ಶ್ರೀನಿವಾಸಪುರ: ತಾಲ್ಲೂಕಿನ ಲಕ್ಷ್ಮಿಸಾಗರ ಗ್ರಾಮ ಪಂಚಾಯಿತಿ ಆವರಣದಲ್ಲಿ ಬುಧವಾರ ಕುಡಿಯುವ ನೀರಿನ ಅದಾಲತ್ ಕಾರ್ಯಕ್ರಮ ನಡೆಯಿತು.

ರೋಣುರ್ ಗ್ರಾಮ ಪಂಚಾಯಿತಿ ಪಿಡಿಒ ಕೆ. ಮಹೇಶ್ ಕುಮಾರ್ ಮಾತನಾಡಿ, ತಾಲ್ಲೂಕಿನ ಬಹುತೇಕ ಕಡೆ ಕುಡಿಯುವ ನೀರಿನ ಅಭಾವವಿದ್ದು, ನೀರನ್ನು ಮಿತವಾಗಿ ಬಳಸಬೇಕು. ಗ್ರಾಮದಲ್ಲಿ ಪ್ರತಿಯೊಬ್ಬರು ದೈನಂದಿನ ಕಾರ್ಯಗಳಿಗೆ ಪ್ರತಿದಿನ 55 ಲೀಟರ್ ನೀರನ್ನು ಮಾತ್ರ ಬಳಸಬೇಕು. ಸ್ನಾನ ಮತ್ತು ವಾಹನಗಳನ್ನು ತೊಳೆಯಲು ಪೈಪ್ಲೈನ್ ನೀರು ಬಳಸಬಾರದು. ಬಕೆಟ್ನಲ್ಲಿ ತರಕಾರಿಗಳನ್ನು ತೊಳೆದು, ಆ ನೀರನ್ನು ಗಿಡ ಮರಗಳಿಗೆ ಹಾಕಬೇಕು ಎಂದು ಹೇಳಿದರು.

ಗ್ರಾಮಗಳಲ್ಲಿ ಪೈಪ್ ಮತ್ತು ನಲ್ಲಿ ಸೋರಿಕೆಯನ್ನು ಅಧಿಕಾರಿಗಳು ತಡೆಯಬೇಕು. ಗ್ರಾಮಗಳಲ್ಲಿ ನೀರಿನ ಸಮಸ್ಯೆ ಕುರಿತು ದೂರು ದಾಖಲಿಸಿದ್ದಲ್ಲಿ, 24 ಗಂಟೆಯೊಳಗೆ ಪರಿಹರಿಸಲಾಗುವುದು ಎಂದು ಹೇಳಿದರು.

ಜಿಲ್ಲಾ ಆರೋಗ್ಯ ಅಧಿಕಾರಿ ಪ್ರೇಮ ಮಾತನಾಡಿ, ಬಿಸಿಲಿನ ತಾಪದಿಂದ ಉಷ್ಣತೆ ಅಲೆಗಳು ಏರುಪೇರು ಆಗುತ್ತಿರುವುದರಿಂದ ಗ್ರಾಮೀಣ ಪ್ರದೇಶದ ಜನರು ಆರೋಗ್ಯದ ಕಡೆಗೆ ಹೆಚ್ಚಿನ ಗಮನ ನೀಡಬೇಕು. ನೀರಿನ ಅಂಶ ಕಡಿಮೆಯಾದರೆ ಟೈಫೈಡ್, ಕಾಮಲೆ, ನಿರ್ಜಲೀಕರಣ, ತಲೆ ಸುತ್ತುವುದು ಸೇರಿದಂತೆ ಇನ್ನಿತರ ಕಾಯಿಲೆಗಳು ಕಂಡುಬರುತ್ತವೆ. ವಯಸ್ಸಾದವರು ಒಆರ್ಎಸ್ ಕುಡಿಯಬೇಕು ಎಂದು ಸಲಹೆ ನೀಡಿದರು.

ಗ್ರಾಮೀಣ ಕುಡಿಯುವ ನೀರಿನ ಮತ್ತು ನೈರ್ಮಲ್ಯತೆ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಸುರೇಶ್ ಮಾತನಾಡಿದರು.

ಸಹಾಯಕ ಎಂಜಿನಿಯರ್ ಶ್ರಾವಣಿ, ಆಂಜಲಮ್ಮ, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂಜುನಾಥ್, ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-18-30383233

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.