ಮಾಲೂರು: ಅಯೋಧ್ಯ ವೈಶ್ಯ ನಾಮಧಾರಿ ನಗರ್ತ ಸಮುದಾಯವನ್ನು ಪ್ರವರ್ಗ 2 ಎ ಪಟ್ಟಿಗೆ ಸೇರಿಸಿ ಜಾತಿ ಪ್ರಮಾಣಪತ್ರ ವಿತರಿಸಬೇಕೆಂದು ಒತ್ತಾಯಿಸಿ ಸಮುದಾಯದ ಮುಖಂಡರು ತಹಶೀಲ್ದಾರ್ಗೆ ಮನವಿ ನೀಡಿದರು.

ಅಯೋಧ್ಯ ವೈಶ್ಯ ನಾಮಧಾರಿ ನಗರ್ತ ಸಮುದಾಯಕ್ಕೆ ಜಾತಿ ಪ್ರಮಾಣಪತ್ರ ವಿತರಿಸಬೇಕು ಎಂಬುದು ಹಲವು ವರ್ಷಗಳ ಬೇಡಿಕೆಯಾಗಿದೆ. ಮೊದಲಿನಿಂದಲೂ ಮನವಿ ನೀಡುತ್ತಾ, ಹೋರಾಟ ಮಾಡಿಕೊಂಡು ಬಂದಿದ್ದೇವೆ. ಆದರೆ, ಸ್ಪಂದನೆ ಮಾತ್ರ ಸಿಗುತ್ತಿಲ್ಲ ಎಂದು ಸಮುದಾಯದ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದರು.

ಈ ವೇಳೆ ಸಮುದಾಯದ ಎಸ್.ಎ.ರಾಮಪ್ರಕಾಶ್ ಮಾನಾಡಿ, ನಗರ್ತ, ನಾಮಧಾರಿ ನಗರ್ತ, ನಾಮಧಾರಿ ಎಂಬ ಹೆಸರಿನಲ್ಲಿ ಹಲವು ದಶಕಗಳಿಂದ ಶಾಲಾ ದಾಖಲೆ, ಆದಾಯ ದಾಖಲೆಗಳಲ್ಲಿ ಸೇರಿದಂತೆ ವಿವಿಧ ದಾಖಲೆಗಳಲ್ಲಿ ನಮೂದಿಸಲಾಗಿದೆ. ಈ ಹೆಸರಲ್ಲಿರುವ ವ್ಯತ್ಯಾಸಗಳಿಂದ ಇತ್ತೀಚಿನ ದಿನದಲ್ಲಿ ಗೊಂದಲ ಸೃಷ್ಟಿಯಾಗಿದೆ. ಎಲ್ಲ ಹೆಸರು ಒಂದೇ ಸಮುದಾಯವನ್ನು ಸೂಚಿಸುತ್ತವೆ. ಈ ಜಾತಿಯನ್ನು ಅಧಿಕೃತ ಗೆಜೆಟ್ ಪಟ್ಟಿಯಲ್ಲಿ ಸರ್ಕಾರ ಸೇರಿಸದ ಕಾರಣ ಪ್ರಮಾಣಪತ್ರ ಪಡೆಯಲು ಕಷ್ಟವಾಗುತ್ತಿದೆ ಎಂದರು.

ಪ್ರಸ್ತುತ ದಿನಗಳಲ್ಲಿ ಜಾತಿ ಪ್ರಮಾಣಪತ್ರವು ಕೇವಲ ಒಂದು ದಾಖಲೆ ಅಲ್ಲ. ಅದು ಶಿಕ್ಷಣ, ಸರ್ಕಾರಿ ಯೋಜನೆ ಹಾಗೂ ಸಾಮಾಜಿಕ ಕಲ್ಯಾಣ ಸೌಲಭ್ಯ ಪಡೆಯಲು ಅಗತ್ಯ ದಾಖಲೆ ಎಂದರು.

ಸಾಮಾಜಿಕವಾಗಿ ಈ ಸಮುದಾಯವು ಸ್ಪಷ್ಟವಾಗಿ ಗುರುತಿಸಿಕೊಂಡಿದ್ದರೂ, ಕರ್ನಾಟಕದಲ್ಲಿ ಇನ್ನೂ ಮಾನ್ಯತೆ ಪಡೆಯದೆ ಹಿಂದುಳಿದಿದೆ. ಜಾತಿ ಪ್ರಮಾಣಪತ್ರದ ಕೊರತೆಯಿಂದ ಸರ್ಕಾರಿ ಸೌಲಭ್ಯಗಳು ಮತ್ತು ಕಲ್ಯಾಣ ಯೋಜನೆಗಳಿಂದ ದೂರ ಉಳಿಯುವಂತಾಗಿದೆ ಎಂದರು.

ಜಾತಿ ಪ್ರಮಾಣಪತ್ರದ ಕೊರತೆಯಿಂದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ವಿದ್ಯಾರ್ಥಿನಿಲಯ ಸೌಲಭ್ಯ, ಶುಲ್ಕ ವಿನಾಯಿತಿ ಸೇರಿದಂತೆ ಯಾವುದೇ ಸರ್ಕಾರಿ ನೆರವು ದೊರೆಯುತ್ತಿಲ್ಲ. ಇದರಿಂದ ಎಸ್ಎಸ್ಎಲ್ಸಿ ಮತ್ತು ಪಿಯು ನಂತರ ಅನೇಕ ವಿದ್ಯಾರ್ಥಿಗಳು ವಿದ್ಯಾಭ್ಯಾಸವನ್ನು ಮಧ್ಯದಲ್ಲೇ ನಿಲ್ಲಿಸುವ ಪರಿಸ್ಥಿತಿ ಉಂಟಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ನಗರ್ತ ಸಮುದಾಯವು ಮಾಲೂರು, ಕೋಲಾರ, ಮುಳಬಾಗಿಲು, ಶ್ರೀನಿವಾಸಪುರ, ಕೆಜಿಎಫ್, ಬಂಗಾರಪೇಟೆ ಸೇರಿದಂತೆ ಕೋಲಾರ ಜಿಲ್ಲೆಯಾದ್ಯಂತ ಹಾಗೂ ಚಿಕ್ಕಬಳ್ಳಾಪುರ, ಬೆಂಗಳೂರು, ಮೈಸೂರು ಭಾಗದಲ್ಲಿ ವಾಸಿಸುತ್ತಿದ್ದಾರೆ. ರಾಜ್ಯದಲ್ಲಿ ಸುಮಾರು 1.5 ಲಕ್ಷದಿಂದ 2 ಲಕ್ಷ ಜನಸಂಖ್ಯೆ ಇದ್ದಾರೆಂದು ಅಂದಾಜಿಸಲಾಗಿದೆ ಎಂದು.

ಇದೇ ಸಮುದಾಯದವರು ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ಈಗಾಗಲೇ 2ಎ ವರ್ಗದಲ್ಲಿ ಮಾನ್ಯತೆ ಪಡೆದು ಸೌಲಭ್ಯ ಪಡೆಯುತ್ತಿದ್ದಾರೆ. ಆದರೆ, ಕರ್ನಾಟಕದಲ್ಲಿ ಮಾತ್ರ ಮಾನ್ಯತೆ ಲಭ್ಯವಾಗಿಲ್ಲ ಎಂದು ಕಿಡಿಕಾರಿದರು.

ಈ ಸಮಸ್ಯೆ ಬಗೆಹರಿಸದಿದ್ದರೆ ಮುಂದಿನ ದಿನಗಳಲ್ಲಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ಸಮುದಾಯದವರ ಮನವಿ ಸ್ವೀಕರಿಸಿದ ತಹಶೀಲ್ದಾರ್ ರೂಪ ಮಾತನಾಡಿ, ಈ ವಿಷಯವನ್ನು ಗಂಭೀರವಾಗಿ ಪರಿಗಣಿಸುವುದಾಗಿ ಮತ್ತು ಸರ್ಕಾರಕ್ಕೆ ವರದಿ ಸಲ್ಲಿಸುವ ಭರವಸೆ ನೀಡಿದರು.

ಎಸ್.ಎ.ರಾಮಪ್ರಕಾಶ್, ಜಯಪ್ರಕಾಶ್ ಶೆಟ್ಟಿ, ಶ್ರೀಧರ್, ಅಶೋಕ್ ಬಾಬು, ಆನಂದಪ್ಪ, ವೆಂಕಟರಾಜು ಬಿ.ಕೆ., ಶ್ರೀಧರ್ ಬಿ.ಸಿ., ಮಹೇಶ್ ಎನ್, ನಾರಾಯಣ ಶೆಟ್ಟಿ, ಸಿ.ವಿ.ನಾರಾಯಣ, ಕೆ.ಎಸ್.ಅಮರೇಶ್, ಸಂದೀಪ್, ಮೂರ್ತಿ, ಬಾಬು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-18-1458095246

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.