ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೋಧನಾ ವಿಧಾನ ಬದಲಾಗಲಿ

Last Updated 19 ಫೆಬ್ರುವರಿ 2021, 16:21 IST
ಅಕ್ಷರ ಗಾತ್ರ

ಕೋಲಾರ: ‘ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾಗುತ್ತಿರುವುದರಿಂದ ಶಿಕ್ಷಣ ಕ್ಷೇತ್ರದಲ್ಲಿನ ಬದಲಾವಣೆಗೆ ತಕ್ಕಂತೆ ಶಿಕ್ಷಕರು ಸಜ್ಜುಗೊಳ್ಳಬೇಕು. ತಂತ್ರಜ್ಞಾನ ಅರಿತು ಮಕ್ಕಳಿಗೆ ಮನಮುಟ್ಟುವಂತೆ ಪಠ್ಯ ಬೋಧಿಸಲು ತಮ್ಮ ಕಲಿಕಾ ವಿಧಾನ ಬದಲಿಸಿಕೊಳ್ಳುವ ಅಗತ್ಯವಿದೆ’ ಎಂದು ಕ್ಷೇತ್ರ ಸಮನ್ವಯಾಧಿಕಾರಿ ರಾಮಕೃಷ್ಣಪ್ಪ ತಿಳಿಸಿದರು.

ತಾಲ್ಲೂಕಿನ ಚುಂಚದೇನಹಳ್ಳಿಯಲ್ಲಿ ಶುಕ್ರವಾರ ನಡೆದ ಸಮಗ್ರ ಶೈಕ್ಷಣಿಕ ಕಾರ್ಯಾಗಾರದಲ್ಲಿ ಮಾತನಾಡಿ, ‘ತಂತ್ರಜ್ಞಾನ ಬೆಳೆದಂತೆ ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆ ಆಗುತ್ತಿವೆ. ಸರ್ಕಾರಿ ಶಾಲೆಗಳ ಬಲವರ್ಧನೆಗೆ ಅನುವಾಗುವಂತೆ ಶಿಕ್ಷಕರು ಸಿದ್ಧಗೊಳ್ಳಬೇಕು. ಖಾಸಗಿ ಶಾಲೆಗಳ ಪೈಪೋಟಿ ಸಮರ್ಥವಾಗಿ ನಿರ್ವಹಿಸುವ ರೀತಿ ಶಾಲೆಗಳನ್ನು ಆಕರ್ಷಣೀಯಗೊಳಿಸಬೇಕು’ ಎಂದು ಸಲಹೆ ನೀಡಿದರು.

‘ಶಿಕ್ಷಕರು ತಂತ್ರಜ್ಞಾನಕ್ಕೆ ತಕ್ಕಂತೆ ಕರ್ತವ್ಯ ನಿರ್ವಹಿಸಬೇಕೆಂದು ಕಾಲಕಾಲಕ್ಕೆ ತಂತ್ರಜ್ಞಾನದಲ್ಲಿ ಮಾಹಿತಿ ಅಳವಡಿಸಿಕೊಳ್ಳುವ ಕೆಲಸ ಸಾಗುತ್ತಿದೆ. ಶಿಕ್ಷಕರು ಹೊಸ ತಂತ್ರಜ್ಞಾನ ಬಳಸಿಕೊಳ್ಳಬೇಕು. ತಂತ್ರಜ್ಞಾನ ಅಳವಡಿಕೆ ಕೆಲ ಶಿಕ್ಷಕರಿಗೆ ಕಷ್ಟಸಾಧ್ಯವಾಗಿದ್ದು, ಅಂತಹವರು ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿಗಳ ನೆರವು ಪಡೆಯಬೇಕು’ ಎಂದರು.

‘ಶೈಕ್ಷಣಿಕವಾಗಿ ಮತ್ತು ಆಡಳಿತಾತ್ಮಕವಾಗಿ ಶಿಕ್ಷಣ ಕ್ಷೇತ್ರದಲ್ಲಿ ನಡೆಯುತ್ತಿರುವ ವಿಷಯಗಳನ್ನು ಕಾಲಕಾಲಕ್ಕೆ ಗಣಕ ತಂತ್ರಾಂಶಕ್ಕೆ ಅಪ್‌ಲೋಡ್‌ ಮಾಡುವುದು ಅತ್ಯಗತ್ಯ. ಗ್ರಾಮಾಂತರ ಪ್ರದೇಶದಲ್ಲಿ ಮಕ್ಕಳು ಕಲಿಕೆಯಲ್ಲಿ ಹಿಂದುಳಿಯದಂತೆ ನೋಡಿಕೊಳ್ಳಬೇಕು. ಸರ್ಕಾರಿ ಶಾಲೆಗಳಲ್ಲೂ ಗುಣಮಟ್ಟದ ಬೋಧನೆ ಸಿಗುತ್ತಿದೆ ಎಂಬುದನ್ನು ಪೋಷಕರಿಗೆ ಮನವರಿಕೆ ಮಾಡಿಕೊಟ್ಟು, ದಾಖಲಾತಿ ಹೆಚ್ಚಳಕ್ಕೆ ಒತ್ತು ನೀಡಬೇಕು. ಸರ್ಕಾರಿ ಶಾಲೆ ಉಳಿಸಬೇಕು’ ಎಂದು ಕಿವಿಮಾತು ಹೇಳಿದರು.

ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿಗಳಾದ ಬಸವರಾಜ್ ಮತ್ತು ಗೋವಿಂದು ಅವರನ್ನು ಸನ್ಮಾನಿಸಲಾಯಿತು. ಶಿಕ್ಷಣ ಸಂಯೋಜಕ ಆರ್ ಶ್ರೀನಿವಾಸನ್, ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ವಾಣಿಶ್ರೀ, ಎಸ್‌ಡಿಎಂಸಿ ಅಧ್ಯಕ್ಷ ಶ್ರೀನಿವಾಸ್‌ ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT