ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಕೀಲರ ದಿನಾಚರಣೆ

Last Updated 5 ಡಿಸೆಂಬರ್ 2021, 5:04 IST
ಅಕ್ಷರ ಗಾತ್ರ

ಕೋಲಾರ: ‘ಸಮಾಜದಲ್ಲಿ ವಕೀಲರ ಜವಾಬ್ದಾರಿ ಹೆಚ್ಚಿದೆ. ವಕೀಲ ವೃತ್ತಿಯು ಈಗ ಜಟಿಲವಾಗುತ್ತಿದೆ. ಅಪರಾಧ ಪ್ರಕರಣಗಳ ಸ್ವರೂಪ ಬದಲಾಗುತ್ತಿದ್ದು, ವಕೀಲರು ಎಚ್ಚರಿಕೆ ವಹಿಸಬೇಕು’ ಎಂದು ವಕೀಲ ಧನರಾಜ್ ಅಭಿಪ್ರಾಯಪಟ್ಟರು.

ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್‌ ಇಲ್ಲಿ ಶನಿವಾರ ಹಮ್ಮಿಕೊಂಡಿದ್ದ ವಕೀಲರ ದಿನಾಚರಣೆಯಲ್ಲಿ ಮಾತನಾಡಿದರು.

‘ವಕೀಲರು ಹೆಚ್ಚು ಒತ್ತಡದಲ್ಲಿ ಕೆಲಸ ಮಾಡುವಂತೆ ಆಗಿದೆ. ನಿರ್ಭೀತಿಯಿಂದ ಕೆಲಸ ಮಾಡುವ ವಾತಾವರಣ ಸೃಷ್ಟಿಯಾಗಬೇಕು. ಅಪರಾಧ ಪ್ರಕರಣಗಳ ಸ್ವರೂಪವು ವಕೀಲರಿಗೆ ಸವಾಲಾಗಿ ಪರಿಣಮಿಸಿದೆ. ಅಧ್ಯಯನದ ಜತೆಗೆ ತಾಂತ್ರಿಕ ವಿಧಾನವನ್ನು ವಕೀಲರು ಅರಿಯುವುದು ಅಗತ್ಯ’ ಎಂದು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್‌ ಅಧ್ಯಕ್ಷ ಪಿ. ನಾರಾಯಣಪ್ಪ ಹೇಳಿದರು.

ಕನ್ನಡ ಸಾಂಸ್ಕೃತಿಕ ಪರಿಷತ್ ಅಧ್ಯಕ್ಷ ಎಸ್.ಸಿ .ವೆಂಕಟಕೃಷ್ಣಪ್ಪ, ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಉಪಾಧ್ಯಕ್ಷರಾದ ಟಿ. ಸುಬ್ಬರಾಮಯ್ಯ, ಶಿವಕುಮಾರ್, ಗೌರವಾಧ್ಯಕ್ಷ ಕೆ.ಎನ್. ಪರಮೇಶ್ವರ್, ಸದಸ್ಯರಾದ ನಾರಾಯಣಸ್ವಾಮಿ, ಶಾಂತಕುಮಾರಿ ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT