ಟೇಕಲ್: ಕೋಲಾರ ಲೋಕಸಭಾ ಕ್ಷೇತ್ರದ ಆಕಾಂಕ್ಷಿ ಡಾ.ಶಶಿಧರ ರಾಜಣ್ಣ ಅವರು ಗುರುವಾರ ಮಾಜಿ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಹಾಗೂ ಶಾಸಕ ಕೊತ್ತೂರು ಮಂಜುನಾಥ್ ಅವರನ್ನು ಸಂಪರ್ಕಿಸಿ ಸುಮಾರು ಮೂರು ಗಂಟೆಗಳ ಕಾಲ ಮಾತುಕತೆ ನಡೆಸಿದರು.

ದಿ.ಯಲುವಗುಳಿ ರಾಜಣ್ಣ ಅವರು ಕಾಂಗ್ರೆಸ್ನ ನಿಷ್ಠಾವಂತ ರಾಜಕಾರಣಿಯಾಗಿದ್ದು, ಅವರ ಮಗ ಡಾ.ಶಶಿಧರ ರಾಜಣ್ಣ ಅವರಿಗೆ ಟಿಕೆಟ್ ಕೇಳುವುದರಲ್ಲಿ ತಪ್ಪೇನಿಲ್ಲ. ಅವರು ಪಕ್ಷಕ್ಕಾಗಿ ದುಡಿದು ಜೀವನ ಪರ್ಯಂತ ಕಾಂಗ್ರೆಸ್ನ ಕಟ್ಟಾಳು ಆಗಿದ್ದರು ಎಂದು ಮಾಜಿ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ನೆನೆದರು. ಜತೆಗೆ ಈ ಬಾರಿ ಬಲಗೈ ಸಮುದಾಯದ ಹೊಸ ಮುಖಕ್ಕೆ ಟಿಕೆಟ್ ನೀಡಬೇಕೆಂದು ತಿಳಿಸಿದರು.

ಕೊತ್ತೂರು ಮಂಜುನಾಥ ಅವರು ಮಾತನಾಡಿ, ಶಶಿಧರ ರಾಜಣ್ಣ ಅವರು ಎಲ್ಲಾ ಮಾಹಿತಿ ಒದಗಿಸಿದ್ದು, ಗುರುವಾರ ರಾತ್ರಿಯೊಳಗೆ ಸ್ಕ್ರೀನಿಂಗ್ ಕಮಿಟಿಯಲ್ಲಿ ಇವರ ಹೆಸರು ಸೇರ್ಪಡೆಯಾಗುವ ಸಂಭವವಿದೆ ಎಂದು ಕಾಂಗ್ರೆಸ್ನ ಉನ್ನತ ಮೂಲಗಳಿಂದ ತಿಳಿದು ಬಂದಿದೆ ಎಂದರು.

ಆಕಾಂಕ್ಷಿ ಶಶಿಧರ ರಾಜಣ್ಣ ಮಾತನಾಡಿ, ಕೋಲಾರ ಲೋಕಸಭಾ ಕ್ಷೇತ್ರದ ಎಲ್ಲಾ ಕಾಂಗ್ರೆಸ್ ಶಾಸಕರು, ಮುಖಂಡರು, ಪದಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದು ಉತ್ತಮ ಅಭಿಪ್ರಾಯ ವ್ಯಕ್ತವಾಗಿದೆ. ಈ ನಿಟ್ಟಿನಲ್ಲಿ ಪಕ್ಷದ ವರಿಷ್ಠರು ನಮ್ಮ ಕುಟುಂಬದ ಮೇಲೆ ಒಲವು ತೋರಿ ಸಹಕಾರ ನೀಡುತ್ತಾರೆ ಎಂಬ ನಂಬಿಕೆ ಇದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕೆ.ಜಿ.ಹಳ್ಳಿ ಗ್ರಾ.ಪಂ.ನ ಮಾಜಿ ಅಧ್ಯಕ್ಷ ಸತೀಶ್ ರಾಜಣ್ಣ ಜೊತೆಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.