ಮಾಲೂರು: ನಗರದ ಧರ್ಮರಾಯಸ್ವಾಮಿ ದ್ರೌಪದಮ್ಮ ಕರಗ ಮಹೋತ್ಸವ ಭಾನುವಾರ ರಾತ್ರಿ ಶ್ರದ್ಧಾ ಭಕ್ತಿಯಿಂದ ನೆರವೇರಿತು.

ಭಾನುವಾರ ರಾತ್ರಿ 11 ಗಂಟೆಗೆ ಕರಗದ ಪೂಜಾರಿ ವೆಂಕಟರಮಣ ದೇವಾಲಯದಿಂದ ಕರಗ ಹೊತ್ತು ಹೊರಬರುತ್ತಿದ್ದಂತೆ ಗೋವಿಂದ ಗೋವಿಂದ ನಾಮಸ್ಮರಣೆಗಳು ಮೊಳಗಿದವು.

ರಸ್ತೆಯ ಇಕ್ಕೆಲಗಳಲ್ಲಿ ಭಕ್ತರು ಮನೆ ಮುಂದೆ ರಂಗೋಲಿ ಬಿಡಿಸಿ, ತಳಿರು ತೋರಣಗಳಿಂದ ಅಲಂಕರಿಸಲಾಗಿತ್ತು. ಮಲ್ಲಿಗೆ-ಕನಕಾಂಬರ ಹೂವುಗಳ ಮಳೆಯನ್ನು ಕರಗದ ಮೇಲೆ ಸುರಿಸುತ್ತಾ ಕರಗವನ್ನು ಗ್ರಾಮಸ್ಥರು ಸ್ವಾಗತಿಸಿದರು. ಭಾನುವಾರ ರಾತ್ರಿ ಆರಂಭವಾಗಿ ಸೋಮವಾರ ಬೆಳಗ್ಗೆಯವರೆಗೂ ಅದ್ದೂರಿ ಮೆರವಣಿಗೆ ನಡೆಯಿತು. ಕರಗ ವೀಕ್ಷಣೆಗೆ ಸಾವಿರಾರು ಭಕ್ತರು ಸೇರಿದ್ದರು.

ಕರಗ ಮಹೋತ್ಸವದಲ್ಲಿ ಜಮಾಯಿಸಿದ್ದ ಜನತೆಗೆ ವಿವಿಧ ಪಕ್ಷಗಳ ರಾಜಕಾರಣಿಗಳಿಂದ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು.

ಶಾಸಕ ಕೆ.ವೈ.ನಂಜೇಗೌಡ, ಮಾಜಿ ಸಚಿವ ಕೃಷ್ಣಯ್ಯಶೆಟ್ಟಿ, ಮಾಜಿ ಶಾಸಕ ಕೆ.ಎಸ್.ಮಂಜುನಾಥಗೌಡ, ಜೆಡಿಎಸ್ ಮುಖಂಡ ಹೂಡಿ ವಿಜಯಕುಮಾರ್, ಆರ್.ಪ್ರಭಾಕರ್, ಟಿ.ಬಿ.ಕೃಷ್ಣಪ್ಪ, ವಿಜಯ ನರಸಿಂಹ, ಎಂ.ಪಿ.ವಿಜಯಕುಮಾರ್, ಪಿ.ವೆಂಕಟೇಶ್, ವಿ.ಶ್ರೀನಿವಾಸ್ ಸೇರಿದಂತೆ ದೇವಾಲಯ ಸಮಿತಿ ಸದಸ್ಯರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-18-1433097326

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.