ಮಾಲೂರು: ಹೆಚ್ಚುತ್ತಿರುವ ಬೇಸಿಗೆಯ ಬಿಸಿಲಿನಿಂದ ತಾಲ್ಲೂಕಿನ 28 ಗ್ರಾ.ಪಂ.ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಈಗಾಗಲೇ ₹ 2.32 ಕೋಟಿ ವೆಚ್ಚದ ಕ್ರಿಯಾ ಯೋಜನೆ ರೂಪಿಸಲಾಗಿದೆ ಎಂದು ತಾಲ್ಲೂಕು ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೃಷ್ಣಪ್ಪ ತಿಳಿಸಿದರು.

ನಗರದ ತಾಲ್ಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲ್ಲೂಕಿನಲ್ಲಿ 321 ಕಂದಾಯ ಗ್ರಾಮಗಳಿದ್ದು, ಅದರಲ್ಲಿ ಆರು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ್ದು, ಖಾಸಗಿ ಕೊಳವೆ ಬಾವಿಗಳಿಂದ ನೀರು ಸರಬರಾಜು ಮಾಡಲಾಗುತ್ತಿದೆ. ಅಲ್ಲದೆ ಇನ್ನೆರಡು ತಿಂಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಉಂಟಾಗಬಹುದಾದ ಸುಮಾರು 77 ಗ್ರಾಮಗಳನ್ನು ಗುರುತಿಸಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಆಯಾ ಭಾಗದ ಖಾಸಗಿ ಕೊಳವೆ ಬಾವಿ ಮಾಲೀಕರ ಬಳಿ ನೀರು ಕೊಡುವಂತೆ ಈಗಾಗಲೇ ಚರ್ಚಿಸಲಾಗಿದೆ. ಅದಕ್ಕಾಗಿ ಟ್ಯಾಂಕರ್ಗಳನ್ನು ಸಿದ್ಧಪಡಿಸಿಕೊಳ್ಳಲಾಗಿದೆ. ಜೊತೆಗೆ ಅದಕ್ಕೆ ಅಗತ್ಯವಿರುವ ₹ 2.32ಕೋಟಿ ಕ್ರಿಯಾ ಯೋಜನೆಯನ್ನು ರೂಪಿಸಲಾಗಿದೆ ಎಂದರು.

ಗ್ರಾಮಗಳಲ್ಲಿ ಕುಡಿವ ನೀರಿನ ಸಮಸ್ಯೆ ಕಂಡು ಬಂದಲ್ಲಿ 24 ಗಂಟೆಯೊಳಗೆ ನಿವಾರಿಸಲಾಗುವುದು. ಸಾರ್ವಜನಿಕರ ಉಪಯೋಗಕ್ಕಾಗಿ ಸಹಾಯವಾಣಿ ಸಂಖ್ಯೆಗಳನ್ನು ಆಯಾ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ನಮೂದಿಸಲಾಗಿದೆ. ಸಾರ್ವಜನಿಕರು ಈ ಸಂಖ್ಯೆಗಳಿಗೆ ಕರೆ ಮಾಡಿ ಮಾಹಿತಿ ನೀಡಬಹುದು ಎಂದು ತಿಳಿಸಿದರು.

ತಾಲ್ಲೂಕಿನ ನೊಸಗೆರೆ ಗ್ರಾ.ಪಂ.ವ್ಯಾಪ್ತಿಯ ಬ್ಯಾಲಹಳ್ಳಿ, ಬೊಪ್ಪನಹಳ್ಳಿ, ಉಪವಾಸಪುರ, ಸಂತೇಹಳ್ಳಿ ಗ್ರಾ.ಪಂ.ವ್ಯಾಪ್ತಿಯ ತಿಮ್ಮನಾಯಕನಹಳ್ಳಿ, ಮಂಗಾಪುರ, ಸಂತೇಹಳ್ಳಿ, ದ್ಯಾಪಸಂದ್ರ ಮತ್ತು ನಿಡಘಟ್ಟ ಗ್ರಾಮಗಳಲ್ಲಿ ಪ್ಲೋರೈಡ್ ಅಂಶ ಹೆಚ್ಚಾಗಿದ್ದು, ಕುಡಿಯಲು ನೀರು ಯೋಗ್ಯವಲ್ಲ ಎಂಬ ವರದಿ ಬಂದಿದೆ. ಹಾಗಾಗಿ 8 ಗ್ರಾಮಗಳ ಜನತೆಗೆ ನೀರು ಬಳಸದಂತೆ ಎಚ್ಚರಿಕೆ ನೀಡಲಾಗಿದೆ. ಶುದ್ಧ ಕುಡಿವ ನೀರಿನ ಘಟಕಗಳಿಂದ ನೀರನ್ನು ತಂದು ಬಳಸುವಂತೆ ತಿಳಿಸಲಾಗಿದೆ ಎಂದರು.

ತಾಲ್ಲೂಕಿನ 28 ಗ್ರಾ.ಪಂ.ವ್ಯಾಪ್ತಿಯಲ್ಲಿ 321 ಕಂದಾಯ ಗ್ರಾಮಗಳಿದ್ದು, 266 ಗ್ರಾಮಗಳು ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಹೊಂದಿವೆ. ಬಹುತೇಕ ಎಲ್ಲಾ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳು ಕಾರ್ಯ ನಿರ್ವಹಿಸುತ್ತಿವೆ ಎಂದು ತಿಳಿಸಿದರು.

ಸಾರ್ವಜನಿಕರು ಕುಡಿಯುವ ನೀರಿನ ಸಮಸ್ಯೆ ಉಂಟಾದಲ್ಲಿ ಆತಂಕ ಪಡಬಾರದು. ನೇರವಾಗಿ ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ನಮೂದಿಸಿರುವ ಸಂಖ್ಯೆಗೆ ಮಾಹಿತಿ ನೀಡಬೇಕು. ಸಮಸ್ಯೆ ನಿವಾರಣೆ ಮಾಡಲಾಗುವುದು. ಯಾವುದೇ ರೀತಿಯ ಸುಳ್ಳು ದೂರುಗಳನ್ನು ನೀಡಬಾರದು ಎಂದು ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260408-18-390036607

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.