ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾ.ಪಂ ಸದಸ್ಯರಿಗೆ ಯೋಜನೆ ಅರಿವಿರಲಿ

ಗ್ರಾ.ಪಂ ಸದಸ್ಯರಿಗೆ ಸಾಮರ್ಥ್ಯ ಅಭಿವೃದ್ಧಿ ಶಿಬಿರ
Last Updated 17 ಫೆಬ್ರುವರಿ 2021, 4:39 IST
ಅಕ್ಷರ ಗಾತ್ರ

ಕೋಲಾರ: ‘ಸರ್ಕಾರದ ವಿವಿಧ ಯೋಜನೆಗಳನ್ನು ಜನರಿಗೆ ತಲುಪಿಸುವ ಕೆಲಸವನ್ನು ಗ್ರಾಮ ಪಂಚಾಯಿತಿ ಸದಸ್ಯರು ಮಾಡಬೇಕು’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎನ್‌.ಎಂ.ನಾಗರಾಜ್‌ ಹೇಳಿದರು.

ನಗರದ ತಾಲ್ಲೂಕು ಪಂಚಾಯಿತಿಯಲ್ಲಿ ಮಂಗಳವಾರ ನೂತನ ಗ್ರಾಮ ಪಂಚಾಯಿತಿ ಸದಸ್ಯರಿಗೆ ಏರ್ಪಡಿಸಿದ್ದ ಐದು ದಿನಗಳ ಸಾಮರ್ಥ್ಯ ಅಭಿವೃದ್ಧಿ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಸದಸ್ಯರು ತಮಗಿರುವ ಐದು ವರ್ಷಗಳ ಅವಧಿಯನ್ನು ಗ್ರಾಮಗಳ ಅಭಿವೃದ್ಧಿಗಾಗಿ ಬಳಸಿಕೊಳ್ಳಬೇಕು. ಗ್ರಾಮೀಣ ಭಾಗಗಳ ಜನರ ಸಮಸ್ಯೆಯನ್ನು ಬಗೆಹರಿಸಬೇಕು. ಪಂಚಾಯಿತಿ ವ್ಯವಸ್ಥೆಯಲ್ಲಿರುವ ಪರಿಹಾರಗಳನ್ನು ಅಗತ್ಯವುಳ್ಳವರಿಗೆ ತಲುಪಿಸಬೇಕು ಎಂದರು.

ನೂತನವಾಗಿ ಆಯ್ಕೆಯಾದವರಿಗೆ ಸರ್ಕಾರದ ವಿವಿಧ ಯೋಜನೆಗಳ ಮಾಹಿತಿ ಸಿಗಬೇಕು. ಅದರ ಬಗ್ಗೆ ಅರಿವು ಹೊಂದಿರಬೇಕು. ಆದ್ದರಿಂದ ಈ ಶಿಬಿರವನ್ನು ಆಯೋಜಿಸಲಾಗಿದೆ. ಸದಸ್ಯರು ಯಾವುದೇ ಕಾರಣಕ್ಕೂ ಶಿಬಿರಕ್ಕೆ ಗೈರು
ಹಾಜರಾಗಬಾರದು. ಉದ್ಯೋಗ ಖಾತ್ರಿ ಯೋಜನೆ, ವಸತಿ ಯೋಜನೆ, ಪಶು ಸಂಗೋಪನೆ, ಜಲ ರಕ್ಷಣೆ, ದನದ ಶೆಡ್, ಬದು ನಿರ್ಮಾಣ ಸೇರಿ ಕೃಷಿ ಸಂಬಂಧಿತ ಮಾಹಿತಿಗಳನ್ನು ತರಬೇತಿ ಶಿಬಿರದಲ್ಲಿ ಸದಸ್ಯರಿಗೆ ನೀಡಲಾಗುವುದು. ಸರಕಾರದ ವಿವಿಧ ಯೋಜನೆಗಳನ್ನು ಜನರಿಗೆ ಮುಟ್ಟಿಸುವ ಕೆಲಸ ಸದಸ್ಯರು ಮಾಡಬೇಕು ಎಂದುಸಲಹೆ ನೀಡಿದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎನ್.ವಿ.ಬಾಬು ಮಾತನಾಡಿ, ಗ್ರಾ.ಪಂ ಸದಸ್ಯರಿಗೆ ಆಯೋಜಿಸಿರುವ ಈ ತರಬೇತಿ ಶಿಬಿರ ಅತ್ಯಂತ ಅವಶ್ಯವಾಗಿದ್ದು ನಾನಾ ನೆಪದಲ್ಲಿ ತರಬೇತಿಗೆ ತಪ್ಪಿಸಿಕೊಳ್ಳಬಾರದು.
ಸರಕಾರದ ವಿವಿಧ ಯೋಜನಗಳ ಮಾಹಿತಿ ಪಡೆದರೆ, ಅವುಗಳನ್ನು ನಿಮ್ಮ ಗ್ರಾಮಗಳಲ್ಲಿ ಹೇಗೆ ಜಾರಿಗೊಳಿಸಲು ಅನುಕೂಲವಾಗಲಿದೆ ಎಂಬುದನ್ನು ತಿಳಿಯಬಹುದು
ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT