ನಂದಗುಡಿ(ಹೊಸಕೋಟೆ): ಹೋಬಳಿಯ ಮಾಕನಹಳ್ಳಿಯ ಮುತ್ಯಾಲಮ್ಮ ದೇವಿ ಧರ್ಮರಾಯಸ್ವಾಮಿ ಹಾಗೂ ದ್ರೌಪತಾಂಭ ದೇವಿಯ 44ನೇ ವರ್ಷದ ಹೂವಿನ ಕರಗ ಮಹೋತ್ಸವ ವಿಜೃಂಭಣೆಯಿಂದ ನಡೆಯಿತು.

ಕಳೆದ ಆರು ದಿನಗಳ ಕಾಲ ವಿವಿಧ ಪೂಜಾ ಕೈಂಕರ್ಯಗಳು ಜರುಗಿದವು. ಎರಡನೇ ಬಾರಿ ಕರಗ ಹೊತ್ತ ಕರಗದ ಪೂಜಾರಿ ಮಂಜುನಾಥ್ ಮಹೋತ್ಸವವನ್ನು ಯಶಸ್ವಿಯಾಗಿ ನಡೆಸಿಕೊಟ್ಟರು. ಶನಿವಾರ ಹೂವಿನ ಕರಗವನ್ನು ಇಳಿಸಿ ಪೋತಲರಾಜನ ಗಾವಿನೊಂದಿಗೆ ಕರಗ ಮಹೋತ್ಸವಕ್ಕೆ ತೆರೆ ಎಳೆಯಲಾಯಿತು.

ಕರಗದ ಪ್ರಯುಕ್ತ ಗ್ರಾಮದಲ್ಲಿ 25ಕ್ಕೂ ಹೆಚ್ಚು ಪಲ್ಲಕ್ಕಿಗಳಲ್ಲಿ ಉತ್ಸವ ಮೂರ್ತಿ ಮೆರವಣಿಗೆ ನಡೆಯಿತು. ಗ್ರಾಮದ ಪ್ರಮುಖ ದೇವಾಲಯಗಳಿಗೆ ವಿಶೇಷ ಹೂವಿನ ಅಲಂಕಾರ ಹಾಗೂ ದೀಪಾಲಂಕಾರದೊಂದಿಗೆ ಸಿಂಗರಿಸಿ ಹಬ್ಬದ ಎಲ್ಲೆಡೆ ವಾತಾವರಣ ಕಾಣುವಂತೆ ಮಾಡಲಾಗಿತ್ತು.

ಶಾಸಕರಾದ ಶರತ್ ಬಚ್ಚೇಗೌಡ, ಪ್ರಣವಾನಂದ ಪುರಿ ಸ್ವಾಮೀಜಿ, ಹಳೆ ಕರಗದ ಪೂಜಾರಿ ಕೆ ಮುನಿರಾಜು, ವಹ್ನಿಕುಲ ಕ್ಷತ್ರಿಯ ಸಮಾಜದ ಗೌಡರು ಹಾಗೂ ಯಜಮಾನರು ಕುಲಸ್ಥರು ಗ್ರಾಮಸ್ಥರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಸಾವಿರಾರು ಸಂಖ್ಯೆಯಲ್ಲಿ ಕರಗ ಮಹೋತ್ಸವದಲ್ಲಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-15-613781130

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.