ಬುಧವಾರ, ಆಗಸ್ಟ್ 10, 2022
26 °C

ಕೋಲಾರ: ಬಾಲಕಿ ಮೇಲೆ ಅತ್ಯಾಚಾರ, ಅಪರಾಧಿಗೆ ಜೀವಾವಧಿ ಶಿಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲಾರ: ‌ಮನೆಗೆಲಸಕ್ಕೆಂದು ತನ್ನ ಮನೆಗೆ ಕರೆದುಕೊಂಡು ಹೋಗಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಖಲೀಲ್‌ ಉಲ್ಲಾ ಎಂಬಾತನಿಗೆ ಇಲ್ಲಿನ ಪೋಕ್ಸೊ ವಿಶೇಷ ನ್ಯಾಯಾಲಯ ಮಂಗಳವಾರ ಜೀವಾವಧಿ ಜೈಲು ಶಿಕ್ಷೆ ವಿಧಿಸಿದೆ.

2015ರ ಮಾರ್ಚ್‌ 4ರಂದು ಮಾಲೂರು ತಾಲ್ಲೂಕಿನ ಟೇಕಲ್‌ ಹೋಬಳಿಯ ಗ್ರಾಮವೊಂದರ 13 ವರ್ಷದ ಬಾಲಕಿಯನ್ನು, ಅದೇ ಗ್ರಾಮದ ನಿವಾಸಿ ಅತ್ಯಾಚಾರ ಎಸಗಿರುವುದು ತನಿಖೆಯಿಂದ ಸಾಬೀತಾಗಿದೆ. 

ಪ್ರಕರಣ ದಾಖಲಿಸಿಕೊಂಡ ಮಾಸ್ತಿ ಠಾಣೆಯ ಪೊಲೀಸರು, ನ್ಯಾಯಾಲಯದಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಬಿ.ಪಿ.ದೇವಮಾನೆ ಅವರು, ಅಪರಾಧಿಗೆ ಜೀವಾವಧಿ ಶಿಕ್ಷೆ ಹಾಗೂ ₹11 ಸಾವಿರ ದಂಡ ವಿಧಿಸಿದ್ದಾರೆ. ಬಾಲಕಿಗೆ ₹ 7 ಲಕ್ಷ ಪರಿಹಾರ ನೀಡುವಂತೆ ಆದೇಶ ಹೊರಡಿಸಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಡಿ.ಲಲಿತಾಕುಮಾರಿ ವಾದ ಮಂಡಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು