ಭಾನುವಾರ, ಫೆಬ್ರವರಿ 28, 2021
31 °C
ಕರ್ನಾಟಕ ಒನ್ ಕೇಂದ್ರಕ್ಕೆ ಚಾಲನೆ ನೀಡಿದ ಸಚಿವ ಕೃಷ್ಣಬೈರೇಗ

ಒಂದೇ ಸೂರಿನಡಿ ಹಲವು ಸೇವೆ ಲಭ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ಎಸ್ಸೆಸ್ಸೆಲ್ಸಿ-ಪಿಯುಸಿ ಉತ್ತರ ಪತ್ರಿಕೆ ಪ್ರತಿ, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ವಿದ್ಯುತ್‌ ಬಿಲ್‌ ಪಾವತಿ ಸೇರಿದಂತೆ 16 ಇಲಾಖೆಯ 56 ಹೆಚ್ಚು ಸೇವೆಗಳನ್ನು ಒದಗಿಸುವ ಕರ್ನಾಟಕ ಒನ್ ಕೇಂದ್ರಕ್ಕೆ ಚಾಲನೆ ಸಿಕ್ಕಿದೆ.

ನಗರದ ಮಿನಿ ವಿಧಾನಸೌಧದ ಪಕ್ಕದಲ್ಲಿ ನಿರ್ಮಾಣವಾಗಿರುವ ಕೇಂದ್ರವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಸೋಮವಾರ ಉದ್ಘಾಟಿಸಿದರು. ‘ಸಾರ್ವಜನಿಕರಿಗೆ ಸರ್ಕಾರದ ಯೋಜನೆಗಳು ಸಲುಭವಾಗಿ ತಲುಪಬೇಕು ಎಂಬ ಉದ್ದೇಶದಿಂದ ಕರ್ನಾಟಕ ಒನ್ ಕೇಂದ್ರ ಆರಂಭಿಸಲಾಗಿದ್ದು, ಇದರ ಪ್ರಯೋಜನವನ್ನು ಪ್ರತಿಯೊಬ್ಬರೂ ಪಡೆದುಕೊಳ್ಳಬೇಕು’ ಎಂದು ಮನವಿ ಮಾಡಿದರು.
‘ಪಾಸ್‌ಪೋರ್ಟ್‌ ಆನ್‌ ಲೈನ್‌ ಅರ್ಜಿ ಸಲ್ಲಿಕೆ, ಆಧಾರ್‌ ನೋಂದಣಿ , ಸರ್ಕಾರದ ನಾನಾ ಇಲಾಖೆಗಳಿಗೆ ಅರ್ಜಿ, ಪಡಿತರ ಚೀಟಿ, ವಿಧವಾ ಪ್ರಮಾಣ ಪತ್ರ ಸೇರಿದಂತೆ ವಿವಿಧ ಸೇವೆಗಳು ದೊರೆಯಲಿದೆ. ಈ ಕೇಂದ್ರಕ್ಕೆ ದೊರೆಯುವ ಪ್ರತಿಕ್ರಿಯೆ ಆಧರಿಸಿ, ಮತ್ತೊಂದು ಕೇಂದ್ರ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.

‘ಈಗಾಗಲೇ ಬೆಂಗಳೂರಿನಲ್ಲಿ ಎರಡು ವಾರ್ಡಿಗೆ ಒಂದರಂತೆ ಬೆಂಗಳೂರು ಒನ್ ಕೇಂದ್ರವನ್ನು ಸ್ಥಾಪಿಸಲಾಗಿದ್ದು, ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತಿವಾಗಿದೆ. ಇಲ್ಲಿನ ಸಿಬ್ಬಂದಿ ಬೆಳಿಗ್ಗೆ 8ರಿಂದ ಸಂಜೆ 6ರ ತನಕ ಕಾರ್ಯನಿರ್ವಹಿಸುತ್ತಾರೆ. ಸಾರ್ವಜನಿಕರು ಸರಿಯಾದ ರೀತಿ ಉಪಯೋಗಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಶಾಸಕ ಕೆ. ಶ್ರೀನಿವಾಸಗೌಡ, ಜಿಲ್ಲಾಧಿಕಾರಿ ಜೆ. ಮಂಜುನಾಥ್, ತಹಶೀಲ್ದಾರ್ ಗಾಯಿತ್ರಿ, ನಗರಸಭೆ ಯೋಜನಾ ನಿರ್ದೇಶಕ ರಂಗಸ್ವಾಮಿ, ನಗರಸಭೆ ಆಯುಕ್ತ ಸತ್ಯನಾರಾಯಣ ಇದ್ದರು.

 

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು