ಕೆಜಿಎಫ್: ರಾಬರ್ಟ್ಸನ್ ಪೇಟೆಯಲ್ಲಿ ಜೆಡಿಎಸ್ ಪಕ್ಷದ ರಜತ ಮಹೋತ್ಸವ ಕಾರ್ಯಕ್ರಮವನ್ನು ಶನಿವಾರ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಎಂ. ಕೃಷ್ಣಾರೆಡ್ಡಿ, ‘ಎತ್ತಿನಹೊಳೆ ಯೋಜನೆಯನ್ನು ಜೆಡಿಎಸ್ ಮೊದಲಿನಿಂದಲೂ ವಿರೋಧಿಸಿಕೊಂಡೇ ಬಂದಿದೆ. ಈ ಯೋಜನೆಗೆ ಕೋಟ್ಯಂತರ ರೂಪಾಯಿ ಖರ್ಚು ಮಾಡುವ ಬದಲಿಗೆ ಕೃಷ್ಣಾ ನದಿ ನೀರನ್ನು ಕೋಲಾರ ಜಿಲ್ಲೆಗೆ ತರುವುದು ಉತ್ತಮ’ ಎಂದು ಪ್ರತಿಪಾದಿಸಿದರು.

ಎತ್ತಿನಹೊಳೆ ಯೋಜನೆ ಮೂಲಕ ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಮತ್ತು ಕೋಲಾರ ಜಿಲ್ಲೆಯ ಭಾಗಗಳಿಗೆ ಕುಡಿಯುವ ನೀರು ಹರಿಸಲಾಗುತ್ತದೆ ಎನ್ನಲಾಗಿತ್ತು. ಆದರೆ, ಇದೀಗ ಈ ಯೋಜನೆಯಡಿ ನೀರು ಬರುತ್ತದೆಯೊ ಇಲ್ಲವೊ ಎಂಬ ಭಾವನೆ ಈ ಮೂರು ಜಿಲ್ಲೆಗಳ ಜನರಲ್ಲಿ ಮೂಡಿದೆ. ₹12 ಸಾವಿರ ಕೋಟಿ ವೆಚ್ಚದ ಕುಡಿಯುವ ನೀರಿನ ಯೋಜನಾ ವೆಚ್ಚವು ಇದೀಗ ₹40 ಸಾವಿರ ಕೋಟಿ ವೆಚ್ಚಕ್ಕೆ ತಲುಪಿದೆ. ಇಷ್ಟಾಗಿಯೂ, ನೀರು ಹರಿಯಲಿದೆ ಎಂಬ ಖಾತ್ರಿ ಇನ್ನೂ ಇಲ್ಲ ಎಂದು ಹೇಳಿದರು.

ಗೃಹಲಕ್ಷ್ಮಿ ಯೋಜನೆಯ ಎರಡು ತಿಂಗಳ ಹಣ ಬಿಡುಗಡೆ ಮಾಡಲಾಗಿದೆ ಎಂದು ಸಚಿವರು ಸದನದಲ್ಲಿ ಸುಳ್ಳು ಹೇಳಿದ್ದಾರೆ. ಅವರನ್ನು ಮಂತ್ರಿಮಂಡಲದಿಂದ ವಜಾ ಮಾಡಬೇಕು ಎಂದು ಒತ್ತಾಯಿಸಿದರು.

‘ಪರಿಶಿಷ್ಟ ಜಾತಿ ಮತ್ತು ವರ್ಗಕ್ಕೆ ಮೀಸಲಿಟ್ಟ ಹಣವನ್ನು ಗ್ಯಾರಂಟಿ ಯೋಜನೆಗೆ ಅಕ್ರಮವಾಗಿ ಬಳಸಲಾಗುತ್ತಿದೆ. ಹಣದ ದುರುಪಯೋಗ ಆಗಿದೆ. ಜನಸಾಮಾನ್ಯರಿಗೆ ಸರ್ಕಾರವು ಗ್ಯಾರಂಟಿ ಕೊಡಲಿ, ಅದಕ್ಕೆ ನಮ್ಮ ಆಕ್ಷೇಪವಿಲ್ಲ. ಆದರೆ ಪರಿಶಿಷ್ಟರ ಹಣ ಬಳಸುವುದು ಸರಿಯಲ್ಲ’ ಎಂದರು.

ಬಿಜಿಎಂಎಲ್ ಸಮಸ್ಯೆಯನ್ನು ಬಗೆಹರಿಸಲು ಅಂದಿನ ಸಂಸದ ಕೆ.ಎಚ್.ಮುನಿಯಪ್ಪ ಯತ್ನಿಸಲಿಲ್ಲ. ಇಂದು ಅವರ ಕುಡಿ ಇಲ್ಲಿ ಶಾಸಕರಾಗಿದ್ದಾರೆ. ಅವರಿಗೆ ಸಮಸ್ಯೆ ಬಗೆಹರಿಸುವ ಮನಸ್ಸೇ ಇಲ್ಲ ಎಂಬಂತೆ ಕಾಣುತ್ತಿದೆ ಎಂದು ಮುಖಂಡ ರಮೇಶಬಾಬು ದೂರಿದರು.

ಈ ಮುನ್ನ ಜೆಡಿಎಸ್ ಕಾರ್ಯಕರ್ತರು ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು.