ಟೇಕಲ್ (ಮಾಲೂರು): ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕರಡಗುರ್ಕಿ (ಮಾದಾಪುರ) ಶಾಲೆಯಲ್ಲಿ ಈಚೆಗೆ ಶಾಲಾ ಸಾಂಸ್ಕೃತಿಕ ಸುಗ್ಗಿಯಲ್ಲಿ ಮಕ್ಕಳ ಕಲಾ ಪ್ರದರ್ಶನ ನೋಡುಗರ ಮನ ಸೊರೆಗೊಂಡಿತು. ಊರಗುರ್ಕಿ, ಲಕ್ಷಿಸಾಗರ, ಓಬಟ್ಟಿ, ಚಿನಪಗಾನಹಳ್ಳಿ ಕಿರಿಯ ಶಾಲೆ ಮಕ್ಕಳು ಅಭೂತಪೂರ್ವ ನೃತ್ಯ ಪ್ರದರ್ಶಸಿ ಸೈ ಎನಿಸಿಕೊಂಡರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಬಿಇಒ ಕೆಂಪಯ್ಯ, ಸರ್ಕಾರಿ ಶಾಲೆಯಲ್ಲಿ ಓದುವ ಮಕ್ಕಳ ಪ್ರತಿಭೆಗೆ ಸಾಟಿಯೇ ಇಲ್ಲ. ಸರ್ಕಾರಿ ಶಾಲೆಗಳು ವಿದ್ಯೆ, ವಿನಯ, ಸಂಸ್ಕೃತಿ ಕಲಿಸುವ ತಾಣಗಳು. ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲಿಸಬೇಕು. ಸರ್ಕಾರಿ ಶಾಲೆಗಳಲ್ಲೂ ಇಂಗ್ಲಿಷ್ ಮಾಧ್ಯಮ ಆರಂಭವಾಗಿದೆ. ಪೋಷಕರು ತಮ್ಮ ಮನಸ್ಥಿತಿ ಬದಲಾಯಿಸಿಕೊಳ್ಳಬೇಕು. ಸರ್ಕಾರಿ ಶಾಲೆಗಳ ಸೌಲಭ್ಯಗಳ ಬಗ್ಗೆ ಅರಿವು ಪಡೆಯಬೇಕು ಎಂದು ಕಿವಿಮಾತು ಹೇಳಿದರು.

ಸರ್ಕಾರಿ ಶಾಲೆಗಳನ್ನು ಉಳಿಸಲು ಪೋಷಕರು, ಗ್ರಾಮಸ್ಥರು ಕೈಜೋಡಿಸಬೇಕು. ಶಾಲೆಗಳ ಜಾಗವನ್ನು ಉಳಿಸುವ ಕೆಲಸ ಮಾಡಬೇಕು. ಶಿಕ್ಷಕರು ಒತ್ತಡದ ನಡುವೆಯೂ ಉತ್ತಮ ಫಲಿತಾಂಶ, ಶಾಲೆಗಳ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಮಕ್ಕಳಲ್ಲಿ ಸೃಜನಶೀಲತೆ ಅರಳಲು ಅಪಾರವಾಗಿ ಶ್ರಮಿಸುತ್ತಿದ್ದಾರೆ ಎಂದು ಶ್ಲಾಘಿಸಿದರು.

ಮಾದಾಪುರ ಗ್ರಾಮದ ಹಿರಿಯರು, ಪೋಷಕರು, ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ, ಹಳೆ ವಿದ್ಯಾರ್ಥಿಗಳ ಸಂಘ, ಕೆ.ಜಿ ಹಳ್ಳಿ ಸಂಕೀರ್ಣದ ಎಲ್ಲಾ ಶಾಲೆಗಳ ಮುಖ್ಯ ಶಿಕ್ಷಕರು, ಶಿಕ್ಷಕರು, ಎಲ್ಲ ವೃಂದ ಸಂಘದ ಪದಾಧಿಕಾರಿಗಳು ಪಾಲ್ಗೊಂಡಿದ್ದರು. ಶಿಕ್ಷಕ ಎಂ.ಸುಬ್ರಮಣಿ ಕಾರ್ಯಕ್ರಮ ನಿರ್ವಹಿಸಿದರು. ಶಾಲೆ ಮುಖ್ಯ ಶಿಕ್ಷಕಿ ಎಂ.ಸುಮತಿ ಸೇರಿದಂತೆ ಶಿಕ್ಷಕ, ಶಿಕ್ಷಕಿಯರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.