ಭಾನುವಾರ, 25 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಲೂರು: ಸತತ 40 ತಾಸುಗಳ ಶೋಧ ಅಂತ್ಯ– ತೆರಳಿದ ಇ.ಡಿ ಅಧಿಕಾರಿಗಳು

ಮಾಲೂರು ತಾಲ್ಲೂಕಿನ ಕೊಮ್ಮನಹಳ್ಳಿಯಲ್ಲಿರುವ ಕಾಂಗ್ರೆಸ್‌ ಶಾಸಕ ಕೆ.ವೈ.ನಂಜೇಗೌಡ ಅವರ ನಿವಾಸದ ಮೇಲೆ ದಾಳಿ
Published 9 ಜನವರಿ 2024, 19:37 IST
Last Updated 9 ಜನವರಿ 2024, 19:37 IST
ಅಕ್ಷರ ಗಾತ್ರ

ಕೋಲಾರ: ಮಾಲೂರು ತಾಲ್ಲೂಕಿನ ಕೊಮ್ಮನಹಳ್ಳಿಯಲ್ಲಿರುವ ಕಾಂಗ್ರೆಸ್‌ ಶಾಸಕ ಕೆ.ವೈ.ನಂಜೇಗೌಡ ಅವರ ನಿವಾಸದ ಮೇಲೆ ದಾಳಿ ನಡೆಸಿ ಸತತ 40 ಗಂಟೆ ಶೋಧ ಕಾರ್ಯ ನಡೆಸಿದ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ತೆರಳಿದರು.

ಸೋಮವಾರ ನಸುಕಿನ 5.30ಕ್ಕೆ ಮೂರು ಇನೋವಾ ಕಾರಿನಲ್ಲಿ ಬಂದ ಸುಮಾರು 20 ಅಧಿಕಾರಿಗಳು ದಾಳಿ ನಡೆಸಿದ್ದರು. ಎರಡನೇ ದಿನವಾದ ಮಂಗಳವಾರ ರಾತ್ರಿ 10 ಗಂಟೆವರೆಗೆ ವಿವಿಧ ದಾಖಲೆಗಳನ್ನು ಜಾಲಾಡಿದರು.

ಅಕ್ರಮ ಹಣ ವರ್ಗಾವಣೆ ನಡೆದಿರುವ ದೂರುಗಳಿದ್ದು, ಅದಕ್ಕೆ ಪೂರಕವಾದ ದಾಖಲೆಗಳನ್ನು ಅಧಿಕಾರಿಗಳು ಶೋಧಿಸಿರುವುದು ತಿಳಿದು ಬಂದಿದೆ. ಅಲ್ಲದೇ, ಕೋಚಿಮುಲ್‌ ನೇಮಕಾತಿ ಅಕ್ರಮ ಆರೋಪ, ಶಾಸಕರ ವಿವಿಧ ವ್ಯವಹಾರಗಳ ದಾಖಲೆ ಪರಿಶೀಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT