ಮಾಲೂರು: ತಾಲ್ಲೂಕಿನ ಟೇಕಲ್ ಬೆಟ್ಟದಲ್ಲಿ ಮಂಗಳವಾರ ಬಂಡೆ ಕಲ್ಲು ಒಡೆಯುವ ಸಿಡಿಮದ್ದು ಸ್ಫೋಟಗೊಂಡು ಕೊಪ್ಪಳ ಜಿಲ್ಲೆಯ ನಾಲ್ವರಿಗೆ ಗಾಯಗಳಾಗಿವೆ.

ಕಾರ್ಮಿಕರಾದ ಚಿರಂಜೀವಿ (22), ರಾಮು (34), ಹೇಮಂತ(28) ಹಾಗೂ ರಾಜು (30) ಗಾಯಗೊಂಡವರು. ಕದಿರೇನಹಳ್ಳಿಯ ಹನುಮಂತಪ್ಪ ಎಂಬುವರಿಗೆ ಸೇರಿದ ಬಂಡೆ ಪ್ರದೇಶದಲ್ಲಿ ಈ ಸ್ಫೋಟ ಸಂಭವಿಸಿದೆ.

ಕದರೇನಹಳ್ಳಿ ಬಳಿಯ ಬೆಟ್ಟದಲ್ಲಿ ಕೆಲಸ ಮಾಡುತ್ತಿದ್ದ ಈ ಕಾರ್ಮಿಕರು ಬಂಡೆ ಸ್ಫೋಟ ಮಾಡಲು ಸಿಡಿಮದ್ದು ಇಟ್ಟಿದ್ದಾರೆ. ಈ ವೇಳೆ ಏಕಾಏಕಿ ಸ್ಫೋಟ ಉಂಟಾಗಿದೆ. ಪರಿಣಾಮ ನಾಲ್ವರ ಕೈಕಾಲುಗಳಿಗೆ ತೀವ್ರ ಗಾಯಗಳಾಗಿದ್ದು, ಕೋಲಾರದ ಜಾಲಪ್ಪ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸ್ಥಳಕ್ಕೆ ಮಾಸ್ತಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳದ ಸಿಬ್ಬಂದಿ ಕೂಡ ಭೇಟಿ ನೀಡಿ ಪರಿಶೀಲಿಸಿದರು. ಮಾಸ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-18-549901757

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.