ಬಂಗಾರಪೇಟೆ: ಪಟ್ಟಣದ ದಲಿತ ಸಮಾಜ ಸೇನೆಯ ಸಂಸ್ಥಾಪಕ ಅಧ್ಯಕ್ಷ ಸೂಲಿಕುಂಟೆ ಆನಂದ್ ಅವರ ಹುಟ್ಟುಹಬ್ಬದ ಅಂಗವಾಗಿ ಅಳವಡಿಸಿದ್ದ ಬ್ಯಾನರ್ ಅನ್ನು ಕುವೆಂಪು ವೃತ್ತದ ಬಳಿ ಸೋಮವಾರ ಮುಂಜಾನೆ ದುಷ್ಕರ್ಮಿಗಳು ಹರಿದು ಹಾಕಿದ್ದಾರೆ. ಈ ಸಂಬಂಧ ಪೊಲೀಸರಿಗೆ ದೂರು ನೀಡಲಾಗಿದೆ.

ಬ್ಯಾನರ್ ಕಿತ್ತುಹಾಕುತ್ತಿರುವ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸ್ಥಳಕ್ಕೆ ಸರ್ಕಲ್ ಇನ್ಸ್ಪೆಕ್ಟರ್ ನಂಜಪ್ಪ ಭೇಟಿ ನೀಡಿ ಮಾಹಿತಿ ಪಡೆದರು.ಪಟ್ಟಣದಲ್ಲಿ ಶಾಂತಿ ಕದಡುವ ಉದ್ದೇಶದಿಂದ ಕೆಲ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ. 2014ರಲ್ಲಿ ಇದೇ ದುಷ್ಕರ್ಮಿಗಳು ಇಂತಹ ಕಿಡಿಗೇಡಿ ಕೃತ್ಯವನ್ನು ಪಟ್ಟಣದಲ್ಲಿ ಮಾಡಿದ್ದರು. ಈ ಸಂಬಂಧವಾಗಿ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ದೂರು ನೀಡಿರುವುದಾಗಿ ಸೂಲಿಕುಂಟೆ ಆನಂದ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.