ಮಾಲೂರು: ಕರ್ನಾಟಕ ಸಾಹಿತ್ಯ ಅಕಾಡೆಮಿಯ ಜಿಲ್ಲಾ ಚಕೋರ ಸಾಹಿತ್ಯ ವಿಚಾರ ವೇದಿಕೆ, ಮಾನಸ ಪದವಿ ಕಾಲೇಜು ಹಾಗೂ ಚೈತನ್ಯ ಕಲಾನಿಕೇತನ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಮಾನಸ ಕಾಲೇಜಿನಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಮತ್ತು ಸಂವಿಧಾನದ ಆಶಯಗಳ ಕುರಿತು ಉಪನ್ಯಾಸ ನಡೆಯಿತು.

ಈ ವೇಳೆ ದಲಿತ ಸಂಘರ್ಷ ಸಮಿತಿಯ ಮಾಲೂರು ತಾಲ್ಲೂಕು ಸಂಚಾಲಕ ಎಂ.ಶೇಷಪ್ಪ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ಅವರು ನೀಡಿರುವ ಲಿಖಿತ ಸಂವಿಧಾನ ವಿಶ್ವಮಾನ್ಯವಾಗಿದ್ದು, ಸಮಾನತೆಯ ಭಾರತ ನಿರ್ಮಾಣಕ್ಕೆ ಪೂರಕವಾಗಿದೆ ಎಂದು ತಿಳಿಸಿದರು.

ಮಾನಸ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎನ್.ಕೆ.ಶ್ರೀನಿವಾಸ್ ಮಾತನಾಡಿ, 32 ವಿಷಯಗಳಲ್ಲಿ ಪದವಿ ಪಡೆದಿರುವ ಡಾ. ಬಿ.ಆರ್.ಅಂಬೇಡ್ಕರ್ ಅವರು ಪ್ರತಿಯೊಬ್ಬ ವಿದ್ಯಾರ್ಥಿಗಳ ಆದರ್ಶ ಪುರುಷ. ಅವರೊಬ್ಬ ಶ್ರೇಷ್ಠ ಶಿಕ್ಷಣ ತಜ್ಞರಾಗಿದ್ದು, ಬದುಕಿನ ಬಹಳಷ್ಟು ಸಮಯವನ್ನು ಓದಿಗೆ ಮೀಸಲಾಗಿಟ್ಟಿದ್ದರು ಎಂದರು.

ಚಕೋರ ಸಾಹಿತ್ಯ ವಿಚಾರ ವೇದಿಕೆಯ ಜಿಲ್ಲಾ ಸಂಚಾಲಕ ಡಾ.ಜಯಮಂಗಲ ಚಂದ್ರಶೇಖರ್, ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಅಧ್ಯಕ್ಷ ಎಂ.ವಿ.ಹನುಮಂತಯ್ಯ, ಕೆ.ಮುನಿಕೃಷ್ಣಪ್ಪ, ಶೈಲೇಶ್ ಕುಮಾರ್, ನಾರಿಗಾನಹಳ್ಳಿ ಶ್ರೀನಿವಾಸ್, ಎಂ.ವೆಂಕಟೇಶಮೂರ್ತಿ, ಸಿ.ಎಂ. ನಂಜುಂಡಪ್ಪ, ಹೇಮಾವತಿ, ವೀಣಾ, ಎ.ನಾಗರಾಜ್, ಈಶ್ವರ್ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-18-703282174

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.