ಶುಕ್ರವಾರ, 23 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಳಬಾಗಿಲು | ರಾಮನ ಫ್ಲೆಕ್ಸ್ ಹರಿದ ಕಿಡಿಗೇಡಿಗಳು: ಆಕ್ರೋಶ; ಇಬ್ಬರ ಬಂಧನ

Published 17 ಜನವರಿ 2024, 7:27 IST
Last Updated 17 ಜನವರಿ 2024, 7:27 IST
ಅಕ್ಷರ ಗಾತ್ರ

ಮುಳಬಾಗಿಲು (ಕೋಲಾರ): ನಗರದಲ್ಲಿ ಅಳವಡಿಸಿದ್ದ ಶ್ರೀರಾಮನ ಫ್ಲೆಕ್ಸ್ ಅನ್ನು ಕೆಲ ಕೆಡಿಗೇಡಿಗಳು ಬ್ಲೇಡ್ ನಿಂದ ಕುಯ್ದಿದ್ದು, ಬಿಜೆಪಿ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿ.ಸಿ.ಟಿ.ವಿ ಕ್ಯಾಮೆರಾ ದೃಶ್ಯಾವಳಿ ಆಧರಿಸಿ ಮುಳಬಾಗಿಲು ಪೊಲೀಸರು ಬುಧವಾರ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ. ತನಿಖೆ ನಡೆಸುತ್ತಿದ್ದು, ಬಂಧಿತ ವ್ಯಕ್ತಿಗಳ ಹೆಸರನ್ನು ಇನ್ನೂ ಬಹಿರಂಗಪಡಿಸಿಲ್ಲ. ಸ್ಥಳದಲ್ಲಿ ಬಿಗುವಿನ ವಾತಾವರಣ ನೆಲೆಸಿದ್ದು ಪೊಲೀಸರನ್ನು ನಿಯೋಜಿಸಲಾಗಿದೆ.

'ಯಾರು ಫ್ಲೆಕ್ಸ್‌ ಹರಿದು ಹಾಕಿದ್ದರೋ‌ ಅವರೇ ಸಾರ್ವಜನಿಕವಾಗಿ ಕ್ಷಮೆ ಕೇಳಿ ಮತ್ತೆ ಫ್ಲೆಕ್ಸ್ ಅಳವಡಿಸಬೇಕು. ಕಿಡಿಗೇಡಿಗಳನ್ನು ಗಡೀಪಾರು ಮಾಡಬೇಕು' ಎಂದು ಸಂಸದ ಎಸ್.ಮುನಿಸ್ವಾಮಿ ಆಗ್ರಹಿಸಿದರು.

ಅಯೋಧ್ಯೆಯ ರಾಮಮಂದಿರದಲ್ಲಿ ಜ.22ರಂದು ನಡೆಯಲಿರುವ ರಾಮಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಬಜರಂಗದಳ, ವಿ ಎಚ್ ಪಿ ಸೇರಿದಂತೆ ವಿವಿಧ ಸಂಘಟನೆಗಳು ನಗರದ ವಿವಿಧೆಡೆ ಕಟೌಟ್ ಹಾಗೂ ಫ್ಲೆಕ್ಸ್ ಅಳವಡಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT