ಮಾಲೂರು: ನಗರದ ಕನ್ನಡ ಸಾಹಿತ್ಯ ಪರಿಷತ್ತಿನ ಕಚೇರಿಯಲ್ಲಿ ಗುರುವಾರ ಕನ್ನಡ ಸಾಹಿತ್ಯ ಪರಿಷತ್ತಿನ 112ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕನ್ನಡ ಸಾಹಿತ್ಯ ಪರಿಷತ್ತಿನ ಮಾಲೂರು ತಾಲ್ಲೂಕು ಅಧ್ಯಕ್ಷ ಎಂ.ವಿ. ಹನುಮಂತಯ್ಯ ಮಾತನಾಡಿ, ‘ಕನ್ನಡ ಸಾಹಿತ್ಯ, ಸಂಸ್ಕೃತಿ ಉತ್ತೇಜನ ಮತ್ತು ಕನ್ನಡ ಪುಸ್ತಕಗಳ ಪ್ರಕಟಣೆಗಾಗಿ ಸ್ಥಾಪನೆಗೊಂಡ ಕನ್ನಡ ಸಾಹಿತ್ಯ ಪರಿಷತ್ತು ಕನ್ನಡ ಭಾಷೆ, ನೆಲ, ಜಲ, ಗಡಿ ಸಂರಕ್ಷಣೆ ಸಲುವಾಗಿ ಸೇವೆ ವಿಸ್ತರಿಸಿಕೊಂಡಿದೆ. ಈ ಮೂಲಕ ಕನ್ನಡಿಗರ ಏಕೈಕ ಪ್ರಾತಿನಿಧಿಕ ಸಂಸ್ಥೆಯಾಗಿದೆ’ ಎಂದು ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ನಿಕಟಪೂರ್ವ ಅಧ್ಯಕ್ಷ ಎ. ಅಶ್ವಥ್ ರೆಡ್ಡಿ ಮಾತನಾಡಿ, ಕಸಾಪವು ವಿಶ್ವದಲ್ಲಿ ಅತಿ ಹೆಚ್ಚು ಸದಸ್ಯರನ್ನು ಹೊಂದಿರುವ ಏಕೈಕ ಸಾಹಿತ್ಯ ಪರ ಸಂಸ್ಥೆಯಾಗಿದೆ. ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ರಾಜಾಶ್ರಯದಲ್ಲಿ ಸರ್ ಎಂ. ವಿಶ್ವೇಶ್ವರಯ್ಯ ಹಾಗೂ ಸರ್ ಮಿರ್ಜಾ ಇಸ್ಮಾಯಿಲ್ ಅವರ ಮಾರ್ಗದರ್ಶನದಲ್ಲಿ ಸಂಸ್ಥಾಪನೆಗೊಂಡಿತು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ನುಡಿಗಳನ್ನಾಡಿದ ಚೈತನ್ಯ ಕಲಾನಿಕೇತನದ ಸಂಸ್ಥಾಪಕ ಅಧ್ಯಕ್ಷ ಕವಿ ಡಾ. ಜಯಮಂಗಲ ಚಂದ್ರಶೇಖರ್, ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರ ಅಸ್ಮಿತೆಯ ಸಂಕೇತವಾಗಿ ಕಾರ್ಯನಿರ್ವಹಿಸುತ್ತಿದ್ದು, ತನ್ನ ಘಟಕಗಳ ಮೂಲಕ ಹೊರ ರಾಜ್ಯ ಹಾಗೂ ಹೊರ ದೇಶಗಳಲ್ಲಿಯೂ ಕನ್ನಡ ಜಾಗೃತಿ ಮೂಡಿಸುತ್ತಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಂಗೀತ ನಿರ್ದೇಶಕ ಹಾಗೂ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವಿದ್ವಾನ್ ಮಾಲೂರು ಮಂಜುನಾಥ್ ಅವರನ್ನು ಸನ್ಮಾನಿಸಲಾಯಿತು.

ಕನ್ನಡ ಸಾಹಿತ್ಯ ಪರಿಷತ್ತಿನ ಗೌರವಾಧ್ಯಕ್ಷ ಮಾಸ್ತಿ ಕೃಷ್ಣಪ್ಪ, ಡಾ.ನಾ. ಮುನಿರಾಜು, ಕೆ. ಮುನಿಕೃಷ್ಣಪ್ಪ, ಸಿ. ಎಂ. ನಂಜುಂಡಪ್ಪ (ಪಾಸ್ವಾನ್), ನಾರಿಗಾನಹಳ್ಳಿ ಶ್ರೀನಿವಾಸ್, ಗಾಯಕರಾದ ಗುಲ್ಜಾರ್, ಅಮಿತ್, ಗಾಯಕಿ ಎನ್.ಎಸ್. ಮಾಲತಿ, ಚಂದ್ರಕಲಾ, ಮಾ. ಚಿ. ನಾಗರಾಜು, ಪರಶಿವಮೂರ್ತಿ, ಪ್ರಶಾಂತ್, ಸರ್ವೇಶ್ ಬಂಟಹಳ್ಳಿ, ಚಿನ್ನಯ್ಯ, ಲಕ್ಷ್ಮಿಪುರ ಶ್ರೀನಿವಾಸ್, ಕರವೇ ನವೀನ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-18-875278468

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.