ಗುರುವಾರ , ನವೆಂಬರ್ 26, 2020
21 °C

ಪುರಸಭೆ ಚುಕ್ಕಾಣಿ ನಿಶ್ಚಿತ: ನಂಜೇಗೌಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಾಲೂರು: ‘ಪುರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜಯಗಳಿಸಲಿದ್ದು, 15 ವರ್ಷಗಳ ನಂತರ ಸ್ಥಳೀಯ ಆಡಳಿತ ಕೈಪಾಳಯದ ಪಾಲಾಗುತ್ತಿದೆ’ ಎಂದು ಶಾಸಕ ಕೆ.ವೈ. ನಂಜೇಗೌಡ ಹೇಳಿದರು.

ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನಿಂದ 11 ಸದಸ್ಯರು ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ. ಇಬ್ಬರು ಪಕ್ಷೇತರರು ಮತ್ತು ಜೆಡಿಎಸ್‌‌ನ ಒಬ್ಬರು ಸದಸ್ಯ ಸೇರಿದಂತೆ ಒಟ್ಟು 14 ಸದಸ್ಯರು ಇದ್ದಾರೆ. ಪುರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ನ. 10ರಂದು ಚುನಾವಣೆ ನಿಗದಿಯಾಗಿದೆ. ಈಗಾಗಲೇ 14 ಸದಸ್ಯರು ಒಟ್ಟಾಗಿದ್ದು, ತಮ್ಮ ವೈಯಕ್ತಿಕ ಕೆಲಸವನ್ನು ಬದಿಗೊತ್ತಿ ಪ್ರವಾಸದಲ್ಲಿದ್ದಾರೆ ಎಂದು ಮಾಹಿತಿ ನೀಡಿದರು.

ಪಟ್ಟಣ ಸೇರಿದಂತೆ ತಾಲ್ಲೂಕಿನ ಅಭಿವೃದ್ಧಿಯ ದೃಷ್ಟಿಯಿಂದ ಜೆಡಿಎಸ್ ಸದಸ್ಯ ಹಾಗೂ ಪಕ್ಷೇತರರು ಒಟ್ಟಾಗಿದ್ದಾರೆ. ಬಿಜೆಪಿಯವರ ಹಣದ ಆಮಿಷಕ್ಕೆ ಬಲಿಯಾಗದೆ ಪಕ್ಷಾತೀತವಾಗಿ ಪಟ್ಟಣದ ಸರ್ವತೋಮುಖ ಅಭಿವೃದ್ಧಿಗೆ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.