ಮಂಗಳವಾರ, ಜನವರಿ 18, 2022
16 °C

ಶ್ರೀನಿವಾಸಪುರ: ಗಂಗಮ್ಮ ದೇವಸ್ಥಾನದಲ್ಲಿ ಪ್ರಸಾದ ಸೇವಿಸಿದ 50 ಜನ ಅಸ್ವಸ್ಥ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶ್ರೀನಿವಾಸಪುರ: ಹೊಸ ವರ್ಷದ ಪ್ರಯುಕ್ತ ತಾಲ್ಲೂಕಿನ ಬೀರಗಾನಹಳ್ಳಿ ಗ್ರಾಮದಲ್ಲಿ ಶನಿವಾರ ಗಂಗಮ್ಮ ದೇವಸ್ಥಾನದಲ್ಲಿ ವಿತರಿಸಲಾದ ಪ್ರಸಾದ ಸೇವಿಸಿ 13 ಮಕ್ಕಳು ಮಕ್ಕಳು ಸೇರಿದಂತೆ 50 ಗ್ರಾಮಸ್ಥರು ಅಸ್ವಸ್ಥಗೊಂಡಿದ್ದಾರೆ.

ದೇವಸ್ಥಾನದಲ್ಲಿ ಮಧ್ಯಾಹ್ನ ವಿತರಿಸಲಾದ ಚಿತ್ರಾನ್ನ ಮತ್ತು ಕೇಸರಿಬಾತ್‌ ಸೇವಿಸಿದ ಗ್ರಾಮಸ್ಥರಿಗೆ ಸಂಜೆ ವಾಂತಿ, ಭೇದಿ ಆರಂಭವಾಗಿದೆ. ತಕ್ಷಣ ಎಲ್ಲರನ್ನೂ ಶ್ರೀವಾಸಪು ತಾಲ್ಲೂಕು ಸರ್ಕಾರಿ ಆಸ್ಪತ್ರೆ ಮತ್ತು ಯಲ್ದೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಸ್ವಸ್ಥರಿಗೆ ಚಿಕಿತ್ಸೆ ನೀಡಲಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಾಲ್ಲೂಕು ವೈದ್ಯಾಧಿಕಾರಿ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು