ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಲೋಕಸಭಾ ಚುನಾವಣೆ: ದಸಂಸ ಕಾಂಗ್ರೆಸ್‌ಗೆ ಬೆಂಬಲ

Published 4 ಏಪ್ರಿಲ್ 2024, 15:52 IST
Last Updated 4 ಏಪ್ರಿಲ್ 2024, 15:52 IST
ಅಕ್ಷರ ಗಾತ್ರ

ಮಾಲೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕೋಮುವಾದಿ ಶಕ್ತಿಗಳನ್ನು ಮಣಿಸುವ ಉದ್ದೇಶದಿಂದ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಲಾಗುವುದು ಎಂದು ದಸಂಸ ತಾಲ್ಲೂಕು ಸಂಚಾಲಕ ಎಂ.ಶೇಷಪ್ಪ ತಿಳಿಸಿದರು.

ನಗರದ ದಸಂಸ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ವರ್ಷ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವದ ಉಳಿವಿಗಾಗಿ ದಲಿತ ಸಂಘರ್ಷ ಸಮಿತಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿತ್ತು. ಅದೇ ರೀತಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಅನಿವಾರ್ಯ. ಇಲ್ಲದಿದ್ದಲ್ಲಿ ಈ ದೇಶದ ದಲಿತರು, ಅಲ್ಪಸಂಖ್ಯಾತರು, ಹಿಂದುಳಿದವರ ಹಕ್ಕು ಮತ್ತು ಸ್ವಾತಂತ್ರ್ಯಕ್ಕೆ ಧಕ್ಕೆಯಾಗುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಹಾಗಾಗಿ ಜನ ವಿರೋಧಿ ಆಡಳಿತ ನೀಡುತ್ತಿರುವ ಬಿಜೆಪಿ ತಿರಸ್ಕರಿಸಿ ದಮನಿತ, ಶೋಷಿತ, ಹಿಂದುಳಿದ, ಅಲ್ಪಸಂಖ್ಯಾತ, ಸಮಾಜ ಒಗ್ಗೂಡಿಸುವ ಕಾಂಗ್ರೆಸ್ ಬೆಂಬಲಿಸಬೇಕಾಗಿದೆ. ಹಾಗಾಗಿ ಕಾಂಗ್ರೆಸ್‌ ಅಭ್ಯರ್ಥಿ ಗೆಲುವಿಗೆ ಶ್ರಮಿಸಲಾಗುವುದು ಎಂದರು.

ದೊಡ್ಡಿ ಮುನಿಯಪ್ಪ, ದಿನ್ನೇರಿ ಶಿವಣ್ಣ, ಮಾಸ್ತಿ ಬಸವರಾಜ್, ಮಿಟಗಾನಹಳ್ಳಿ ಶ್ರೀನಿವಾಸ್, ಹುಲಿಮಂಗಲ ಹರೀಶ್, ಟೇಕಲ್ ಕೆಂಚಪ್ಪ, ಆದಿಮ ಹರೀಶ್, ದೊಡ್ಮಲ್ಲೆ ರವಿ, ಬಿ.ಜೆ.ರಾಮಪ್ಪ, ಭರತ್, ಕಂಬೀಪುರ ಶಂಭಣ್ಣ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT