ಮುಳಬಾಗಿಲು: ಲೋಕಸಭಾ ಚುನಾವಣೆಯ ಹಿನ್ನಲೆ ನಗರದ ಮತದಾನ ಕೇಂದ್ರ ಹಾಗೂ ಮತ ಯಂತ್ರಗಳನ್ನು ಇಡುವ ಕಟ್ಟಡಗಳನ್ನು ಚುನಾವಣಾಧಿಕಾರಿಗಳು ಗುರುವಾರ ಪರಿಶೀಲನೆ ನಡೆಸಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಬಾಲಕರ ಹಾಗೂ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತಿತರ ಕಟ್ಟಡಗಳನ್ನು ಚುನಾವಣಾಧಿಕಾರಿ ಭಾಗ್ಯಮ್ಮ, ತಹಶೀಲ್ದಾರ್ ರಾಜಶೇಖರ ಮೂರ್ತಿ, ಗ್ರೇಡ್ 2 ತಹಶೀಲ್ದಾರ್ ಬಿ.ಆರ್.ಮುನಿವೆಂಕಟಪ್ಪ ಮತದಾನ ಕೇಂದ್ರಗಳಲ್ಲಿನ ಮೂಲಸೌಕರ್ಯಗಳನ್ನು ಪರಿಶೀಲಿಸಿದರು.

ಎಲ್ಲಾ ಕಟ್ಟಡಗಳಲ್ಲಿ ವಿದ್ಯುತ್, ಕುಡಿಯುವ ನೀರು, ಕೊಠಡಿಗಳ ಕಿಟಕಿ ಬಾಗಿಲು ಮತ್ತಿತರ ಸೌಕರ್ಯಗಳನ್ನು ಪರಿಶೀಲಿಸಿದರು. ಆಕಸ್ಮಾತ್ ಸಮಸ್ಯೆ ಇದ್ದಲ್ಲಿ ಸುರಕ್ಷತಾ ಕ್ರಮಗಳನ್ನು ಕೂಡಲೇ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.