ಕೋಲಾರ: ಜಿಲ್ಲೆಯ ಬಹು ದಿನಗಳ ಬೇಡಿಕೆಯಾಗಿದ್ದ ಕೆ.ಸಿ.ವ್ಯಾಲಿ ನೀರನ್ನು ಮೂರನೇ ಹಂತದಲ್ಲಿ ಶುದ್ಧೀಕರಣ ಮಾಡಿ ಹರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಶುಕ್ರವಾರ ವಿಧಾನಸಭೆಯಲ್ಲಿ ಮಂಡಿಸಿದ ಬಜೆಟ್ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ವಿಚಾರ ಪ್ರಸ್ತಾಪಿಸಿದರು. ಆದರೆ, ಈ ಘಟಕಕ್ಕೆ ಯಾವುದೇ ಅನುದಾನ ನಿಗದಿಪಡಿಸಿಲ್ಲ. ಇನ್ನುಳಿದ ಬಹುತೇಕ ನಿರೀಕ್ಷೆಗಳ ಹುಸಿಯಾಗಿವೆ. ಜಿಲ್ಲೆಯ ಜನ ಬಯಸಿದ್ದು ಬೆಟ್ಟದಷ್ಟು ಸಿಕ್ಕಿದ್ದು ಸಾಸಿವೆಯಷ್ಟು ಎಂಬಂತಾಗಿದೆ.

‘ಕೆ.ಸಿ.ವ್ಯಾಲಿ ಹಾಗೂ ವಿವಿಧ ಯೋಜನೆಗಳ ಮೂಲಕ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಿಂದ ಸಂಸ್ಕರಿಸಿದ ತ್ಯಾಜ್ಯ ನೀರನ್ನು ಬೆಂಗಳೂರು ನಗರದ ಸುತ್ತಲಿನ ಅಂತರ್ಜಲ ಕ್ಷೀಣಿಸಿರುವ ಪ್ರದೇಶಗಳಲ್ಲಿ ನೀರು ಹರಿಸುವ ಕಾಮಗಾರಿ ಪೂರ್ಣಗೊಳಿಸಲಾಗಿದೆ. ಸಂಸ್ಕರಿಸಿದ ನೀರಿನ ಗುಣಮಟ್ಟವನ್ನು ಇನ್ನಷ್ಟು ಸುಧಾರಿಸಿ ಕೃಷಿಗೆ ಯೋಗ್ಯವನ್ನಾಗಿ ಮಾಡಲು ಮೂರನೇ ಹಂತದ ಸಂಸ್ಕರಣಾ ಕ್ರಮ ಅಳವಡಿಸಲಾಗುವುದು’ ಎಂದು ಭರವಸೆ ನೀಡಿದರು.

ಇದಲ್ಲದೇ, ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆ ಬಗ್ಗೆಯೂ ಕೆಲವೊಂದು ಘೋಷಣೆ ಮಾಡಿದ್ದಾರೆ. ‘ಕೋಲಾರ ಜಿಲ್ಲೆಯ ಕೆರೆಗಳಿಗೆ ಎತ್ತಿನಹೊಳೆ ಯೋಜನೆಯಡಿ ನೀರು ಪೂರೈಸುವ ಕಾಮಗಾರಿ, ಶ್ರೀನಿವಾಸಪುರ ಮತ್ತು ಕೋಲಾರ ಫೀಡರ್ ಚಾನೆಲ್ಗಳ ಕಾಮಗಾರಿಗಳಿಗೆ ಟೆಂಡರ್ ಕರೆಯಲಾಗಿದೆ. ಶೀಘ್ರದಲ್ಲೇ ಕಾಮಗಾರಿ ಪ್ರಾರಂಭಿಸಿ ಪೂರ್ಣಗೊಳಿಸಲಾಗುವುದು’ ಎಂದರು.

ಕೋಲಾರದಲ್ಲಿ ಇಂಟಿಗ್ರೇಟೆಡ್ ಟೌನ್ಷಿಪ್ಅನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಿಸಲು ಪ್ರತಿಷ್ಠಿತ ಖಾಸಗಿ ಸಂಸ್ಥೆಗಳಿಂದ ಎಕ್ಸ್ಪ್ರೆಷನ್ ಆಫ್ ಇಂಟರೆಸ್ಟ್ ಆಹ್ವಾನಿಸಲಾಗಿದೆ. ಈ ಟೌನ್ಶಿಪ್ ನಗರ ಯೋಜನೆಗೆ, ಹೊಸ ಉದ್ಯಮಗಳಿಗೆ ನೂತನ ಆಯಾಮ ನೀಡಲಿದೆ ಎನ್ನಲಾಗಿದೆ.

ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆಯಡಿ ತೃತೀಯ ಹಂತದ ಆರೈಕೆ ಒದಗಿಸಲು ಕೋಲಾರದಲ್ಲಿ 50 ಹಾಸಿಗೆಗಳ ಕ್ರಿಟಿಕಲ್ ಕೇರ್ ವಿಭಾಗ ಸ್ಥಾಪನೆ ಮಾಡುವುದಾಗಿ ಘೋಷಿಸಿದ್ದಾರೆ. ಸ್ವಯಂ ಚಾಲಿತಾ ಚಾಲನಾ ಪರೀಕ್ಷಾ ಪಥ ನಿರ್ಮಾಣ ಕಾರ್ಯದ ಬಗ್ಗೆಯೂ ಪ್ರಸ್ತಾಪಿಸಿದ್ದಾರೆ.

ಕೋಲಾರ, ಚಿಕ್ಕಬಳ್ಳಾಪುರ ಮತ್ತು ಸುತ್ತಲಿನ ಜಿಲ್ಲೆಗಳ ರೇಷ್ಮೆ ಬೆಳೆಗಾರರಿಗೆ ಅನುಕೂಲವಾಗುವಂತೆ ಶಿಡ್ಲಘಟ್ಟದಲ್ಲಿ ನಬಾರ್ಡ್ ಯೋಜನೆಯಡಿ ₹ 75 ಕೋಟಿ ವೆಚ್ಚದಲ್ಲಿ ಹೈಟೆಕ್ ರೇಷ್ಮೆ ಗೂಡು ಮಾರುಕಟ್ಟೆ ನಿರ್ಮಿಸುವುದಾಗಿ ಮುಖ್ಯಮಂತ್ರಿ ಘೋಷಿಸಿದ್ದಾರೆ.

ಪಕ್ಕದ ಚಿಕ್ಕಬಳ್ಳಾಪುರದಲ್ಲಿ ಅಂತರರಾಷ್ಟ್ರೀಯ ಮಟ್ಟದ ಹೈಟೆಕ್ ಹೂವಿನ ಮಾರುಕಟ್ಟೆ ನಿರ್ಮಿಸಲು ಮುಂದಾಗಿರುವುದು ಕೋಲಾರದ ಹೂ ಬೆಳೆಗಾರರಿಗೂ ಅನುಕೂಲವಾಗಲಿದೆ.

ಇನ್ನುಳಿದಂತೆ ಕೆಲ ಯೋಜನೆಗಳು ಎಲ್ಲಾ ಜಿಲ್ಲೆಗಳಿಗೆ ಸಿಕ್ಕಿದಂತೆ ಕೋಲಾರಕ್ಕೂ ಲಭಿಸಿದ್ದು, ರೈತರು, ಮಹಿಳೆಯರಿಗೆ ಅನುಕೂಲಕರವಾಗಿವೆ. ಸರ್ಕಾರಿ ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳಿಗೆ ದಾಖಲಾಗುವವರಿಗೆ ಶುಲ್ಕ ವಿನಾಯಿತಿ, ಶಾಲಾ–ಕಾಲೇಜುಗಳ ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್ ಸೌಲಭ್ಯ ಹಾಗೂ ರೈತರಿಗೆ ನೀಡಲಾಗುತ್ತಿದ್ದ ₹ 3 ಲಕ್ಷ ಬಡ್ಡಿ ರಹಿತ ಸಾಲ ₹ 5 ಲಕ್ಷ ರೂಪಾಯಿಗೆ ಹೆಚ್ಚಳ ಮಾಡಿರುವುದು ಸಹಾಯವಾಗಲಿದೆ.

ಬಜೆಟ್ನಲ್ಲಿ ಕೋಲಾರ ಜಿಲ್ಲೆಗೆ ಸಿಕ್ಕಿದ್ದೇನು?

ಕೋಲಾರದಲ್ಲಿ 50 ಹಾಸಿಗೆಗಳ ಕ್ರಿಟಿಕಲ್ ಕೇರ್ ವಿಭಾಗ ಸ್ಥಾಪನೆ

ಕೆ.ಸಿ.ವ್ಯಾಲಿ ಮೂರನೇ ಹಂತದ ಶುದ್ಧೀಕರಣ ಘಟಕ ನಿರ್ಮಾಣ

ಎತ್ತಿನಹೊಳೆ–ಶ್ರೀನಿವಾಸಪುರ, ಕೋಲಾರ ಫೀಡರ್ ಚಾನೆಲ್ಗಳ ಕಾಮಗಾರಿ

ಕೋಲಾರದಲ್ಲಿ ಇಂಟಿಗ್ರೇಟೆಡ್ ಟೌನ್ಷಿಪ್

ಸ್ವಯಂ ಚಾಲಿತಾ ಚಾಲನಾ ಪರೀಕ್ಷಾ ಪಥ ನಿರ್ಮಾಣ

ಸಿಗದ ಬೇಡಿಕೆಗಳಾವು?

ಸರ್ಕಾರಿ ವೈದ್ಯಕೀಯ ಕಾಲೇಜು

ಸರ್ಕಾರಿ ಎಂಜಿನಿಯರಿಂಗ್ ಕಾಲೇಜು

ಕೋಲಾರ ಹಾಗೂ ಮಾಲೂರಿಗೆ ರಿಂಗ್ ರಸ್ತೆ

ಟೊಮೆಟೊ, ಮಾವು ಶಿಥಲೀಕರಣ ಹಾಗೂ ಸಂಸ್ಕರಣಾ ಘಟಕ

ಕೋಲಾರ–ಬೆಂಗಳೂರು ನೇರ ರೈಲು ಮಾರ್ಗ ನಿರ್ಮಾಣಕ್ಕೆ ರಾಜ್ಯದ ಅನುದಾನ

ಯರಗೋಳು ಕುಡಿಯುವ ನೀರಿನ ಯೋಜನೆ ಪೂರ್ಣಗೊಳಿಸುವುದು

ಟೊಮೆಟೊಗೆ ಪ್ರತ್ಯೇಕ ಮಾರುಕಟ್ಟೆಗೆ ಅನುದಾನ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.