ಬಂಗಾರಪೇಟೆ ತಾಲ್ಲೂಕಿನ ಡಿ.ಕೆ. ಹಳ್ಳಿ ಅಂಗನವಾಡಿ ಕೇಂದ್ರದಲ್ಲಿ ಫಲಾನುಭವಿಗಳಿಗೆ ಮೂರು ತಿಂಗಳಿಗಾಗಿ ನೀಡಿರುವ ಪೌಷ್ಟಿಕಾಂಶ ಆಹಾರ ಪದಾರ್ಥಗಳು ಮತ್ತು ಮೊಟ್ಟೆ
ಹರೀಶ್ ರೈತ
ಕೆ.ಎಂ. ರವೀಂದ್ರಕುಮಾರ್
ಮುನಿರಾಜು ಶಿಶು ಅಭಿವೃದ್ದಿ ಯೋಜನಾಧಿಕಾರಿ ಬಂಗಾರಪೇಟೆ
ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳು ಗರ್ಭಿಣಿಯರು ಮತ್ತು ಬಾಣಂತಿಯರಿಗೆ ನೀಡಬೇಕಾದ ಆಹಾರ ಪದಾರ್ಥಗಳನ್ನು ನೀಡದ ಬಗ್ಗೆ ಹಲವು ಬಾರಿ ಅಧಿಕಾರಿಗಳಿಗೆ ದೂರು ನೀಡಿದ್ದೇನೆ. ಆದರೆ ಏನೂ ಪ್ರಯೋಜನವಾಗಿಲ್ಲ
ರವೀಂದ್ರ ಕುಮಾರ್ ಕೆ.ಎಂ ಗ್ರಾಮಸ್ಥ
ಅಂಗನವಾಡಿ ಕೇಂದ್ರವು ಬೆಳಗ್ಗೆ 9.30ಕ್ಕೆ ಆರಂಭವಾಗಿ ಮಧ್ಯಾಹ್ನ 3.30ರವರೆಗೆ ತೆರೆಯಬೇಕು. ಆದರೆ ಈ ನಿಯಮವನ್ನು ಗಾಳಿಗೆ ತೂರಲಾಗಿದ್ದು ವಾರಕ್ಕೆ ಒಮ್ಮೆ ಮಾತ್ರ ಅಂಗನವಾಡಿ ಕಾರ್ಯಕರ್ತೆಯರು ಬರುತ್ತಾರೆ
ಹರೀಶ್, ರೈತ
3 ತಿಂಗಳಿಗೊಮ್ಮೆ ಆಹಾರ ಪದಾರ್ಥ
ಅಂಗನವಾಡಿ ಕೇಂದ್ರದ ವ್ಯಾಪ್ತಿಯಲ್ಲಿರುವ ಮಕ್ಕಳು ಸೇರಿದಂತೆ ಫಲಾನುಭವಿಗಳಿಗೆ ವಾರಕ್ಕೊಮ್ಮೆ ಆಹಾರ ಪದಾರ್ಥ ವಿತರಿಸಬೇಕು ಎಂಬ ನಿಯಮವಿದೆ. ಆದರೆ ಮೂರು ತಿಂಗಳಿಗೊಮ್ಮೆ ಆಹಾರ ಪದಾರ್ಥ ವಿತರಿಸಲಾಗುತ್ತಿದೆ. ಅಲ್ಲದೆ ಇಲಾಖೆ ನಿಗದಿ ಮಾಡಿದ ಪ್ರಮಾಣಕ್ಕಿಂತಲೂ ಕಡಿಮೆ ಆಹಾರ ಪದಾರ್ಥ ವಿತರಿಸಲಾಗುತ್ತಿದೆ ಎಂದು ಕೂಲಿ ಕಾರ್ಮಿಕ ಚಲಪತಿ ಎಂಬುವರು ಅಳಲು ತೋಡಿಕೊಂಡರು. ತಪ್ಪಿತಸ್ಥರ ವಿರುದ್ಧ ಕ್ರಮ ಖಚಿತ ಡಿ.ಕೆ. ಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಅಂಗನವಾಡಿ ಕಾರ್ಯಕರ್ತೆ ವಿರುದ್ಧದ ಆರೋಪಗಳು ನನ್ನ ಗಮನಕ್ಕೆ ಬಂದಿದೆ. ಅಂಗನವಾಡಿ ಕೇಂದ್ರಕ್ಕೆ ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಲಾಗುವುದು. ಫಲಾನುಭವಿಗಳು ಮತ್ತು ಅಂಗನವಾಡಿಯಲ್ಲಿ ಪೌಷ್ಟಿಕ ಆಹಾರ ವಿತರಣೆಯ ದಾಖಲೆಗಳನ್ನು ಪರಿಶೀಲಿಸುತ್ತೇವೆ. ವ್ಯತ್ಯಾಸಗಳಿದ್ದಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಮುನಿರಾಜು ಶಿಶು ಅಭಿವೃದ್ದಿ ಯೋಜನಾಧಿಕಾರಿ ಬಂಗಾರಪೇಟೆ