ಮಾಲೂರು: ತಾಲ್ಲೂಕಿನ ಟೇಕಲ್ ಹೋಬಳಿಯ ಕೆ.ಜಿ.ಹಳ್ಳಿ ಬಳಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ನೂತನ ಕಟ್ಟಡ ಲೋಕಾರ್ಪಣೆ ಹಾಗೂ ಕಟ್ಟಡ ಕಾರ್ಮಿಕ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಆಧುನಿಕ ಶ್ರಮಿಕ ಶಿಕ್ಷಣ ಸಂಕೀರ್ಣ ಭವನದ ಭೂಮಿ ಪೂಜೆಯನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಅವರು ಗುರುವಾರ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ಜೊತೆಗೆ ರಾಜ್ಯ ಸರ್ಕಾರ ವಿಧಾನಸಭಾ ಕ್ಷೇತ್ರಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದೆ. ಅದರಲ್ಲೂ ಹೆಚ್ಚಾಗಿ ಗ್ರಾಮೀಣ ಅಭಿವೃದ್ಧಿಗೆ ಪ್ರಾಮುಖ್ಯತೆ ನೀಡಿದೆ. ಗ್ಯಾರಂಟಿ ಯೋಜನೆಗಳಿಗೆ ಪ್ರತಿ ತಿಂಗಳು ₹15.19 ಕೋಟಿ ವ್ಯಯಿಸಲಾಗುತ್ತಿದೆ ಎಂದರು.

ಟೇಕಲ್ ಹೋಬಳಿ ಕೇಂದ್ರದಲ್ಲಿ ಕಾರ್ಮಿಕ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ₹36.25 ಕೋಟಿ ವೆಚ್ಚದಲ್ಲಿ ವಸತಿ ಶಾಲೆ ನಿರ್ಮಿಸಲಾಗುತ್ತಿದೆ. ಜೊತೆಗೆ ₹5 ಕೋಟಿ ವೆಚ್ಚದಲ್ಲಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ನೂತನ ಕಟ್ಟಡವನ್ನು ನಿರ್ಮಿಸಲಾಗಿದೆ. ಇದರ ಸದುಪಯೋಗ ಪಡಿಸಿಕೊಳ್ಳಿ ಎಂದರು

ಶಾಸಕ ಕೆ.ವೈ.ನಂಜೇಗೌಡ ಮಾತನಾಡಿ, ಸರ್ಕಾರದಿಂದ ಕ್ಷೇತ್ರಕ್ಕೆ ಬಂದ ಅನುದಾನ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳ ಮಾಹಿತಿ ನೀಡಲು ತಾಲ್ಲೂಕಿನ ಎಲ್ಲಾ ಹೋಬಳಿ ಕೇಂದ್ರಗಳಲ್ಲಿ ಬೃಹತ್ ಮಟ್ಟದ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಹೋಬಳಿಗಳ ಅಭಿವೃದ್ಧಿಗೆ ಸಾಕಷ್ಟು ಅನುದಾನ ತರಲಾಗಿದೆ. ಟೇಕಲ್ ಹೋಬಳಿಯಲ್ಲಿ ಜಿಲ್ಲಾಡಳಿತದಿಂದ 38 ಎಕರೆ ಜಮೀನನ್ನು ಮಂಜೂರು ಮಾಡಿಸಿಕೊಂಡು, ಸರ್ಕಾರಿ ಕಚೇರಿಗಳ ನೂತನ ಕಟ್ಟಡಗಳ ನಿರ್ಮಾಣ ಮಾಡಿ ಜನರಿಗೆ ಅನುಕೂಲ ಕಲ್ಪಿಸಲಾಗುತ್ತಿದೆ. ತಾಲ್ಲೂಕು ಅಭಿವೃದ್ಧಿಯ ವಿವಿಧ ಯೋಜನೆಗಳಿಗಾಗಿ ರಾಜ್ಯ ಸರ್ಕಾರವು ₹3,100 ಕೋಟಿ ಮಂಜೂರು ಮಾಡಿದೆ ಎಂದರು.

ಎರಡನೇ ಬಾರಿ 2,048 ಮತಗಳ ಅಂತರದಿಂದ ಗೆಲುವು ಸಾಧಿಸಿದರೂ, ಬಿಜೆಪಿಯ ಮಾಜಿ ಶಾಸಕರೊಬ್ಬರು ಸಾಕಷ್ಟು ತೊಂದರೆ ನೀಡಿದ್ದಾರೆ. ಇದರಿಂದ ಎರಡೂವರೆ ವರ್ಷ ನೋವು ತಿಂದಿದ್ದೇನೆ ಎಂದರು.

ವಿರೋಧ ಪಕ್ಷದವರು ತಾಲ್ಲೂಕಿನಲ್ಲಿ ಈಗಾಗಲೇ ಚುನಾವಣೆ ಪ್ರಚಾರ ಶುರು ಮಾಡಿಕೊಂಡಿದ್ದಾರೆ. ಅಭಿವೃದ್ಧಿಯೇ ನನ್ನ ಗುರಿಯಾಗಿದ್ದು, ವಿರೋಧ ಪಕ್ಷದವರಿಗೆ ಜನ ಮಣೆ ಹಾಕಬೇಡಿ. ಜನ ಹುಷಾರಾಗಿರಿ ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯ ಎಂ.ಎನ್.ಅನಿಲ್ ಕುಮಾರ್, ಯೋಜನಾ ಪ್ರಾಧಿಕಾರ ಅಧ್ಯಕ್ಷ ಎಚ್.ಎಂ.ವಿಜಯ ನರಸಿಂಹ, ತಹಶೀಲ್ದಾರ್ ಎಂ.ವಿ.ರೂಪ, ಇಒ ವಿ.ಕೃಷ್ಣಪ್ಪ, ಹೇಮಮಾಲಿನಿ, ಆಂಜಿನಪ್ಪ, ಕ್ಷೇತ್ರನಹಳ್ಳಿ ವೆಂಕಟೇಶ ಗೌಡ, ರಮೇಶ್ ಗೌಡ, ಹನುಮಂತಪ್ಪ, ಎಸ್.ಸಿ. ನಾರಾಯಣಸ್ವಾಮಿ, ಬಿ.ಆರ್.ಶ್ರೀನಿವಾಸ್, ಸೋಮಣ್ಣ, ಶ್ರೀನಿವಾಸ್, ಗೋವರ್ಧನ್ ರೆಡ್ಡಿ, ಎಸ್.ಸಿ.ರಾಮಮೂರ್ತಿ, ಎಂ.ಕೃಷ್ಣಪ್ಪ, ಮುಖಂಡರಾದ ಚನ್ನರಾಯಪ್ಪ, ಚಂದ್ರಶೇಖರ್ ಗೌಡ, ಸತೀಶ್ ಬಾಬು, ಶ್ರೀನಿವಾಸ್, ಸರ್ದಾರ್ ಬೇಗ್, ನಾಗರಾಜ್, ಮುರುಗೇಶ್, ಸಂದೀಪ್, ಮಮತಾ, ಶಶಿಧರ್ ಇತರರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-18-1362804616

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.