ಮಾಲೂರು: ನಗರ ಸಂಸ್ಥೆ ವ್ಯಾಪ್ತಿಯ ಸಾರ್ವಜನಿಕರ ಹಿತದೃಷ್ಟಿಯಿಂದ 2026-27ನೇ ಸಾಲಿನ ಆಸ್ತಿ ತೆರಿಗೆ ಪೂರ್ಣವಾಗಿ ಪಾವತಿಸುವ ತೆರಿಗೆದಾರರಿಗೆ ಶೇ5ರಷ್ಟು ರಿಯಾಯಿತಿ ನೀಡುವ ಅವಧಿಯನ್ನು ಸರ್ಕಾರ ಮೇ 31ರವರೆಗೆ ವಿಸ್ತರಿಸಿ ಆದೇಶಿಸಿದ್ದು, ನಾಗರಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ನಗರಸಭೆ ಪೌರಾಯುಕ್ತ ಎಂ.ಎಸ್.ಮಹದೇವ್ ಹೇಳಿದರು.

ನಗರಸಭೆ ಕಚೇರಿಯಲ್ಲಿ ಶುಕ್ರವಾರ ಸುದ್ಧಿಗಾರರೊಂದಿಗೆ ಮಾತನಾಡಿ, ಪೌರಾಡಳಿತ ನಿರ್ದೇಶನಾಲಯ 2026–27ನೇ ಸಾಲಿನಲ್ಲಿ ಶೇ5ರ ರಿಯಾಯಿತಿ ವಿಸ್ತರಿಸಿದಲ್ಲಿ, ತೆರಿಗೆ ಪಾವತಿಸಲು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪ್ರೋತ್ಸಾಹ ನೀಡಿದಂತಾಗುತ್ತದೆ ಹಾಗೂ ಆಸ್ತಿ ತೆರಿಗೆ ವಸೂಲಾತಿಯಲ್ಲಿ ಹೆಚ್ಚಿನ ಪ್ರಗತಿಯನ್ನು ನಿರೀಕ್ಷಿಸಬಹುದಾಗಿದೆ. ನಗರ ಸ್ಥಳೀಯ ಸಂಸ್ಥೆಗಳಿಗೆ ಆರ್ಥಿಕವಾಗಿ ಸಹಾಯವಾಗಲಿದೆ ಎಂದು ತಿಳಿಸಿದರು.

ಪೌರಾಡಳಿತ ನಿರ್ದೇಶನಾಲಯ ಕೂಲಂಕಷವಾಗಿ ಪರಿಶೀಲಿಸಿ, ಸರ್ಕಾರ ಈ ಪುಸ್ತಾವದಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ನಗರ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ (ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿ) ಆಸ್ತಿ ತೆರಿಗೆ ಪೂರ್ಣವಾಗಿ ಪಾವತಿಸುವ ತೆರಿಗೆದಾರರಿಗೆ ಈ ಅವಕಾಶ ನೀಡಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-18-1816533466

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.