ಶುಕ್ರವಾರ, 14 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುವ ಕವಿ ಲಕ್ಕೂರು ಸಿ.ಆನಂದ ನಿಧನ

Published 20 ಮೇ 2024, 6:58 IST
Last Updated 20 ಮೇ 2024, 6:58 IST
ಅಕ್ಷರ ಗಾತ್ರ

ಕೋಲಾರ: ಯುವ ಕವಿ, ಸಾಹಿತಿ ಲಕ್ಕೂರು ಸಿ.ಆನಂದ (44) ಭಾನುವಾರ ಕಲಬುರಗಿ ಜಿಲ್ಲೆಯಲ್ಲಿ ಕಡಗಂಚಿ ಗ್ರಾಮದಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ನಿಧನರಾಗಿದ್ದಾರೆ.

ಅವರಿಗೆ ತಾಯಿ, ತಂಗಿ ಹಾಗೂ ತಮ್ಮ ಇದ್ದಾರೆ.

ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಅವರ ಸ್ವಗ್ರಾಮ ಲಕ್ಕೂರಿನಲ್ಲಿ ಮಂಗಳವಾರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಆನಂದ್ ಕೇಂದ್ರ ಸಾಹಿತ್ಯ ಅಕಾಡೆಮಿ ಯುವ ಪ್ರಶಸ್ತಿ, ದೆಹಲಿಯ ದಲಿತ ಸಾಹಿತ್ಯ ಪರಿಷತ್ತು ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದರು. ವಿಮರ್ಶಕ, ಅನುವಾದಕರಾಗಿಯೂ ಗುರುತಿಸಿಕೊಂಡಿದ್ದ ಅವರು ಸದ್ಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಪಿಎಚ್.ಡಿ ಸಂಶೋಧನೆಯಲ್ಲಿ ತೊಡಗಿದ್ದರು. ಐದು ಕವನ ಸಂಕಲನ, ಐದು ಅನುವಾದಿತ ಕೃತಿಗಳು ಹಾಗೂ ಒಂದು ಸಂಶೋಧನಾ ಗ್ರಂಥ ಹೊರತಂದಿದ್ದರು‌.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT