ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭೂ ಒಡೆತನ ಯೋಜನೆ: ಅರ್ಜಿ ಆಹ್ವಾನ

Last Updated 25 ಜುಲೈ 2021, 12:53 IST
ಅಕ್ಷರ ಗಾತ್ರ

ಕೋಲಾರ: ಅಂಬೇಡ್ಕರ್ ಅಭಿವೃದ್ಧಿ ನಿಗಮವು ಭೂ ಒಡೆತನ ಯೋಜನೆಯಡಿ ಅರ್ಹ ಮಹಿಳಾ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಿದೆ.

ಅಂಬೇಡ್ಕರ್ ಅಭಿವೃದ್ಧಿ ನಿಗಮ, ಆದಿ ಜಾಂಬವ ಅಭಿವೃದ್ಧಿ ನಿಗಮ, ಭೋವಿ ಅಭಿವೃದ್ಧಿ ನಿಗಮ, ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮ ಮತ್ತು ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ ಭೂ ಒಡೆತನ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡದ ಮಹಿಳಾ ಫಲಾಪೇಕ್ಷಿಗಳಿಗೆ ಭೂಮಿ ಖರೀದಿಸಿ ಕೊಡಲಾಗುತ್ತದೆ. ಆಸಕ್ತರು ಜಾತಿ ಮತ್ತು ಆದಾಯ ಪ್ರಮಾಣಪತ್ರ, ಭೂರಹಿತ ಕೃಷಿ ಕಾರ್ಮಿಕರ ಪ್ರಮಾಣ ಪತ್ರ, ಆಧಾರ್‌ ಕಾರ್ಡ್, ಪಡಿತರ ಚೀಟಿ ಮತ್ತು ಚುನಾವಣಾ ಗುರುತಿನ ಚೀಟಿಯ ಜೆರಾಕ್ಸ್‌ ಪ್ರತಿಯೊಂದಿಗೆ ಜುಲೈ 31ರೊಳಗೆ ನಿಗಮದ ಜಿಲ್ಲಾ ಕಚೇರಿಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಹೇಳಿದ್ದಾರೆ.

ಪರಿಶಿಷ್ಟ ಜಾತಿ ಅಥವಾ ಪಂಗಡಕ್ಕೆ ಸೇರಿದ ಆಸಕ್ತ ಭೂ ಮಾಲಿಕರು ಜಿಲ್ಲಾ ಅನುಷ್ಠಾನ ಸಮಿತಿಯು ನಿಗದಿಪಡಿಸಿದ ದರಕ್ಕೆ ಜಮೀನು ಮಾರಾಟ ಮಾಡಲು ಇಚ್ಛಿಸಿದರೆ ಅರ್ಜಿ ಸಲ್ಲಿಸಬಹುದು. ಅರ್ಜಿಯ ಜತೆಗೆ ಜಾತಿ ಪ್ರಮಾಣಪತ್ರ, ಭೂ ಮಾರಾಟ ಮಾಲು ಮುಚ್ಚಳಿಕೆ ಪ್ರಮಾಣಪತ್ರ, ಭೂ ಮಾಲೀಕರ ವಂಶಾವಳಿ, ಕುಟುಂಬ ಸದಸ್ಯರ ನಿರಾಕ್ಷೇಪಣಾ ಪತ್ರ, ಜಮೀನಿನ ಇತ್ತೀಚಿನ ಪಹಣಿ ಮತ್ತು ಹಕ್ಕು ಬದಲಾವಣೆ ಪ್ರತಿ, 13 ವರ್ಷಗಳ ಇ.ಸಿ ಪ್ರತಿಯನ್ನು ಕೊಡಬೇಕು. ಹೆಚ್ಚಿನ ಮಾಹಿತಿಗೆ 08152 -243561 ದೂರವಾಣಿ ಸಂಖ್ಯೆ ಸಂಪರ್ಕಿಸಬಹುದು ಎಂದು ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT