ಕೋಲಾರ: ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿಯ 10 ಟಿಎಂಸಿ ಅಡಿ ನೀರು ತರುವ ಬಗ್ಗೆ ಶೀಘ್ರದಲ್ಲಿಯೇ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರನ್ನು ಭೇಟಿ ಮಾಡಿ ಚರ್ಚೆ ನಡೆಸುತ್ತೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಈ ಜಿಲ್ಲೆಗಳಿಗೆ ನದಿಯ ನೀರು ಕೊಡುತ್ತೇವೆಂದು ಹೇಳಿ ಕಾಂಗ್ರೆಸ್ ಸರ್ಕಾರದವರು ಎತ್ತಿನಹೊಳೆ ಯೋಜನೆ ಮಾಡಿದರು. ಆದರೆ, ಬೆಂಗಳೂರಿನ ಕೊಚ್ಚೆ ನೀರು ಕೊಟ್ಟರು. ಮೂರನೇ ಹಂತದ ಶುದ್ಧೀಕರಣ ಮಾಡಿ ಎಂದರೂ ಮಾಡುತ್ತಿಲ್ಲ. ಇಂತಹ ಸಂದರ್ಭದಲ್ಲಿ ಕೃಷ್ಣಾ ನದಿಯ ನೀರು ಬಿಟ್ಟರೆ ನಮಗೆ ಬೇರೆ ದಾರಿ ಇಲ್ಲ’ ಎಂದರು.

ಈ ಜಿಲ್ಲೆಗೆ ಕೃಷ್ಣಾ ನೀರು ತರುವ ಬಗ್ಗೆ ಸಂಸದ ಮಲ್ಲೇಶ್ ಬಾಬು ಪ್ರಯತ್ನ ಮಾಡುತ್ತಿದ್ದಾರೆ. ಅದಕ್ಕೆ ನನ್ನ ಬೆಂಬಲವೂ ಇದೆ. ಆಂಧ್ರದ ಮುಖ್ಯಮಂತ್ರಿಯನ್ನು ವಿಶ್ವಾಸಕ್ಕೆ ತೆಗೆದುಕೊಂಡು ಈ ಕೆಲಸ ಸಾಧಿಸಬೇಕಿದೆ. ಅದಕ್ಕಾಗಿ ಅವರನ್ನು ಭೇಟಿ ಮಾಡುತ್ತೇನೆ. ಅವರ ರಾಜ್ಯದ ಜನರ ಭಾವನೆಗಳಿಗೆ ಧಕ್ಕೆ ಆಗದ ರೀತಿಯಲ್ಲಿ ಅವರ ಸಹಕಾರ ತೆಗೆದುಕೊಳ್ಳುವ ಕೆಲಸ ಮಾಡುತ್ತೇವೆ. ಮಲ್ಲೇಶ್ ಬಾಬು ಅವರನ್ನು ಗೆಲ್ಲಿಸಿದ ಕೋಲಾರ ಜನರ ಋಣ ನಮ್ಮ ಮೇಲಿದೆ. ಅದನ್ನು ತೀರಿಸುವ ಕೆಲಸ ಮಾಡುವ ಪ್ರಯತ್ನ ಮಾಡುತ್ತೇವೆ ಎಂದು ಹೇಳಿದರು.

ಉತ್ತರ ಕರ್ನಾಟಕದ ವಿಶ್ವಾಸವನ್ನೂ ಪಡೆಯಬೇಕಿದೆ. ಏಕೆಂದರೆ ಅಲ್ಲಿನ ನೀರನ್ನು ಏಕೆ ತೆಗೆದುಕೊಂಡು ಹೋಗುತ್ತೀರಿ ಎಂಬ ರಾಜಕೀಯ ನಡೆಯುವ ಹಂತಕ್ಕೂ ಬಂದಿದೆ ಎಂದು ಹೇಳಿದರು.

ಎತ್ತಿನಹೊಳೆ ಬದಲು ಕೊಚ್ಚೆ ನೀರು ಹರಿಸಿದರು. ಮೊದಲು ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಬೆಳೆಯುತ್ತಿದ್ದ ತರಕಾರಿಗಳನ್ನು ದೇಶ ವಿದೇಶಗಳಲ್ಲಿ ಪೈಪೋಟಿಗೆ ಬಿದ್ದು ಖರೀದಿ ಮಾಡುತ್ತಿದ್ದರು. ಇವತ್ತು ಈ ಭಾಗದ ತರಕಾರಿಯನ್ನು ಕೇಳುವವರೇ ಇಲ್ಲ. ಈಗ ನೋಡಿದರೆ 2027ಕ್ಕೆ ಎತ್ತಿನಹೊಳೆ ನೀರು ಕೊಡುತ್ತೇವೆ ಎಂದು ಸಬೂಬು ಹೇಳುತ್ತಿದ್ದಾರೆ. ಎತ್ತಿನಹೊಳೆಯ ಯಂತ್ರೋಪಕರಣಗಳು ಈಗಾಗಲೇ ತುಕ್ಕು ಹಿಡಿಯುತ್ತಿವೆ. ಕೋಲಾರ, ಚಿಕ್ಕಬಳ್ಳಾಪುರ ಜನರೊಂದಿಗೆ ಚೆಲ್ಲಾಟ ಆಡುತ್ತಿದ್ದಾರೆ. ದುರಂತವೆಂದರೆ ಯರಗೋಳ್ ಜಲಾಶಯಕ್ಕೆ ಕೂಡ ಕೆ.ಸಿ ವ್ಯಾಲಿಯ ಕೊಚ್ಚೆ ನೀರು ಹರಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.