ಕೋಲಾರ: ತಾಲ್ಲೂಕಿನ ಟಿ.ಪುರಹಳ್ಳಿ ಬಳಿಯ ಮಾವಿನ ತೋಟಕ್ಕೆ ಅಳವಡಿಸಿದ್ದ ತಂತಿ ಬೇಲಿಗೆ ಸಿಲುಕಿ ಚಿರತೆಯೊಂದು ಬುಧವಾರ ಮೃತಪಟ್ಟಿದೆ.
ಟಿ.ಪುರಹಳ್ಳಿ ಮತ್ತು ಬುಸನಹಳ್ಳಿ ನಡುವೆ ಇರುವ ತಲಗುಂದ ಗ್ರಾಮದ ರಾಮಕೃಷ್ಣಪ್ಪ ಎಂಬುವರಿಗೆ ಸೇರಿದ ಮಾವಿನ ತೋಪಿಗೆ ಹಾಕಿದ್ದ ತಂತಿ ಬೇಲಿ ದಾಟುವ ಪ್ರಯತ್ನದಲ್ಲಿ ಚಿರತೆಯ ತಲೆ ಸಿಲುಕಿಕೊಂಡಿದೆ. ಗುರುವಾರ ನಸುಕಿನಲ್ಲಿ ಜಮೀನು ಬಳಿ ಹೋದ ರೈತರೊಬ್ಬರು ಚಿರತೆ ಕಂಡು ಭಯಬಿದ್ದು ಅಲ್ಲಿಂದ ಓಡಿ ಹೋಗಿ ಗ್ರಾಮಸ್ಥರಿಗೆ ವಿಷಯ ತಿಳಿಸಿದ್ದಾರೆ.
ನಂತರ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬರುವಷ್ಟರಲ್ಲಿ ಚಿರತೆ ತಂತಿ ಬೇಲಿಯಿಂದ ತಪ್ಪಿಸಿಕೊಳ್ಳಲು ಹೆಣಗಾಡಿ ಸ್ಥಳದಲ್ಲೇ ಮೃತಪಟ್ಟಿದೆ. ಈ ಸಂಗತಿ ತಿಳಿದ ಅಕ್ಕಪಕ್ಕದ ಗ್ರಾಮಗಳ ಯುವಕರು ಚಿರತೆ ಮೃತ ದೇಹದೊಂದಿಗೆ ಸೆಲ್ಫಿ ತೆಗೆದುಕೊಳ್ಳುತ್ತಿದ್ದ ದೃಶ್ಯ ಕಂಡುಬಂದಿತು. ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಮೃತದೇಹ ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.