ಮುಳಬಾಗಿಲು: ತಾಲ್ಲೂಕು ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ತಾಲ್ಲೂಕು ವಕೀಲರ ಸಂಘದ ಸಹಯೋಗದಲ್ಲಿ ಕುಮುದೇನಹಳ್ಳಿ ಅರಣ್ಯ ಪ್ರದೇಶದಲ್ಲಿ ಬುಧವಾರ ಸಸಿ ನೆಡುವ ಮೂಲಕ ವಿಶ್ವ ಭೂಮಿ ದಿನಾಚರಣೆಯನ್ನು ಆಚರಿಸಲಾಯಿತು.

ಈ ವೇಳೆ ಹಿರಿಯ ಸಿವಿಲ್ ನ್ಯಾಯಾಧೀಶ ಜಗದೀಶ್ ಗೌಡ ರುಧ್ರೆ ಮಾತನಾಡಿ, ಇತ್ತೀಚೆಗೆ ಭೂಮಿಗೆ ರಾಸಾಯನಿಕ ಗೊಬ್ಬರ, ಔಷಧ ಹಾಗೂ ಪ್ಲಾಸ್ಟಿಕ್ ಮಿಶ್ರಣವಾಗುತ್ತಿರುವುದರಿಂದ ಭೂಮಿ ವಿಷಕಾರಿಯಾಗಿ ಬದಲಾಗುತ್ತಿದೆ. ಇಂತಹ ಸಂಧರ್ಭದಲ್ಲಿ ಎಲ್ಲರೂ ಭೂಮಿಯನ್ನು ಕಾಪಾಡಲು ಮುಂದಾಗಬೇಕೆಂದು ತಿಳಿಸಿದರು.

ಆಧುನಿಕತೆಯ ಹೆಸರಿನಲ್ಲಿ ಕಾರ್ಖಾನೆಗಳು ಬಿಡುವ ನಾನಾ ವಿಧದ ತ್ಯಾಜ್ಯ, ನಾಶವಾಗದ ಪ್ಲಾಸ್ಟಿಕ್ ತ್ಯಾಜ್ಯ ಮಿಶ್ರಣವಾಗುವುದರಿಂದ ಭೂಮಿ ವಿಷಕಾರಿಯಾಗುತ್ತಿದೆ. ಜೊತೆಗೆ ಕೃಷಿ ಚಟುವಟಿಕೆಗಳಿಗೆ ಬಳಸುವ ರಾಸಾಯನಿಕ ಗೊಬ್ಬರಗಳಿಂದ ಹಾಗೂ ವಿಷಕಾರಿ ಔಷಧ ಸಿಂಪಡಣೆಯಿಂದ ಭೂಮಿ ಸಂಪೂರ್ಣ ನಾಶದತ್ತ ಸಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಸರ್ಕಾರಿ ವಕೀಲ ನಂಗಲಿ ಆರ್.ನಾಗರಾಜ್ ಮಾತನಾಡಿ, ಯುವಕರು ಮೊಬೈಲುಗಳಲ್ಲಿ ಕಾಲ ಕಳೆಯುತ್ತಾ ಸಮಾಜ ನಿರ್ಮಾಣ ಕಾರ್ಯದಲ್ಲಿ ಹಿಂದೆ ಬಿದ್ದಿದ್ದಾರೆ. ಹಾಗಾಗಿ ಯುವಕರು ಭೂಮಿಯ ಶುದ್ಧತೆ, ಪರಿಸರ ನಿರ್ಮಾಣ ಹಾಗೂ ಭೂಮಿಗೆ ವಿಷಕಾರಿ ವಸ್ತುಗಳನ್ನು ಸೇರಿಸದಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕಾಗಿದೆ ಎಂದು ಹೇಳಿದರು.

ಇತ್ತೀಚೆಗೆ ಜಾಗತೀಕರಣದ ಹೆಸರಿನಲ್ಲಿ ಪರಿಸರದ ಹಾಗೂ ಮರಗಳ ಮಾರಣ ಹೋಮ ನಡೆಯುತ್ತಿದೆ. ಹಾಗಾಗಿ ಎಲ್ಲರೂ ಸಸಿಗಳನ್ನು ನೆಡುವ ಮೂಲಕ ಪರಿಸರವನ್ನು ಪುನರ್ ಸೃಷ್ಟಿ ಮಾಡುವ ಕೆಲಸ ಮಾಡಬೇಕೆಂದು ಕರೆ ನೀಡಿದರು.

ಅಪರ ಸಿವಿಲ್ ನ್ಯಾಯಾಧೀಶೆ ರೋಹಿಣಿ, ತಾಲ್ಲೂಕು ಅರಣ್ಯ ಇಲಾಖೆ ಅಧಿಕಾರಿ ಶಾಲಿನಿ, ವಕೀಲರ ಸಂಘದ ಅಧ್ಯಕ್ಷ ಸತೀಶ್ ಕುಮಾರ್, ಶ್ರೀನಿವಾಸ್ ಮತ್ತಿತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-18-1872543599

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.