ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮುಳಬಾಗಿಲು: ಕುವೆಂಪು ಜನ್ಮ ದಿನಾಚರಣೆ

Published 30 ಡಿಸೆಂಬರ್ 2023, 14:23 IST
Last Updated 30 ಡಿಸೆಂಬರ್ 2023, 14:23 IST
ಅಕ್ಷರ ಗಾತ್ರ

ಮುಳಬಾಗಿಲು: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮತ್ತು ಬಾಲಕಿಯರ ಪದವಿಪೂರ್ವ ಕಾಲೇಜಿನ ಆಶ್ರಯದಲ್ಲಿ ಶನಿವಾರ ಕುವೆಂಪು ಜನ್ಮದಿನವನ್ನು ಆಚರಿಸಲಾಯಿತು.

ಜಿಲ್ಲಾ ಕಸಾಪ ಜಿಲ್ಲಾಧ್ಯಕ್ಷ ಗೋಪಾಲಗೌಡ ಮಾತನಾಡಿ, ಕುವೆಂಪು ಅವರ ಆದರ್ಶಗಳು ಸಮಾಜಕ್ಕೆ ದಿಕ್ಸೂಚಿ ಇದ್ದಂತೆ. ಅವರ ಬದುಕಿನ ವೈಚಾರಿಕತೆ, ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಆರೋಗ್ಯಕರ ಸಮಾಜ ನಿರ್ಮಾಣ ಮಾಡಬಹುದು ಎಂದು ಹೇಳಿದರು.

ವಕೀಲ ಎಂ.ಎಸ್ ಶ್ರೀನಿವಾಸರೆಡ್ಡಿ ಮಾತನಾಡಿ, ಕುವೆಂಪು ಸಾಹಿತ್ಯಲೋಕದ ದಿಗ್ಗಜರಲ್ಲಿ ಒಬ್ಬರು. ಅವರ ಬರಹಗಳು, ಸಂದೇಶಗಳು ಮತ್ತು ನಾಗರಿಕ ಸಮಾಜಕ್ಕೆ ಅವರು ಕೊಟ್ಟ ಕೊಡುಗೆಗಳು ಸ್ಮರಣೀಯ. ಬರಹಗಳ ಮೂಲಕ ಸಮಾಜಕ್ಕೆ ಒಂದು ಮೌಲ್ಯಾಧಾರಿತ ಮತ್ತು ಗುಣಾತ್ಮಕ ಸಂದೇಶಗಳನ್ನು ನೀಡಿರುವ ಒಬ್ಬ ಮಹಾನ್ ಚೇತನ ಕುವೆಂಪು ನಮ್ಮನ್ನು ಅಗಲಿ ಹಲವು ವರ್ಷಗಳಾದರೂ ಅವರ ಸಂದೇಶಗಳು ಆಧುನಿಕ ಸಮಾಜಕ್ಕೆ ಮಾದರಿಯಾಗಿದೆ ಎಂದರು.

ಶಂಕರಪ್ಪ ಮಾತನಾಡಿ, ಮನುಕುಲದಲ್ಲಿ ಹುಟ್ಟಿದ ನಾವೆಲ್ಲರೂ ಸಾರ್ಥಕತೆಯ ಬದುಕನ್ನು ನಡೆಸಬೇಕು. ಅವರ ಆದರ್ಶ ಅಜರಾಮರ ಎಂದರು.

ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಜಯರಾಮರೆಡ್ಡಿ, ಉಪನ್ಯಾಸಕ ಆವಣಿ ನಾಗರಾಜ್, ಮುರಳಿ, ಸುಬ್ಬರಾಯಪ್ಪ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT