ಭಾನುವಾರ, 28 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತದಾರರ ಪಟ್ಟಿ ಪರಿಷ್ಕರಣೆ ಅರಿವು ಮೂಡಿಸಿ

Last Updated 11 ಅಕ್ಟೋಬರ್ 2019, 15:45 IST
ಅಕ್ಷರ ಗಾತ್ರ

ಕೋಲಾರ: ‘ತಾಂತ್ರಿಕತೆಯಲ್ಲಿ ಮುಂದಿರುವ ಯುವ ಮತದಾರರು ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ತಿಳಿದುಕೊಂಡು 18 ವರ್ಷ ಪೂರೈಸಿರುವ ಎಲ್ಲರಿಗೂ ಅರಿವು ಮೂಡಿಸಬೇಕು’ ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್ ಮನವಿ ಮಾಡಿದರು.

ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಸಹಯೋಗದಲ್ಲಿ ಇಲ್ಲಿನ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಗಾರದಲ್ಲಿ ಮಾತನಾಡಿ, ‘ಮತದಾರರ ಪಟ್ಟಿ ಪರಿಶೀಲನೆ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬರು ತಮ್ಮ ವಿವರ ಪರಿಶೀಲನೆ ಮಾಡಬೇಕು’ ಎಂದು ಸಲಹೆ ನೀಡಿದರು.

‘ಯುವ ಮತದಾರರರು ತಾಂತ್ರಿಕ ಜೀವನಕ್ಕೆ ಹೊಂದಿಕೊಂಡು ಕಾರ್ಯ ನಿರ್ವಹಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಸುಮಾರು 12 ಲಕ್ಷ ಜನರನ್ನು ಮತದಾರರ ಪರಿಷ್ಕರಣೆ ಪಟ್ಟಿಯಲ್ಲಿ ಸೇರಿಸಬೇಕಿದೆ. ಹೀಗಾಗಿ ಮನೆಗಳಲ್ಲಿ ಮತದಾರರ ಪರಿಷ್ಕರಣೆ ಬಗ್ಗೆ ಪೋಷಕರಿಗೆ ಜಾಗೃತಿ ಮೂಡಿಸಬೇಕು. ಅ.15ರವರೆಗೆ ಪರಿಷ್ಕರಣೆಗೆ ಅವಕಾಶವಿದ್ದು, ತುರ್ತಾಗಿ ಪರಿಷ್ಕರಣೆ ಮಾಡಿಕೊಳ್ಳಬೇಕು’ ಎಂದು ತಿಳಿಸಿದರು.

‘ಮೊಬೈಲ್‌ನಲ್ಲಿ ಪ್ಲೇ ಸ್ಟೋರ್ ಮೂಲಕ ಮತದಾರರ ಪಟ್ಟಿ ಪರಿಶೀಲನಾ ಆ್ಯಪ್ ಡೌನ್‌ಲೋಡ್‌ ಮಾಡಿಕೊಂಡು ಪರಿಷ್ಕರಿಸಬಹುದು. ಆ್ಯಪ್‌ ಬಗ್ಗೆ ಸಂದೇಹವಿದ್ದಲ್ಲಿ ಯೂಟ್ಯೂಬ್‌ನಲ್ಲಿ ಸ್ಪಷ್ಟ ಚಿತ್ರಣವುಳ್ಳ ವಿಡಿಯೋ ತುಣುಕು ಇದ್ದು, ಅದನ್ನು ನೋಡಿಕೊಂಡು ಸುಲಭವಾಗಿ ವಿವರ ಪರಿಷ್ಕರಣೆ ಮಾಡಬಹುದು’ ಎಂದು ವಿವರಿಸಿದರು.

ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿ ಎಂ.ಸೌಮ್ಯ, ಜಿಲ್ಲಾ ಪಂಚಾಯಿತಿ ಸಹಾಯಕ ಯೋಜನಾ ನಿರ್ದೇಶಕ ಗೋವಿಂದಗೌಡ, ಸರ್ಕಾರಿ ಮಹಿಳಾ ಕಾಲೇಜಿನ ಪ್ರಾಂಶುಪಾಲ ಪ್ರೊ.ರಾಜೇಂದ್ರ ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT