ಗುರುವಾರ , ಆಗಸ್ಟ್ 18, 2022
25 °C

ಕೋಲಾರ ಕ್ಷೇತ್ರದಲ್ಲೇ ಸಿದ್ದರಾಮಯ್ಯ ಸ್ಪರ್ಧಿಸಲಿ: ಸುದರ್ಶನ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲಾರ: ‘ಬಯಲುಸೀಮೆ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರದ ಅಭಿವೃದ್ಧಿ ಹಿತದೃಷ್ಟಿಯಿಂದ ಹಾಗೂ ಸಾಮಾಜಿಕ ನ್ಯಾಯದ ಸಲುವಾಗಿ ಸಿದ್ದರಾಮಯ್ಯ ಮುಂಬರುವ ಚುನಾವಣೆಯಲ್ಲಿ ಕೋಲಾರ ವಿಧಾನಸಭಾ ಕ್ಷೇತ್ರದಲ್ಲೇ ಸ್ಪರ್ಧಿಸಬೇಕು’ ಎಂದು ಕಾಂಗ್ರೆಸ್‌ ಮುಖಂಡ, ಮಾಜಿ ಸಭಾಪತಿ ವಿ.ಆರ್‌.ಸುದರ್ಶನ್ ಮನವಿ ಮಾಡಿದ್ದಾರೆ.

‘ಕೆ.ಸಿ.ವ್ಯಾಲಿ, ಎಚ್‌.ಎನ್‌.ವ್ಯಾಲಿ, ಎತ್ತಿನಹೊಳೆ ಯೋಜನೆ ಅನುಷ್ಠಾನದಲ್ಲಿ ಸಿದ್ದರಾಮಯ್ಯ ಅವರ ಪಾತ್ರವನ್ನು ಈ ಜಿಲ್ಲೆಯ ಜನ ಮರೆಯಲಾರರು. ಅದೇ ರೀತಿ ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಸ್ಥಾಪನೆ, ಕೋಲಾರ ಜಿಲ್ಲಾಡಳಿತ ಭವನ ನಿರ್ಮಾಣದಂಥ ಉಪಯುಕ್ತ ಕೆಲಸಗಳ ಮೂಲಕ ಅವರು ಇಲ್ಲಿನ ಜನತೆಯ ಪ್ರೀತಿಗೆ ಪಾತ್ರರಾಗಿದ್ದಾರೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಿದ್ದರಾಮಯ್ಯ ಕೋಲಾರದಿಂದಲೇ ಸ್ಪರ್ಧಿಸಲು ಅನುಮತಿ ನೀಡುವಂತೆ ಮನವಿ ಮಾಡಿ ಕೆಪಿಸಿಸಿ ಹಾಗೂ ಎಐಸಿಸಿಗೆ ಪತ್ರ ಬರೆಯುತ್ತಿರುವುದಾಗಿ ಸುದರ್ಶನ್ ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು