ್ಲೆ ಉಳಿಯುತ್ತದೆ. ಸಮಗ್ರ ನೀರಾವರಿ ಯೋಜನೆ ನೀಡುವಲ್ಲಿ ಎಲ್ಲಾ ಸರ್ಕಾರಗಳು ವಿಫಲವಾಗಿವೆ’ ಎಂದರು.

ಸುದ್ದಿಗೋಷ್ಠಿಯಲ್ಲಿ ಮುಖಂಡ ವೆಂಕಟೇಶಪ್ಪ ಹಾಗೂ ಪದಾಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.