ಬಂಗಾರಪೇಟೆ: ತಾಲ್ಲೂಕಿನ ಗಡಿಭಾಗಕ್ಕೆ ಅಂಟಿಕೊಂಡಿರುವ ಆಂಧ್ರಪ್ರದೇಶದ ಕುಪ್ಪಂನಿಂದ ಬಂಗಾರಪೇಟೆ ಮಾರ್ಗವಾಗಿ ಹೊಸೂರು ಹೆದ್ದಾರಿ ಮೂಲಕ ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ಹೊಸ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ.

ಈ ಯೋಜನೆಗಾಗಿ ಪೂರ್ವ ಸಿದ್ಧತೆಗಳು ಬಿರುಸಿನಿಂದ ಆರಂಭಗೊಂಡಿದ್ದು, ತಮ್ಮ ಫಲವತ್ತಾದ ಕೃಷಿ ಭೂಮಿಯನ್ನು ಕಳೆದುಕೊಳ್ಳುವ ಆತಂಕದಲ್ಲಿ ಗಡಿಭಾಗದ ಅನ್ನದಾತರಿದ್ದಾರೆ.

ಈಗಾಗಲೇ ಬೆಂಗಳೂರಿನಿಂದ ಚೆನ್ನೈಗೆ ಅತ್ಯಾಧುನಿಕ ಎಕ್ಸ್ಪ್ರೆಸ್ ವೇ ರಸ್ತೆ ನಿರ್ಮಾಣವಾಗಿದ್ದು, ಇದರಿಂದ ಎರಡೂ ಮಹಾನಗರಗಳ ನಡುವೆ ಸಂಚಾರ ಸುಗಮಗೊಂಡಿದೆ. ಹಾಗಾಗಿ ಇದೇ ಮಾದರಿಯಲ್ಲಿ ಈಗ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಪ್ರತಿನಿಧಿಸುವ ಕುಪ್ಪಂ ಕ್ಷೇತ್ರದಿಂದ ಬೆಂಗಳೂರಿಗೆ ಹೊಸ ಹೆದ್ದಾರಿ ಸಂಪರ್ಕ ಕಲ್ಪಿಸಲು ನೀಲನಕ್ಷೆ ಸಿದ್ಧವಾಗುತ್ತಿದೆ.

ಕುಪ್ಪಂ ಮತ್ತು ಸುತ್ತಮುತ್ತಲಿನ ಗ್ರಾಮೀಣ ಭಾಗದ ಸಾವಿರಾರು ಮಂದಿ ಉದ್ಯೋಗಕ್ಕಾಗಿ ಬೆಂಗಳೂರನ್ನು ಆಶ್ರಯಿಸಿದ್ದಾರೆ. ಪ್ರಸ್ತುತ ಕೆಜಿಎಫ್ ಅಥವಾ ಹೊಸೂರು ಮೂಲಕ ಸುತ್ತಿ ಬಳಸಿ ಸಂಚರಿಸಬಕಾಗಿದೆ. ಹಾಗಾಗಿ ಹೊಸ ಗ್ರೀನ್ಫೀಲ್ಡ್ ಹೆದ್ದಾರಿ ನಿರ್ಮಾಣವಾದರೆ ಗಡಿಭಾಗದ ವಾಣಿಜ್ಯ ಚಟುವಟಿಕೆಗಳಿಗೆ ವೇಗ ಸಿಗಲಿದೆ ಎಂಬುದು ಸಾರ್ವಜನಿಕರ ಮಾತಾಗಿದೆ.

ಒಂದೆಡೆ ಅಭಿವೃದ್ಧಿಯ ಆಶಾಭಾವನೆ ವ್ಯಕ್ತವಾಗುತ್ತಿದ್ದರೆ, ಮತ್ತೊಂದೆಡೆ ಹೆದ್ದಾರಿ ಹಾದುಹೋಗುವ ಮಾರ್ಗದ ರೈತರಲ್ಲಿ ತೀವ್ರ ಆತಂಕ ಮನೆಮಾಡಿದೆ. ಬಂಗಾರಪೇಟೆ ತಾಲ್ಲೂಕಿನ ಕಾಮಸಮುದ್ರ ಹಾಗೂ ಬೂದಿಕೋಟೆ ಹೋಬಳಿಯ ಹಲವು ಗ್ರಾಮಗಳ ಕೃಷಿ ಭೂಮಿಗೆ ಈ ಹೆದ್ದಾರಿಯಿಂದ ಧಕ್ಕೆಯಾಗುವ ಸಾಧ್ಯತೆ ಇದೆ. ಅನೇಕ ವರ್ಷಗಳಿಂದ ಬೆಳೆ ಬೆಳೆದುಕೊಂಡು ಜೀವನ ನಡೆಸುತ್ತಿದ್ದರು. ಆದರೆ, ಹೆದ್ದಾರಿಗಾಗಿ ಜಮೀನು ಬಿಟ್ಟುಕೊಡಬೇಕಾಗಿ ಬಂದರೆ ಎಂಬ ಚಿಂತೆ ರೈತರನ್ನು ಕಾಡುತ್ತಿದೆ.

ಹೆದ್ದಾರಿ ಪ್ರಾಧಿಕಾರದ ಯೋಜನೆಗೆ ಸಂಬಂಧಿಸಿದಂತೆ ಇತ್ತೀಚೆಗೆ ನಡೆದ ಜಿಲ್ಲಾಡಳಿತದ ಸಭೆಯಲ್ಲಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಹೆದ್ದಾರಿ ನಿರ್ಮಾಣದಿಂದ ಸ್ಥಳೀಯ ಗ್ರಾಮಸ್ಥರಿಗೆ ಹಾಗೂ ರೈತರ ಜಮೀನು ಸಂಪರ್ಕಕ್ಕೆ ತೊಂದರೆಯಾಗದಂತೆ ರಸ್ತೆಯ ಇಕ್ಕೆಲಗಳಲ್ಲಿ ಕಡ್ಡಾಯವಾಗಿ ಕನಿಷ್ಠ 7 ಮೀಟರ್ ಅಗಲದ ಸರ್ವಿಸ್ ರಸ್ತೆ ನಿರ್ಮಿಸಬೇಕೆಂದು ಸೂಚಿಸಲಾಗಿದೆ. ಅಲ್ಲದೆ ಭೂಮಿ ಕಳೆದುಕೊಳ್ಳುವ ರೈತರಿಗೆ ಮಾರುಕಟ್ಟೆ ದರದಂತೆ ನ್ಯಾಯಯುತ ಹಾಗೂ ಸಮರ್ಪಕ ಪರಿಹಾರವನ್ನು ವಿಳಂಬವಿಲ್ಲದೆ ವಿತರಿಸಲು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-18-1641594024

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.