ಮಾಲೂರು: ಸರ್ಕಾರದಿಂದ ಬರುವ ಎಸ್ಸಿಪಿ, ಟಿಎಸ್ಪಿ ಯೋಜನೆಗಳನ್ನು ಸಮರ್ಪಕ ಅನುಷ್ಠಾನ ಮಾಡಬೇಕು. ಎಸ್ಸಿ ಹಾಗೂ ಎಸ್ಟಿ ಸಮುದಾಯಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ತಾಲ್ಲೂಕು ನಿಯಂತ್ರಣಾಧಿಕಾರಿ ವಿ.ಕೃಷ್ಣಪ್ಪ ತಿಳಿಸಿದರು.

ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲ್ಲೂಕು ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಹಮ್ಮಿಕೊಂಡಿದ್ದ 2020-21ನೇ ಸಾಲಿನ ಎಸ್ಸಿಪಿ, ಟಿಎಸ್ಪಿ ಯೋಜನೆಗಳ ಸಮರ್ಪಕ ಅನುಷ್ಠಾನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸರ್ಕಾರವು ಅನುಸೂಚಿತ ಜಾತಿಗಳ ಉಪಹಂಚಿಕೆ ಮತ್ತು ಬುಡಕಟ್ಟು ಜನಾಂಗದ ಉಪಹಂಚಿಕೆ 2013 ಮತ್ತು 2017 ರನ್ವಯ ಸಮುದಾಯದ ಕಾಲೊನಿಗಳ ಹಾಗೂಅರ್ಹ ಫಲಾನುಭವಿಗಳಿಗೆ ಸರ್ಕಾರದಂದ ಬರುವ ಅನುದಾನ, ಯೋಜನೆಗಳನ್ನು ತಲುಪಿಸಿ ಸಮುದಾಯವನ್ನು ಅಭಿವೃದ್ಧಿಪಡಿಸುವ ಉದ್ದೇಶವಾಗಿದೆ. ಕಾಲೊನಿಗಳೀಗೆ ಬಿಡುಗಡೆಯಾದ ಅನುದಾನವು ಯಾವುದೇ ಕಾರಣಕ್ಕೂ ವಾಪಸ್ ಹೋಗಬಾರದು.ಅರ್ಹ ಫಲಾನುಭವಿಗಳ ಆಯ್ಕೆ ಮಾಡುವಲ್ಲಿ ಹಾಗೂ ಅನುದಾನಸದ್ಬಳಕೆ ಆಗಿದೆಯೇ ಎಂಬುವುದರ ಬಗ್ಗೆ ಪ್ರತಿ ತಿಂಗಳು ಅಧಿಕಾರಿಗಳ ಸಭೆ ಕರೆದು ಚರ್ಚಿಸಲಾಗುವುದು
ಎಂದರು.

ಎಸ್ಸಿಪಿ, ಟಿಎಸ್ಪಿ ಯೋಜನೆಗಳ ಸಮರ್ಪಕ ಅನುಷ್ಠಾನ ಸಭೆಗೆ ಹಾಜರಾಗದ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸಲಾಗುವುದು. ಅಧಿಕಾರಿಗಳು ಸಭೆಗೆ ಹಾಜರಾಗುವ ಸಂದರ್ಭದಲ್ಲಿ ಅನುದಾನಗಳ ಬಗ್ಗೆ ಪೂರ್ಣ ಮಾಹಿತಿಯನ್ನು ಸಭೆಗೆ ಸಲ್ಲಿಸಬೇಕು ಎಂದರು.

ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಶಿವಕುಮಾರ್, ಲೋಕೋಪಯೋಗಿ ಇಲಾಖೆಯ ಎಇಇ ಭುವನ್ ಪ್ರಸಾದ್, ಎಂಜಿನಿಯರ್ ರಾಜ್ ಗೋಪಾಲ್, ಬಿಸಿಎಂ ಇಲಾಖೆಯ ಅಂಬಿಕಾ, ಕೃಷಿ ಇಲಾಖೆಯ ಚಂದ್ರಪ್ಪ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.