ಮಂಗಳವಾರ, ಮಾರ್ಚ್ 28, 2023
30 °C

ಕೋಲಾರದಲ್ಲಿ ಮೆಡಿಕಲ್‌ಕಾಲೇಜು ಸ್ಥಾಪನೆಗೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಮಂಜೂರು ಮಾಡಬೇಕು ಮತ್ತು ಸರ್ಕಾರಿ ಆಸ್ಪತ್ರೆಗಳ ಅವ್ಯವಸ್ಥೆ ಸರಿಪಡಿಸುವಂತೆ ಒತ್ತಾಯಿಸಿ ರೈತ ಸಂಘ ಸದಸ್ಯರು ತಾಲ್ಲೂಕಿನ ರೋಜರಪಲ್ಲಿ ಕ್ರಾಸ್ ಬಳಿ ಬುಧವಾರ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರಿಗೆ ಮನವಿ ಸಲ್ಲಿಸಿದರು.

ಬಯಲುಸೀಮೆಯ ಜಿಲ್ಲೆಯಲ್ಲಿ ಖಾಸಗಿ ಮೆಡಿಕಲ್ ಕಾಲೇಜು ಇದೆ. ಆದರೆ ಸರ್ಕಾರಿ ಮೆಡಿಕಲ್ ಕಾಲೇಜು ಇಲ್ಲ. ಅನೇಕ ಬಾರಿ ಈ ವಿಚಾರವು ಸರ್ಕಾರದ ಮಟ್ಟದಲ್ಲಿ ಚರ್ಚೆಯಾಗಿದ್ದರೂ ಈವರೆಗೆ ಯಾವುದೇ ರೀತಿಯಲ್ಲಿಯೂ ಪ್ರಯೋಜನವಾಗಿಲ್ಲ. ಕೂಡಲೇ ಸರ್ಕಾರಿ ಮೆಡಿಕಲ್ ಕಾಲೇಜು ಪ್ರಾರಂಭಿಸಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.

ನಕಲಿ ಕ್ಲಿನಿಕ್‍ಗಳ ಹಾವಳಿ ಮಿತಿ ಮೀರಿದೆ. ಜಿಲ್ಲೆಯ ಮುಳಬಾಗಿಲು, ಕೆಜಿಎಫ್ ತಾಲ್ಲೂಕುಗಳ ಗಡಿಗಳಲ್ಲಿ ಆಂಧ್ರದ ವೈದ್ಯರ ಹಾವಳಿ ಹೆಚ್ಚಾಗಿದ್ದು, ಗ್ರಾಮೀಣ ಜನರ ಆರೋಗ್ಯದ ಜತೆ ಚೆಲ್ಲಾಟವಾಡುತ್ತಿದ್ದಾರೆ. ಆದರೂ ಅಧಿಕಾರಿಗಳು ಕಣ್ಣು ಮುಚ್ಚಿ ಕುಳಿತಿದ್ದು, ಕೂಡಲೇ ನಕಲಿ ಕ್ಲಿನಿಕ್‍ಗಳಿಗೆ ಕಡಿವಾಣ ಹಾಕಲು ವಿಶೇಷ ತಂಡ ರಚನೆ ಮಾಡಬೇಕೆಂದು ಕೋರಲಾಯಿತು.

ಮನವಿ ಸ್ವೀಕರಿಸಿ ಮಾತನಾಡಿದ ಆರೋಗ್ಯ ಸಚಿವರು, ಮೆಡಿಕಲ್ ಕಾಲೇಜು ಆರಂಭ ಸಂಬಂಧ ಶೀಘ್ರ ಕ್ರಮಕೈಗೊಳ್ಳಲಾಗುವುದು ಹಾಗೂ ಹುದ್ದೆಗಳ ಭರ್ತಿಗೂ ಆದ್ಯತೆ ನೀಡಲಾಗುವುದಾಗಿ ಭರವಸೆ ನೀಡಿದರು.

ಮುಖಂಡರಾದ ಎ.ನಳಿನಿಗೌಡ, ನಾಗರಾಜಗೌಡ, ಆಂಜಿನಪ್ಪ, ಲೋಕೇಶ್‌, ರವಿಕುಮಾರ್‌ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.