ಮಾಲೂರು: ನಗರದಲ್ಲಿ ನಡೆಯಲಿರುವ ಮೇಲ್ಸೇತುವೆ ಕಾಮಗಾರಿ ಅವೈಜ್ಞಾನಿಕವಾಗಿದೆ. ಹಾಗಾಗಿ ಅದನ್ನು ನಿಲ್ಲಿಸಿ, ಹೊರ ವರ್ತುಲ ರಸ್ತೆ ನಿರ್ಮಾಣ ಮಾಡಿ ಎಂಬ ಜನ ಜಾಗೃತಿ ಮಾಡಲಾಗುತ್ತಿದೆ ಎಂದು ಪುರಸಭಾ ಮಾಜಿ ಸದಸ್ಯ ಆಲೂಗಡ್ಡೆ ಮಂಜುನಾಥ್ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸ್ತುತ ಮಾಲೂರು- ಬೆಂಗಳೂರು ರಸ್ತೆಯಿಂದ ಮಾಲೂರು - ಹೊಸಕೋಟೆ ಹಾಗೂ ಮಾಲೂರು-ಕೋಲಾರ ರಸ್ತೆಯವರೆಗೆ ನಡೆಯುವ ಕಾಮಗಾರಿಯು ಅವೈಜ್ಞಾನಿಕವಾಗಿದೆ. ಇದರಿಂದ ನಗರ ವಾಸಿಗಳಿಗೆ ತೊಂದರೆಯಾಗಲಿದೆ ಎಂದು ಆರೋಪಿಸಿದರು.

‘ಮೇಲ್ಸೇತುವೆಯಿಂದ ಮಾಲೂರನ್ನು ಹಳೆ ಮಾಲೂರು, ಹೊಸ ಮಾಲೂರು ಅಂತ ಇಬ್ಭಾಗ ಮಾಡುತ್ತಿದ್ದಾರೆ. ಹಾಗಾಗಿ ಇದನ್ನು ವಿರೋಧಿಸಿ ಮಾ.11ರಂದು ಬೆಳಗ್ಗೆ 10.30 ಕ್ಕೆ ಬಿ.ಆರ್.ಅಂಬೇಡ್ಕರ್ ಉದ್ಯಾನವನದಲ್ಲಿ ಎಲ್ಲರೂ ಸೇರಿ ಕೆಂಪೇಗೌಡ ವೃತ್ತದ ಮಾರ್ಗವಾಗಿ ಮೆರವಣಿಗೆ ಮೂಲಕ ಜಾಥಾ ಹಮ್ಮಿಕೊಳ್ಳಲಾಗಿದೆ’ ಎಂದರು.

‘ಈ ಬಗ್ಗೆ ಶಾಸಕರಿಗೆ ಹಲವು ಬಾರಿ ತಿಳಿಸಿದರು ಪ್ರಯೋಜನವಾಗಿಲ್ಲ. ಈ ಮೇಲ್ಸೇತುವೆ ಕಾಮಗಾರಿಯಿಂದ ನಗರ ವಾಸಿಗಳಿಗೆ ತೊಂದರೆಯಾಗುತ್ತದೆ. ಅಭಿವೃದ್ಧಿ ಹೆಸರಲ್ಲಿ ಮಾಲೂರು ನಗರವನ್ನು ಎರಡು ಭಾಗ ಮಾಡಲು ಹೊರಟಿದ್ದಾರೆ. ಇಲ್ಲಿನ ನಿವಾಸಿಗಳು ಊರಿಂದ ಹೊರಗಡೆ ಹೋಗಬೇಕಾದರೆ ಟೋಲ್ ಕಟ್ಟಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಜೊತೆಗೆ ಶಾಲಾ ಮಕ್ಕಳು, ಸಾರ್ವಜನಿಕರು, ವೃದ್ಧರಿಗೆ ತೊಂದರೆಯಾಗುತ್ತದೆ. ವಾಹನಗಳ ಸಂಚಾರ ಹೆಚ್ಚಾಗಿ ವಾಯುಮಾಲಿನ್ಯದಿಂದ ಉಸಿರಾಟಕ್ಕೆ ತೊಂದರೆಯಾಗುತ್ತದೆ. ಶಾಸಕರು ಮಾಲೂರು ಜನತೆಯೊಂದಿಗೆ ಚರ್ಚಿಸದೆ ಹಿಟ್ಲರ್ ರೀತಿಯಲ್ಲಿ ವರ್ತಿಸುತ್ತಿದ್ದಾರೆಂದು’ ಕಿಡಿಕಾರಿದರು.

ಜೆಡಿಎಸ್ ಮುಖಂಡ ಲಕ್ಷ್ಮಿನಾರಾಯಣ (ಕುಟ್ಟಿ) ಮಾತನಾಡಿ, ಮೇಲ್ಸೇತುವೆಯಿಂದ ಸಾರ್ವಜನಿಕರಿಗೆ ತೊಂದರೆಯಾಗಲಿದೆ. ಹಾಗಾಗಿ ಮೇಲ್ಸೇತುವೆ ಬದಲು ರೈಲ್ವೆ ಸೇತುವೆ ಅಗಲೀಕರಣ ಮಾಡಿ, ಚತುಷ್ಪಥ ರಸ್ತೆ ನಿರ್ಮಾಣ ಮಾಡಿ. ಜೊತೆಗೆ ಹೊರ ವರ್ತುಲ ರಸ್ತೆ ನಿರ್ಮಾಣ ಮಾಡಿ ಎಂದು ಒತ್ತಾಯಿಸಿದರು.

ಪ್ರದೀಪ್ ಕುಮಾರ್, ಆನಂದ್ ಕುಮಾರ್, ಶಿವು, ಗೋಪಾಲಕೃಷ್ಣ, ಗೋಪಾಲ್ ಇತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.