ಕೋಲಾರ: ತಾಲ್ಲೂಕಿನ ಮುದುವಾಡಿ ಕೆರೆ ಕೋಲಾರ ಜಿಲ್ಲೆಯಲ್ಲಿ ದೊಡ್ಡ ಕೆರೆಗಳಲ್ಲಿ ಒಂದಾಗಿದ್ದು, ರಸ್ತೆಯ ಬದಿಯಲ್ಲಿ ತಡೆಗೋಡೆಯೇ ಇಲ್ಲ. ಈ ಹಿಂದೆಯೂ ಅವಘಡಗಳು ಸಂಭವಿಸಿದ್ದು, ಹಲವಾರು ಬಾರಿ ಮನವಿ ನೀಡಿದರೂ ಯಾವುದೇ ಕ್ರಮ ವಹಿಸಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.

ಕೋಲಾರ ಮತ್ತು ಶ್ರೀನಿವಾಸಪುರಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆ ಇದಾಗಿದೆ. ಆಂಧ್ರದ ಮದನಪಲ್ಲಿಗೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿ ಕೂಡ. ನಿತ್ಯ ಸಾವಿರಾರು ವಾಹನಗಳು ಈ ಮಾರ್ಗದಲ್ಲಿ ಸಂಚರಿಸುತ್ತವೆ.

ಲೋಕೋಪಯೋಗಿ ಇಲಾಖೆ ಹಾಗೂ ಕೆರೆ ನಿರ್ವಹಣೆ ಮಾಡುವ ಸಣ್ಣ ನೀರಾವರಿ ಇಲಾಖೆ ನಿರ್ಲಕ್ಷ್ಯದಿಂದ ಮುದುವಾಡಿ ಕೆರೆ ಪಕ್ಕದ ರಸ್ತೆಗೆ ತಡೆಗೋಡೆ ಇಲ್ಲವಾಗಿದೆ. ಈಗ ಮತ್ತೊಂದು ಘೋರ ದುರಂತ ಸಂಭವಿಸಲು ಈ ನಿರ್ಲಕ್ಷ್ಯವೇ ಕಾರಣ ಎಂದು ಸ್ಥಳೀಯರು ದೂರಿದ್ದಾರೆ.

ಇನ್ನಾದರೂ ಎಚ್ಚೆತ್ತುಕೊಂಡು ತಡೆಗೋಡೆ ನಿರ್ಮಾಣ ಮಾಡುವ ಜೊತೆಗೆ ರಸ್ತೆ ವಿಸ್ತರಿಸುವ ಕೆಲಸ ಮಾಡಬೇಕಿದೆ ಎಂದು ತೊಟ್ಲಿ ಗ್ರಾಮದ ನಿವಾಸಿ ಟಿ.ವಿ.ರಮೇಶ್ ಆಗ್ರಹಿಸಿದ್ದಾರೆ.

ಹಿಂದಿನ ಸರ್ಕಾರದಲ್ಲಿ ಮುಖ್ಯಮಂತ್ರಿ ಕೂಡ ಭೇಟಿ ನೀಡಿ ಮೇಲ್ಸೇತುವೆ ಹಾಗೂ ತಡೆಗೋಡೆ ನಿರ್ಮಿಸುವ ಭರವಸೆ ನೀಡಿದ್ದರು. ಸಂಸದರು, ಶಾಸಕರು ಈ ಬಗ್ಗೆ ಗಮನ ಹರಿಸಬೇಕು ಎಂದು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.