ಮಾಲೂರು: ಬಳ್ಳಾರಿಯಲ್ಲಿ ಬ್ಯಾನರ್ ವಿಚಾರವಾಗಿ ದೊಡ್ಡ ರಾದ್ಧಾಂತರವೇ ನಡೆದು ಹೋಗಿದ್ದರೆ, ಇತ್ತ ಮಾಜಿ ಶಾಸಕ, ಬಿಜೆಪಿ ಮುಖಂಡ ಕೆ.ಎಸ್.ಮಂಜುನಾಥಗೌಡ ಜನ್ಮದಿನದ ಸಂಬಂಧ ಮಾಲೂರಿನಲ್ಲಿ ಅಳವಡಿಸಿದ್ದ ಬ್ಯಾನರ್ ವಿಚಾರದಲ್ಲಿ ಕಿರಿಕ್ ಆಗಿದೆ.

ಬ್ಯಾನರ್ಗೆ ಪೇಪರ್ ಅಂಟಿಸಿದ ವಿಚಾರವಾಗಿ ಬಿಜೆಪಿ ಮುಖಂಡರು ನಗರಸಭೆ ಅಧಿಕಾರಿಗಳ ಮೇಲೆ ಮುಗಿಬಿದ್ದ ಘಟನೆ ನಡೆದಿದೆ.

ತಾಲ್ಲೂಕು ಬಿಜೆಪಿ ಘಟಕದಿಂದ ಮಾಜಿ ಶಾಸಕ ಮಂಜುನಾಥಗೌಡ ಅವರ ಫೋಟೊ ಹಾಕಿ ಬ್ಯಾನರ್ನಲ್ಲಿ ‘ನಮ್ಮ ಶಾಸಕ’ ಎಂಬ ಪದ ನಮೂದಿಸಲಾಗಿತ್ತು.

ಇದು ಹಾಲಿ ಶಾಸಕ ಕಾಂಗ್ರೆಸ್ನ ಕೆ.ವೈ.ನಂಜೇಗೌಡರ ಬೆಂಬಲಿಗರನ್ನು ಕೆರಳಿಸಿದೆ. ಈ ವಿಚಾರವನ್ನು ಕೆಲವರ ಗಮನಕ್ಕೆ ತಂದಿದ್ದಾರೆ. ಎಚ್ಚೆತ್ತ ನಗರಸಭೆ ಅಧಿಕಾರಿಗಳು ಬ್ಯಾನರ್ ಮೇಲೆ ಹಾಕಿದ್ದ ‘ನಮ್ಮ ಶಾಸಕ’ ಪದದ ಮೇಲೆ ಪೇಪರ್ ಅಂಟಿಸಿದ್ದಾರೆ. ತಹಶೀಲ್ದಾರ್ ಮತ್ತು ಸರ್ಕಲ್ ಇನ್ಸ್ಪೆಕ್ಟರ್ ಕೂಡ ಸೂಚನೆ ನೀಡಿದ್ದರು ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ಎರಡು ದಿನಗಳ ಹಿಂದೆ ತಾಲ್ಲೂಕು ಬಿಜೆಪಿ ಅಧ್ಯಕ್ಷ ಟಿ.ಬಿ.ಕೃಷ್ಣಪ್ಪ ನೇತೃತ್ವದಲ್ಲಿ ಮುಖಂಡರು ನಗರಸಭೆ ಕಚೇರಿಗೆ ತೆರಳಿ ಆಯುಕ್ತ ಪ್ರದೀಪ್ ಕುಮಾರ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

‘ನೀವು ಒಂದು ಪಕ್ಷದ ಪರವಾಗಿ ಕೆಲಸ ಮಾಡುತ್ತಿದ್ದೀರಿ. ಬ್ಯಾನರ್ನಲ್ಲಿ ಮುಂದಿನ ನಮ್ಮ ಶಾಸಕರು ಎಂದು ಹಾಕಿರುವುದು ತಪ್ಪೇ’ ಎಂದು ಪ್ರಶ್ನಿಸಿದ್ದಾರೆ.

ಒಂದು ಕಡೆ ಬ್ಯಾನರ್ ಮೇಲೆ ಪೇಪರ್ ಅಂಟಿಸಿದ್ದೀರಿ. ಇನ್ನೊಂದು ಕಡೆ ಬ್ಯಾನರ್ ತೆಗೆದು ಹಾಕಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾಲೂರು ನಗರದಲ್ಲಿ ಸರಿಯಾಗಿ ಸ್ವಚ್ಛತೆ ಕಾಪಾಡುತ್ತಿಲ್ಲ, ಕುಡಿಯುವ ನೀರು ಪೂರೈಸುತ್ತಿಲ್ಲ. ಆದರೆ, ಸ್ಥಳೀಯ ಶಾಸಕರ ಪರವಾಗಿ ಕೆಲಸ ಮಾಡುತ್ತಿದ್ದೀರಿ ಎಂದು ಹರಿಹಾಯ್ದಿದ್ದಾರೆ.

ಆಯುಕ್ತ ಪ್ರದೀಪ್ ಕುಮಾರ್, ‘ತಹಶೀಲ್ದಾರ್ ಮತ್ತು ಸರ್ಕಲ್ ಇನ್ಸ್ಪೆಕ್ಟರ್ ಸೂಚನೆ ಮೇರೆಗೆ ಬ್ಯಾನರ್ ಮೇಲೆ ಪೇಪರ್ ಅಂಟಿಸಲಾಗಿದೆ. ಇದರಲ್ಲಿ ನನ್ನ ಕೈವಾಡ ಏನು ಇಲ್ಲ’ ಎಂದು ಮನವರಿಕೆ ಮಾಡಲು ಪ್ರಯತ್ನಿಸಿದ್ದಾರೆ.

ತಾಲ್ಲೂಕು ಯುವ ಮೋರ್ಚಾ ಅಧ್ಯಕ್ಷ ಕಿರಣ್ ರಾವು, ಜಿ.ಪಂ ಮಾಜಿ ಸದಸ್ಯ ಚಿನ್ನಸ್ವಾಮಿಗೌಡ ಸೇರಿದಂತೆ ಹಲವು ಈ ಸಂದರ್ಭದಲ್ಲಿ ಇದ್ದರು ಎಂಬುದು ಗೊತ್ತಾಗಿದೆ.

ಅಲ್ಲದೇ, ಈ ವಿಚಾರವಾಗಿ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರು, ಮಾಜಿ ಹಾಗೂ ಹಾಲಿ ಶಾಸಕರ ಬೆಂಬಲಿಗರ ಮಧ್ಯೆ ತಿಕ್ಕಾಟ ನಡೆಯುತ್ತಿದೆ. ಮಾಲೂರು ಶಾಸಕ ಯಾರು ಎಂದು ಕೆಲವರು ಫೇಸ್ಬುಕ್ನಲ್ಲಿ ಪ್ರಶ್ನೆ ಮಾಡಿದ್ದಾರೆ.

ಕಾಂಗ್ರೆಸ್ ಶಾಸಕ ಕೆ.ವೈ. ನಂಜೇಗೌಡ ಹಾಗೂ ಮಾಜಿ ಶಾಸಕ ಬಿಜೆಪಿಯ ಮಂಜುನಾಥಗೌಡ ಬೆಂಬಲಿಗರ ಮಧ್ಯೆ ಉಂಟಾಬಹುದಾದ ಗಲಾಟೆ ತಡೆಗಟ್ಟುವ ನಿಟ್ಟಿನಲ್ಲಿ ಬ್ಯಾನರ್ ತೆರವು ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.